Site icon Vistara News

Karnataka Election: ಪ್ರಲ್ಹಾದ್‌ ಜೋಶಿ, ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರ ಮತಸಂಭ್ರಮ; ಇಲ್ಲಿವೆ ಫೋಟೊಗಳು

Where did Pralhad Joshi, Sadananda Gowda vote, here are photos

Where did Pralhad Joshi, Sadananda Gowda vote, here are photos

ಬೆಂಗಳೂರು: ರಾಜ್ಯಾದ್ಯಂತ ಜನ ವಿಧಾನಸಭೆ ಚುನಾವಣೆಯನ್ನು ಹಬ್ಬದಂತೆ ಆಚರಿಸುತ್ತಿದ್ದು, ಮತಗಟ್ಟೆಗಳಿಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಹಾಗೆಯೇ, ರಾಜಕಾರಣಿಗಳು ಕೂಡ ಕುಟುಂಬ ಸಮೇತರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಂಸದರಾದ ಡಿ.ವಿ.ಸದಾನಂದಗೌಡ, ತೇಜಸ್ವಿ ಸೂರ್ಯ ಸೇರಿ ಹಲವರು ಮತ ಹಾಕಿದ್ದಾರೆ. ಕೆಲ ರಾಜಕಾರಣಿಗಳು ಮತದಾನ ಮಾಡಿದ ಫೋಟೊಗಳು ಇಲ್ಲಿವೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯಲ್ಲಿ ಕುಟುಂಬದವರೊಂದಿಗೆ ಮತ ಚಲಾವಣೆ ಮಾಡಿದರು.
ಸಚಿವ ಡಾ.ಅಶ್ವತ್ಥನಾರಾಯಣ್ ಅವರು ಆರ್‌ವಿಎಂ ಎಕ್ಸ್‌ಟೆನ್ಶನ್‌ನಲ್ಲಿ ಮತದಾನ ಮಾಡಿದರು
ಸಂಸದರೂ ಆದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿಜಯನಗರದಲ್ಲಿ ಮತ ಚಲಾಯಿಸಿದರು
ಸಚಿವ ಬಿ.ಸಿ.ನಾಗೇಶ್ ಅವರು ತಿಪಟೂರಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮತಗಟ್ಟೆಗೆ ಕುಟುಂಬ ಸಮೇತವಾಗಿ ತೆರಳಿ ಹಕ್ಕು ಚಲಾಯಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಜಯನಗರದಲ್ಲಿ ಮತದಾನ ಮಾಡಿದರು
ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಪತ್ನಿ ಶೀಲಾ ಖೂಬಾ ಅವರು ಜಿಲ್ಲೆಯ ಔರಾದ್‌ನಲ್ಲಿ ಮತ ಚಲಾಯಿಸಿದರು.
ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಶಿಗ್ಗಾವಿ ಸರ್ಕಾರಿ ಶಾಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿದರು.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಸರ್ಕಾರಿ ಗೋಪಾಲ್ ರಾಮ್ ನಾರಾಯಣ್ ಪ್ರಾಥಮಿಕ ಶಾಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ ಚಲಾಯಿಸಿದರು
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರು ಬೆಂಗಳೂರಿನ ಶಿವಾಜಿನಗರದಲ್ಲಿ ಮತ ಚಲಾಯಿಸಿದರು.
ಕೋಲಾರದಲ್ಲಿ ವಿಧಾನ ಪರಿಷತ್‌ ಸದಸ್ಯ ಚಲವಾದಿ ನಾರಾಯಣಸ್ವಾಮಿ ಅವರು ಮತ ಹಾಕಿದರು.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಮತದಾನದ ಹಕ್ಕು ಚಲಾಯಿಸಿದರು.
ಬೆಂಗಳೂರಿನ ರಾಜಾಜಿನಗರದಲ್ಲಿ ಸುರೇಶ್‌ ಕುಮಾರ್‌ ಅವರ ತಾಯಿ ಸುಶೀಲಮ್ಮ ಅವರು 94ನೇ ವಯಸ್ಸಿನಲ್ಲೂ ಉತ್ಸಾಹದಿಂದ ಮತ ಹಾಕಿದರು.
ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಪೆರಸಂದ್ರದಲ್ಲಿ ಸಚಿವ ಡಾ.ಕೆ.ಸುಧಾಕರ್‌ ಅವರು ಕುಟುಂಬ ಸಮೇತರಾಗಿ ತೆರಳಿ ಮತ ಹಾಕಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ ಮತದಾನ ಮಾಡಿದರು

ಇದನ್ನೂ ಓದಿ: Karnataka Election: ಮತದಾನ ಮಾಡಿದ ರಾಜ್ಯದ ಪ್ರಮುಖ ಸ್ವಾಮೀಜಿಗಳು, ಇಲ್ಲಿವೆ ಫೋಟೊಗಳು

Exit mobile version