ಹಾವೇರಿ : ಜೂನ್ 13ಕ್ಕೆ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಗಧಿಯಾಗಿದ್ದು, ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಾದ್ಯಂತ ಜೂನ್ 17 ರವರೆಗೆ ನೀತಿಸಂಹಿತೆ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ 3,263 ಪುರುಷ 1,363 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 29 ಮತಗಟ್ಟೆಗಳನ್ನು ತೆರೆಯಲಾಗಿದೆ. ಅಭ್ಯರ್ಥಿ ಸೇರಿ ಐದು ಜನರಿಗೆ ಮಾತ್ರ ಪ್ರಚಾರಕ್ಕೆ ಅವಕಾಶ ಇರುವುದಾಗಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರು ಮಾಹಿತಿ ನೀಡಿದ್ದಾರೆ.
ಮೇ 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 13 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಜೂನ್ 15 ರಂದು ಮತ ಎಣಿಕೆ ನಡೆಯುತ್ತದೆ. ಧಾರವಾಡ, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳನ್ನೊಳಗೊಂಡು ಈ ಚುನಾವಣೆ ನಡೆಯಲಿದೆ.