Site icon Vistara News

karnataka budget 2023 : ಯಾವ ನೀರಾವರಿ ಯೋಜನೆಗಳಿಗೆ ಆದ್ಯತೆ? ಎಷ್ಟು ಅನುದಾನ ಪ್ರಕಟ?

Vistara Impact Notice to FIR against desilters in KRS backwaters

KRS dam

ಬೆಂಗಳೂರು: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹರ್ ಖೇತ್ ಕೊ ಪಾನಿ (PMKSY-HKKP) ಅಡಿ ಬರ ಪೀಡಿತ ಜಿಲ್ಲೆಗಳಾದ ಯಾದಗಿರಿ ಮತ್ತು ಕಲಬುರಗಿಯಲ್ಲಿ ಅಂತರ್ಜಲವನ್ನು ವೃದ್ಧಿಗೊಳಿಸಲು 443 ಕೋಟಿ ರೂ. ಮೊತ್ತದಲ್ಲಿ 138 ಮೇಲೆ ಸಣ್ಣ ನೀರಾವರಿ (Surface Minor Irrigation) ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ನಲ್ಲಿ (Header – karnataka budget 2023) ಹೇಳಿದ್ದಾರೆ.
ನೀರಾವರಿಗೆ ಸಂಬಂಧಿಸಿ ಅವರ ಘೋಷಣೆಗಳು ಹೀಗಿವೆ.

ಸಮುದ್ರಕ್ಕೆ ಸೇರುವ ನೀರನ್ನು ತಡೆ ಹಿಡಿದು ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಉಪಯೋಗಿಸಲು ರೂಪಿಸಲಾಗಿರುವ ಪಶ್ಚಿಮವಾಹಿನಿ ಯೋಜನೆಯ ಹಂತದಡಿ 2ನೇ ಅನುಮೋದನೆಯಾಗಿರುವ 378 ಕೋಟಿ ರೂ. ಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು.

ತ್ಯಾಜ್ಯ ನೀರು ಸಂಸ್ಕರಣೆ ಸುಧಾರಣೆ

#image_title

ಕೆ.ಸಿ.ವ್ಯಾಲಿ ಮತ್ತು ವಿವಿಧ ಯೋಜನೆಗಳ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬೆಂಗಳೂರು ನಗರದ ಸುತ್ತಮುತ್ತಲಿನ ಅಂತರ್ಜಲ ಕ್ಷೀಣಿಸಿರುವ ಪ್ರದೇಶಗಳಲ್ಲಿ ನೀರು ಹರಿಸುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಸಂಸ್ಕರಿಸಿದ ನೀರಿನ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಿ ಕೃಷಿಗೆ ಯೋಗ್ಯವನ್ನಾಗಿ ಮಾಡಲು Tertiary ಮಾದರಿಯ ಸಂಸ್ಕರಣಾ ಕ್ರಮಗಳನ್ನು ಅಳವಡಿಸಲಾಗುವುದು.

ನೀರಾವರಿ ಸಾಮರ್ಥ್ಯ ಹೆಚ್ಚಳ

ಜುಲೈ 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ನೀರಾವರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲಾಗಿದೆ. ಅವಧಿಯಲ್ಲಿ ಒಟ್ಟಾರೆಯಾಗಿ ಸುಮಾರು 1.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.

ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಹಲವಾರು ವರ್ಷಗಳಿಂದ ನೆನೆಗುದಿಯಲ್ಲಿದ್ದ ಭೂಸ್ವಾಧೀನಕ್ಕೆ ಏಕರೂಪ ದರ ನಿಗದಿಪಡಿಸುವ ಸಂಬಂಧದಲ್ಲಿ ಒಪ್ಪಂದದ ಐತೀರ್ಪನ್ನು ರಚಿಸುವ ಕುರಿತು ಪ್ರಸಕ್ತ ಸರ್ಕಾರವು ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಇದರಿಂದ ರೈತರು ಹಾಗೂ ಭೂಮಾಲೀಕರಿಗೆ ಶೀಘ್ರ ಭೂ ಪರಿಹಾರ ದೊರಕಲಿದ್ದು, ಯೋಜನೆಯ ತೀವ್ರ ಪ್ರಗತಿಗೆ ನಾಂದಿಯಾಗಲಿದೆ. ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ಒದಗಿಸಲಾಗುವುದು.

ನೀರಾವರಿಗೆ ಭರಪೂರ ಅನುದಾನ

ನೀರಾವರಿಗೆ ಆದ್ಯತೆ ದೃಷ್ಟಿಯಿಂದ ನಮ್ಮ ಸರ್ಕಾರವು 2022-23ನೇ ಸಾಲಿನಲ್ಲಿ ಒಟ್ಟು 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಯ ವತಿಯಿಂದ ಸುಮಾರು 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯವನ್ನು ಸೃಜಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

ಸಸಾಲಟ್ಟಿ-ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು.

ಇದನ್ನೂ ಓದಿ : karnataka budget 2023 : ಕ್ರೀಡಾಸಕ್ತರ ಪಾಲಿಗೂ ಸೂಪರ್ ಬಜೆಟ್​ ಕೊಟ್ಟ ಸಿಎಂ ಬೊಮ್ಮಾಯಿ

ತಿರುವು ಯೋಜನೆಗಳಿಗೆ ಮಹದಾಯಿ ನ್ಯಾಯಾಧಿಕರಣದಿಂದ ಹಂಚಿಕೆಯಾದ 3.90 TMC ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ (DPR) ಕಳಸಾ ಮತ್ತು ಬಂಡೂರಾ ಪ್ರಸಕ್ತ ಸರ್ಕಾರದ ಸತತ ಪ್ರಯತ್ನಗಳಿಂದಾಗಿ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಯೋಜನೆಯ ಕಾಮಗಾರಿಗಳನ್ನು ಪ್ರಾರಂಭಿಸಲು 1,000 ಕೋಟಿ ರೂ. ಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಭದ್ರಾ ಮೇಲ್ದಂಡೆ ಯೋಜನೆಗೆ ಆದ್ಯತೆ

#image_title

ಕೇಂದ್ರ ಸರ್ಕಾರವು 2023-24ನೇ ಸಾಲಿನ ಆಯವ್ಯಯದಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸರ್ಕಾರದ ತೀವ್ರ ಪ್ರಯತ್ನದ ಫಲವಾಗಿ ‘ರಾಷ್ಟ್ರೀಯ ಯೋಜನೆ’ ಮಾನ್ಯತೆ ದೊರೆಯುವ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರವು 5,300 ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ. ಇದಕ್ಕಾಗಿ ರಾಜ್ಯದ ಜನತೆಯ ಪರವಾಗಿ ಸನ್ಮಾನ್ಯ ಪ್ರಧಾನ ಮಂತ್ರಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಯೋಜನೆಯ ತೀವ್ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು ಬದ್ಧವಾಗಿದೆ.

ಎತ್ತಿನಹೊಳೆ ಯೋಜನೆಯ ಕತೆ ಏನು?

ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆವರೆಗಿನ ಗುರುತ್ವ ಕಾಲುವೆ ಮತ್ತು ಫೀಡರ್ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, 2023-24ರಲ್ಲಿ ನೀರು ಪೂರೈಸಲು ಉದ್ದೇಶಿಸಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರನ್ನು ಪೂರೈಸುವ ಕಾಮಗಾರಿಗಳ ಹಾಗೂ ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್‌ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು.

ಮೇಕೆದಾಟು ಯೋಜನೆಯತ್ತ ಗಮನ

#image_title

ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ರಾಜ್ಯವು ದಾವೆ ಹೂಡಿದ್ದು, ಇದನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು. ಅಗತ್ಯ ಅನುದಾನವನ್ನು ಕಲ್ಪಿಸಲಾಗುವುದು.

ಈ ಯೋಜನೆಗೆ ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಯೋಜನೆಯು ಅಂತರ್‌ ರಾಜ್ಯ ಯೋಜನೆಯಾಗಿದ್ದು, ಈಗಾಗಲೇ ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಭೆ ನಡೆಸಲಾಗಿದೆ.

Exit mobile version