Site icon Vistara News

Weather Reporter | ನಾಳೆಯೂ ಇರಲಿದೆ ಜಿಟಿ ಜಿಟಿ ಮಳೆ; ರಾಜ್ಯದ ಎಲ್ಲೆಲ್ಲಿದೆ ವರುಣನ ಸಿಂಚನ?

rain

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆ ಆಗುತ್ತಿದ್ದು, ಇನ್ನೆರಡು ದಿನಗಳ ಕಾಲ ತುಂತುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Reporter) ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ಮೈಸೂರು ಸೇರಿ ರಾಮನಗರದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಕರಾವಳಿಯ ಕೆಲವು ಕಡೆಗಳಲ್ಲಿ ಅಲ್ಪ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋನೆ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದ್ದು, ಗರಿಷ್ಠ ಉಷ್ಣಾಂಶ 23 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬುಧವಾರ ಲೋಂಡಾ 4, ಮಾಲೂರು, ರಾಮನಗರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದ್ದರೆ, ಹೊಸಕೋಟೆ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಕನಕಪುರದಲ್ಲಿ ತಲಾ 2 ಹಾಗೂ ಚಿಕ್ಕಮಗಳೂರು, ಮೈಸೂರು, ಟಿ.ನರಸೀಪುರ, ಕೃಷ್ಣರಾಜಸಾಗರ ಅಣೆಕಟ್ಟು, ಶ್ರೀರಂಗಪಟ್ಟಣ, ಮಳವಳ್ಳಿ, ತೊಂಡೇಭಾವಿ, ಗೌರಿಬಿದನೂರು ಸೇರಿ ಗುಬ್ಬಿ, ಮಧುಗಿರಿ, ತುಮಕೂರು, ಚನ್ನಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ | Kiccha Sudeep | ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್‌; ಜಿಲ್ಲೆಗೆ ಒಂದರಂತೆ 31 ಗೋವುಗಳ ದತ್ತು

Exit mobile version