Site icon Vistara News

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

HD Kumaraswamy

Who Is HD Kumaraswamy, BJP Karnataka Tally Likely In Narendra Modi Cabinet

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Deve Gowda) ಅವರಂತೆ ಮಣ್ಣಿನ ಮಗ ಎನಿಸಿಕೊಂಡಿರುವ, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸಿರುವ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅರ್ಥಾತ್‌ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರೀಗ ನರೇಂದ್ರ ಮೋದಿ (Narendra Modi) ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಹರದನಹಳ್ಳಿಯಲ್ಲಿ ಜನಿಸಿ, ಸಿನಿಮಾ ನಿರ್ಮಾಪಕರಾಗಿ, ಶಾಸಕರಾಗಿ, ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಅವರೀಗ ಕೇಂದ್ರ ಸಚಿವರಾಗುವ ಮೂಲಕ ರಾಜಕೀಯ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಇದೇ ಹೊತ್ತಿನಲ್ಲಿ ಕುಮಾರಸ್ವಾಮಿ ಅವರ ರಾಜಕೀಯ ಜೀವನದ (HD Kumaraswamy Profile) ಮೇಲೊಂದು ಇಣುಕು ನೋಟ ಇಲ್ಲಿದೆ.

ಕುಮಾರಸ್ವಾಮಿ ರಾಜಕೀಯ ಏಳಿಗೆ

1996

ಎಚ್‌.ಡಿ.ಕುಮಾರಸ್ವಾಮಿ ಅವರು ಗೆಲುವಿನೊಂದಿಗೆ ರಾಜಕೀಯ ಪ್ರವೇಶಿಸಿದರು. 1996ರಲ್ಲಿ ಕುಮಾರಸ್ವಾಮಿ ಅವರು ಕನಕಪುರ ಲೋಕಸಭೆ ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

1998

1998ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಎಂ.ವಿ.ಚಂದ್ರಶೇಖರ ಮೂರ್ತಿ ಅವರ ವಿರುದ್ಧ ಪರಾಜಯಗೊಂಡರು. ಇಲ್ಲಿ ಠೇವಣಿ ಕೂಡ ಸಿಕ್ಕಿರಲಿಲ್ಲ.

1999

1999ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿದ ಕುಮಾರಸ್ವಾಮಿ, ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಸೋಲುಂಡರು.

2004

2004ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಚುನಾವಣೆ ಫಲಿತಾಂಶ ಪ್ರಕಟವಾದಾಗ ಯಾವುದೇ ಪಕ್ಷಕ್ಕೆ ಬಹುಮತ ಸಿಗಲಿಲ್ಲ. ಈ ವೇಳೆ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಜತೆ ಕೈಜೋಡಿಸಿ ಸರ್ಕಾರ ರಚಿಸಲು ಕಾರಣರಾದರು. ಇದು ಅವರ ರಾಜಕೀಯ ಜೀವನಕ್ಕೆ ಮಹತ್ವದ ತಿರುವು ನೀಡಿತು.

2006

ರಾಜ್ಯದಲ್ಲಿ ರಾಜಕೀಯ ಸನ್ನಿವೇಶಗಳು ಬದಲಾದವು. 2006ರಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸೇರಿ ತಲಾ 20 ತಿಂಗಳು ಅಧಿಕಾರ ನಡೆಸುವ ಒಪ್ಪಂದಕ್ಕೆ ಬಂದವು. ಅದರಂತೆ, 2006ರ ಫೆಬ್ರವರಿ 4ರಂದು ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಲು ನಿರಾಕರಿಸಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

2009

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು.

2013

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ 40 ಕ್ಷೇತ್ರಗಳಲ್ಲಿ ಗೆಲುವು, ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಕುಮಾರಸ್ವಾಮಿ.

2014

ಇದೇ ವರ್ಷದ ನವೆಂಬರ್‌ನಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮರುನೇಮಕಗೊಂಡ ಎಚ್‌ಡಿಕೆ.

2018

ವಿಧಾನಸಭೆ ಚುನಾವಣೆಯಲ್ಲಿ ಯಾವೊಂದು ಪಕ್ಷಕ್ಕೂ ಸಿಗದ ಬಹುಮತ. ಮೂರನೇ ಬೃಹತ್‌ ಪಕ್ಷವಾದರೂ ಕಾಂಗ್ರೆಸ್‌ ಜತೆಗೂ ಸರ್ಕಾರ ರಚಿಸಿದ ಕುಮಾರಸ್ವಾಮಿ, 2018ರ ಮೇ 23ರಂದು ಎರಡನೇ ಬಾರಿ ಸಿಎಂ ಆಗಿ ಪದಗ್ರಹಣ.

2019

2019ರ ಜುಲೈ 23ರಂದು ಸಮ್ಮಿಶ್ರ ಸರ್ಕಾರ ಪತನ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ.

2023

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ವಿರುದ್ಧ 20 ಸಾವಿರ ಮತಗಳ ಅಂತರದಲ್ಲಿ ಗೆದ್ದ ಎಚ್‌ಡಿಕೆ.

2024

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್-ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕುಮಾರಸ್ವಾಮಿ ಅವರಿಗೆ ಭರ್ಜರಿ ಗೆಲುವು. ಮೋದಿ ಸಚಿವ ಸಂಪುಟಕ್ಕೆ ಸೇರ್ಪಡೆ.

ಇದನ್ನೂ ಓದಿ: VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Exit mobile version