Site icon Vistara News

Weather Report: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌; ಇನ್ನೆರಡು ದಿನ ವ್ಯಾಪಕ ಮಳೆ

Rain

Rain

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (weather report) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಶಿವಮೊಗ್ಗ ಮತ್ತು ತುಮಕೂರಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಅಬ್ಬರದ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಇರಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆಯನ್ನು ಮಾಡಲಾಗಿದೆ. ಬೆಂಗಳೂರಿನ ಮಹಾದೇವಪುರ ವಲಯದ ಕಾಡುಗೋಡಿ, ವರ್ತೂರು ಸುತ್ತಮುತ್ತ ಪ್ರದೇಶ ಹಾಗೂ ಯಲಹಂಕ ವಲಯಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಈ ಸಮಯದಲ್ಲಿ ಮರದಡಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಮನೆಯಿಂದ ಹೊರಗೆ ಇರುವವರು ಆದಷ್ಟು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಲಾಗಿದೆ. ಗಾಳಿ ಮಳೆ ಇರುವಾಗ ವಾಹನವನ್ನು ಚಲಾಯಿಸದಂತೆ ಸಲಹೆ ನೀಡಲಾಗಿದೆ.

ಗುಡುಗು, ಮಿಂಚಿನ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳೇನು?

ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಸಮಯದಲ್ಲಿ ಯಾವೆಲ್ಲ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕೆಂಬ ಮಾಹಿತಿ ಇಲ್ಲಿದೆ.

ಗುಡುಗು-ಸಿಡಿಲು ಇದ್ದಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ

ಇದನ್ನೂ ಓದಿ: Bangalore Rain: ಬೆಂಗಳೂರಿನ ಮಹಾಮಳೆಗೆ ಕೊಚ್ಚಿ ಹೋದ ಚಿನ್ನದಂಗಡಿ; 2 ಕೋಟಿ ರೂ. ಮೌಲ್ಯದಷ್ಟು ನಷ್ಟ

ಹಾಸನದಲ್ಲಿ ಅತ್ಯಧಿಕ ಮಳೆ ದಾಖಲು

ಭಾನುವಾರ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಹಾಸನದಲ್ಲಿ 9 ಸೆಂ.ಮೀ ಮಳೆಯಾಗಿದೆ. ಶಿವಮೊಗ್ಗದ ತ್ಯಾಗರ್ತಿಯಲ್ಲಿ 7 ಸೆಂ.ಮೀ, ಚಿಕ್ಕಮಗಳೂರಿನ ಯಗಟಿಯಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡದ ಸುಳ್ಯ ಹಾಗೂ ದಾವಣಗೆರೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version