Karnataka Election 2023: ಬಿಜೆಪಿಗೆ ನಮ್ಮ ಸಪೋರ್ಟ್‌ ಎಂದು ಹೇಳಿದ್ದು ಯಾರು; ಪ್ರಲ್ಹಾದ್‌ ಜೋಶಿಗೆ ಎಚ್‌ಡಿಕೆ ತಿರುಗೇಟು - Vistara News

ಕರ್ನಾಟಕ

Karnataka Election 2023: ಬಿಜೆಪಿಗೆ ನಮ್ಮ ಸಪೋರ್ಟ್‌ ಎಂದು ಹೇಳಿದ್ದು ಯಾರು; ಪ್ರಲ್ಹಾದ್‌ ಜೋಶಿಗೆ ಎಚ್‌ಡಿಕೆ ತಿರುಗೇಟು

Karnataka Election 2023: ಬಿಜೆಪಿಗೆ ಜೆಡಿಎಸ್‌ ಬೆಂಬಲ ಬೇಕಾಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನೀಡಿದ ಹೇಳಿಕೆಗೆ ಎಚ್‌.ಡಿ.ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದ್ದಾರೆ. ನಾವು ಯಾರಿಗೂ ಬೆಂಬಲ ಘೋಷಿಸಿಲ್ಲ, ಅರ್ಜಿ ಹಾಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

VISTARANEWS.COM


on

Who Told That We Support BJP, HD Kumaraswamy on Pralhad Joshi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: “ನಮಗೆ ಜೆಡಿಎಸ್‌ ಸಪೋರ್ಟ್‌ ಬೇಡ” ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನೀಡಿದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ (Karnataka Election 2023) ಅವರು, ಇದೇ ವೇಳೆ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು. “ಬಿಜೆಪಿಗೆ ನಾವು ಸಪೋರ್ಟ್‌ ಮಾಡುತ್ತೇವೆ ಎಂದು ಹೇಳಿದ್ದು ಯಾರು” ಎಂದು ಪ್ರಶ್ನಿಸಿದರು.

“ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ನಾವು ಹೇಳಿದ್ದೇವಾ? ಅರ್ಜಿ ಹಾಕಿಕೊಂಡು ಹೋಗಿದ್ದೇವಾ? ನಾವು ಅವರಿಗೆ ಬೆಂಬಲ ನೀಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ರಾಜ್ಯದಲ್ಲಿ ನಾವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ. ಒಟ್ಟು 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಆ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ. ಬಿಜೆಪಿಯವರಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರವ ಭರವಸೆ ಇಲ್ಲ. ಹಾಗಾಗಿ, ಜೋಶಿ ಅವರು ಸಪೋರ್ಟ್‌ ಬಗ್ಗೆ ಮಾತನಾಡಿದ್ದಾರೆ” ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ಗೆ ಬೆಂಬಲಿಸಿ ಎಂದು ಎಂಎಲ್‌ಸಿ ಬೋಜೇಗೌಡ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ವೈಯಕ್ತಿಕವಾಗಿ ಚಿಕ್ಕಮಗಳೂರು ರಾಜಕಾರಣದಲ್ಲಿ ಸೆಕ್ಯುಲರ್‌ ವೋಟುಗಳು ಡಿವೈಡ್‌ ಆಗಿದ್ದವು. ಈಗ ಸೆಕ್ಯುಲರ್‌ ಮತಗಳು ಒಂದಾಗಲಿ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಅವರಿಗೆ ನೋಟಿಸ್‌ ನೀಡಲು ಹೇಳಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಪಿತೂರಿ ಮಾಡಿದವರೆಲ್ಲ ಸತ್ಯ ಹರಿಶ್ಚಂದ್ರರೆ?

ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅಶ್ಲೀಲ ವಿಡಿಯೊ ವೈರಲ್‌ ಆದ ಕುರಿತು ಮಾತನಾಡಿದ ಎಚ್‌ಡಿಕೆ, ಇದೊಂದು ಷಡ್ಯಂತ್ರ ಎಂದು ಹೇಳಿದರು. “ಪಿತೂರಿ ಮಾಡಿದವರು ಏನು ಸಾಚಾಗಳಾ? ಬಿಜೆಪಿಯವರು ಕೋರ್ಟ್‌ನಲ್ಲಿ ಸ್ಟೇ ತೆಗೆದುಕೊಂಡಿದ್ದಾರೆ. ಆದರೆ, ನಾವು ಸ್ಟೇ ತಂದಿಲ್ಲ. ಈ ರೀತಿ ಪಿತೂರಿ ಮಾಡಿದವರೆಲ್ಲ ಸತ್ಯ ಹರಿಶ್ಚಂದ್ರರಾ? ಮನುಷ್ಯನಲ್ಲಿ ಕೆಲವು ಸಹಜ ಗುಣಗಳು ಇರುತ್ತವೆ. ಹಾಗಾಗಿ, ನಾವು ಎಚ್ಚರದಿಂದ ಇರಬೇಕು” ಎಂದರು.

ಕಾಂಗ್ರೆಸ್‌ ಮೇಲೆ ಸಾಫ್ಟ್‌ ಕಾರ್ನರ್‌ ಇಲ್ಲ

ಕಾಂಗ್ರೆಸ್‌ ಮೇಲೆ ಎಚ್‌ಡಿಕೆ ಸಾಫ್ಟ್‌ ಕಾರ್ನರ್‌ ಹೊಂದಿದ್ದಾರೆ ಎಂಬ ಮಾತುಗಳು ಕೇಳಿಬಂದ ಕುರಿತು ಪ್ರತಿಕ್ರಿಯಿಸಿದ ಅವರು, “ನನಗೆ ಯಾವುದೇ ಪಕ್ಷದ ಮೇಲೂ ಸಾಫ್ಟ್‌ ಕಾರ್ನರ್‌ ಇಲ್ಲ” ಎಂದು ಸ್ಪಷ್ಟಪಡಿಸಿದರು. “ವರುಣದಲ್ಲಿ ಬಿಜೆಪಿ ಜತೆ ನಾನು ಏಕೆ ಒಪ್ಪಂದ ಮಾಡಿಕೊಳ್ಳಲಿ? ಮಾಜಿ ಶಾಸಕನನ್ನು ನಿಲ್ಲಿಸಿದ್ದೇನೆ. ಗೆಲ್ಲಿಸಿಕೊಂಡು ಬರುತ್ತೇವೆ. ನಮಗೆ ನಮ್ಮ ಅಭ್ಯರ್ಥಿ ಮುಖ್ಯವೇ ಹೊರತು, ಬೇರೆ ಪಕ್ಷದ ಅಭ್ಯರ್ಥಿ ಅಲ್ಲ” ಎಂದರು. ತುಮಕೂರಿನಲ್ಲಿ ದೇವೇಗೌಡರು ಸೋಲಲು ಕಾಂಗ್ರೆಸ್‌ ಕಾರಣ. ಆದರೆ, ಯಾರು ಎಂಬುದಾಗಿ ಹೇಳುವುದಿಲ್ಲ ಎಂದು ಕಳೆದ ಲೋಕಸಭೆಯಲ್ಲಿದೇವೇಗೌಡರು ಸೋಲನುಭವಿಸಿದ ಕುರಿತು ಪ್ರತಿಕ್ರಿಯಿಸಿದರು. ಎಂದಷ್ಟೇ ಹೇಳಿದರು.

ಇದನ್ನೂ ಓದಿ: Karnataka Election 2023: ನನ್ನನ್ನು ಸೋಲಿಸಲು ಬಿಜೆಪಿ-ಕಾಂಗ್ರೆಸ್‌ ಒಗ್ಗಟ್ಟು; ನಿಖಿಲ್‌ ಕುಮಾರಸ್ವಾಮಿ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Hassan Lok Sabha Constituency: ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

VISTARANEWS.COM


on

Hassan Lok Sabha Constituency
Koo

ಹಾಸನ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು. 1957ರಲ್ಲಿ ಈ ಕ್ಷೇತ್ರವನ್ನು ಹಾಸನ ಎಂದು ಗುರುತಿಸಲಾಯಿತು. 1974 ರಲ್ಲಿ, ಹಾಸನ ಕ್ಷೇತ್ರವು ಕರ್ನಾಟಕದ ಭಾಗವಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಜನತಾದಳದಿಂದ ಹಾಗೂ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ. 1999ರಲ್ಲಿ ದೇವೇಗೌಡರನ್ನು ಸೋಲಿಸಿದ್ದ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಎಂ.ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುವ ಮೂಲಕ ದಶಕಗಳ ಹಿಂದಿನ ರಾಜಕೀಯ ಹೋರಾಟಕ್ಕೆ ಮತ್ತೆ ಚಾಲನೆ ಸಿಕ್ಕಿದೆ.

ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿರುವ ಈ ನಗರವು ಹೊಯ್ಸಳ ರಾಜರ ಪ್ರಾಚೀನ ತಾಣಗಳಿಗೆ ನೆಲೆಯಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2,016,000. ಈ ಪೈಕಿ 1,561,000 ಮತದಾರರಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಜನಸಂಖ್ಯೆಯ ಸುಮಾರು 78% ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ, 22% ರಷ್ಟು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.

ಹಾಸನ ಲೋಕಸಭೆ ಕ್ಷೇತ್ರ ಸಾಮಾನ್ಯ ವರ್ಗದ ಸಂಸತ್ ಸ್ಥಾನವಾಗಿದೆ. ಇದು ಇಡೀ ಹಾಸನ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗವನ್ನು ಒಳಗೊಂಡಿದೆ. ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

ಹಿಂದಿನ ಫಲಿತಾಂಶಗಳು

2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ.ಮಂಜು 5,35,382 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಎಸ್ಪಿಯ ವಿನೋದ್ ರಾಜ್ ಕೆ.ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು.2019ರ ಚುನಾವಣೆಯಲ್ಲಿ ಜೆಡಿಎಸ್ ಶೇ.52.92ರಷ್ಟು ಮತಗಳನ್ನು ಪಡೆದಿತ್ತು.

2014ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 5,09,841 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ನ ಎ.ಮಂಜು 4,09,378 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಜೆಪಿಯ ಸಿ.ಎಚ್.ವಿಜಯಶಂಕರ್ 1,65,688 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. ಜೆಡಿಎಸ್ ಶೇ.44.44ರಷ್ಟು ಮತಗಳನ್ನು ಪಡೆದಿದೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಬಿಜೆಪಿಯ ಕೆ.ಎಚ್.ಹನುಮೇಗೌಡ ಅವರನ್ನು 2,91,113 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.50.63ರಷ್ಟು ಮತಗಳನ್ನು ಪಡೆದಿತ್ತು.

ದೇವೇಗೌಡ ಕುಟುಂಬದ ಭದ್ರಕೋಟೆ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ಪಕ್ಷ ಮತ್ತು ಕುಟುಂಬದ ಭದ್ರಕೋಟೆಯಾಗಿ ಪರಿವರ್ತಿಸಿದ್ದಾರೆ. 1991ರಲ್ಲಿ ಅವರ ಮೊದಲ ವಿಜಯದ ನಂತರ, ಅವರು 1998, 2004, 2009 ಮತ್ತು 2014 ರಲ್ಲಿ ಮರು ಆಯ್ಕೆಯಾದರು.

ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2016000. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 69.34% ರಷ್ಟಿತ್ತು. ಎಸ್ಸಿ ಮತದಾರರು ಸುಮಾರು 19.5% ರಷ್ಟಿದ್ದರೆ, ಎಸ್ಟಿ ಮತದಾರರು ಸುಮಾರು 1.8% ರಷ್ಟಿದ್ದಾರೆ. ಸುಮಾರು 1294690 ಗ್ರಾಮೀಣ ಮತದಾರರು 78.4% ರಷ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Chamarajanagar Lok Sabha Constituency : ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಈ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು 1962 ರಲ್ಲಿ ಅಸ್ತಿತ್ವಕ್ಕೆ ಬಂದಿತು.

VISTARANEWS.COM


on

Chamarajanagar Lok Sabha Constituency
Koo

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು. ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

Continue Reading

ಪ್ರಮುಖ ಸುದ್ದಿ

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Bangalore Rain News : ಸಂಜೆ ಶುರುವಾರ ಮಳೆ ರಾತ್ರಿ 12 ಗಂಟೆಯ ವರೆಗೆ ಬಿಡದೇ ಸುರಿಯಿತು. ಹೀಗಾಗಿ ಭಾನುವಾರದ ವಾರಾಂತ್ಯದ ಸಂಚಾರಕ್ಕೆ ಹೊರಗಡೆ ಬಂದಿದ್ದ ನಗರದ ಮಂದಿ ಅಲ್ಲಲ್ಲೇ ಉಳಿಯುವಂತಾಯಿತು. ಅವರ ಖುಷಿಗೆ ಮಳೆರಾಯನ ಅಡಚಣೆಯೂ ಉಂಟಾಯಿತು. ವಾಹನ ಸಂಚಾರಕ್ಕೆ ಅಡಚಣೆಯಾದ ಕಾರಣ ಕುಟುಂಬ ಸಮೇತ ಹೊರಟಿದ್ದವರು ರಸ್ತೆಯ ಬದಿಯಲ್ಲಿ ಕಾಯುವ ಪರಿಸ್ಥಿತಿ ಸೃಷ್ಟಿಯಾಯಿತು.

VISTARANEWS.COM


on

Banglore rain
Koo

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಭಾನುವಾರ ಸಂಜೆ ಏಕಾಏಕಿ ಭರ್ಜರಿ (Bangalore Rain News) ಮಳೆಯಾಯಿತು. ಸಂಜೆ 6 ಗಂಟೆಯ ಬಳಿಕ ಬೆಂಗಳೂರಿನ ನಗರ ವ್ಯಾಪ್ತಿಯ ಬಹುತೇಕ ಕಡೆ ಜೋರು ಮಳೆಯಾಯಿತು. ಈ ಮಳೆಯ ಅಬ್ಬರಕ್ಕೆ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದವು. ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಮರಗಳು ಉರುಳಿ ಬಿದ್ದ ಮರಗಳಿಂದಾಗಿ ವಾಹನಗಳಿಗೆ ಹಾನಿ ಉಂಟಾದವು. ಅದೇ ರೀತಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಸಂಜೆ ಶುರುವಾರ ಮಳೆ ರಾತ್ರಿ 12 ಗಂಟೆಯ ವರೆಗೆ ಬಿಡದೇ ಸುರಿಯಿತು. ಹೀಗಾಗಿ ಭಾನುವಾರದ ವಾರಾಂತ್ಯದ ಸಂಚಾರಕ್ಕೆ ಹೊರಗಡೆ ಬಂದಿದ್ದ ನಗರದ ಮಂದಿ ಅಲ್ಲಲ್ಲೇ ಉಳಿಯುವಂತಾಯಿತು. ಅವರ ಖುಷಿಗೆ ಮಳೆರಾಯನ ಅಡಚಣೆಯೂ ಉಂಟಾಯಿತು. ವಾಹನ ಸಂಚಾರಕ್ಕೆ ಅಡಚಣೆಯಾದ ಕಾರಣ ಕುಟುಂಬ ಸಮೇತ ಹೊರಟಿದ್ದವರು ರಸ್ತೆಯ ಬದಿಯಲ್ಲಿ ಕಾಯುವ ಪರಿಸ್ಥಿತಿ ಸೃಷ್ಟಿಯಾಯಿತು. ಬಸ್ ಸಂಚಾರವೂ ನಿಧಾಗೊಂಡಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸಲು ಹರಸಾಹಸಪಟ್ಟರು.

ಮೆಟ್ರೊ ಸಂಚಾರ ಬಂದ್​

ಮಳೆರಾಯನ ಅಬ್ಬರಕ್ಕೆ ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೊ ಸಂಚಾರಕ್ಕೂ ಅಡಚಣೆ ಉಂಟಾಯಿತು. ನೇರಳೆ ಲೈನ್​​ನ ಇಂದಿರಾನಗರ ಮತ್ತು ಎಂಜಿ ರಸ್ತೆಯ ನಡುವಿನ ಮೆಟ್ರೊ ಬ್ರಿಜ್​ ಮೇಲೆ ಮರವೊಂದು ಉರುಳಿ ಬಿತ್ತು. ಹೀಗಾಗಿ ಮೆಟ್ರೊ ಸಂಚಾರವನ್ನು ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಇದರಿಂದಾಗಿ ಬೆಂಗಳೂರಿನ ಹೃದಯ ಭಾಗವಾಗಿರುವ ಎಂಜಿ ರಸ್ತೆಯ ನಿಲ್ದಾಣದಲ್ಲಿ ಪ್ರಯಾಣಿಕ ಕಿಕ್ಕಿರಿದು ತುಂಬಿಕೊಂಡರು. ಒಂದು ಕಡೆ ಹೊರಗಡೆ ಸುರಿಯುತ್ತಿರುವ ಮಳೆ ಮತ್ತೊಂಡೆದೆ ರೈಲು ಸಂಚಾರ ಬಂದ್​. ಹೀಗಾಗಿ ಜನರ ಎಲ್ಲಿಗೂ ಹೋಗಲು ಸಾಧ್ಯವಾಗದೇ ಪರಿತಪಿಸಿದರು.

ಮನೆಗಳಿಗೆ ನುಗ್ಗಿದ ನೀರು

ಕೆ.ಪಿ ಅಗ್ರಹಾರ, ಇಂದಿರಾನಗರ, ಬಸವೇಶ್ವರ ನಗರ, ಮಂತ್ರಿ ಮಾಲ್​ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿತು. ಏಕಾಏಕಿ ಕುಂಭದ್ರೋಣ ಮಳೆ ಸುರಿದ ಕಾರಣ ಚರಂಡಿಯಲ್ಲಿ ನೀರು ಹೋಗದೇ ಸಮೀಪದ ಮನೆಗಳಿಗೆ ನುಗ್ಗಿದವು. ಬಿಬಿಎಂಪಿ ಅಧಿಕಾರಿಗಳು ಮಳೆಗಾಲದ ಮುನ್ಸೂಚನೆಯ ಹೊರತಾಗಿಯೂ ಒಳಚರಂಡಿಗಳು ಹಾಗೂ ಮಳೆ ನೀರು ಕಾಲುವೆಗಳನ್ನು ಸರಿಯಾದ ಸಮಯಕ್ಕೆ ಸರಿಪಡಿಸಿಲ್ಲ. ಇದರಿಂದಾಗಿ ಮನೆಗಳಿಗೆ ಹಾಗೂ ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ ಎಂದು ಜನರು ಆರೋಪಿಸಿದರು.

ಉರುಳಿ ಬಿದ್ದ ಮರಗಳು

ಮಳೆಯ ಜತೆಗೆ ಮಾರುತವೂ ಜೋರಾಗಿತ್ತು. ಹೀಗಾಗಿ ಬೆಂಗಳೂರಿನ ನಾನಾ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದವು. ಅಧಿಕಾರಿಗಳ ಪ್ರಕಾರ ಒಂದೇ ರಾತ್ರಿಯಲ್ಲಿ 100ಕ್ಕೂ ಅಧಿಕ ಮರಗಳು ಧರಾಶಾಹಿಯಾಗಿವೆ. ಬಸವೇಶ್ವರ ನಗರ ವ್ಯಾಪ್ತಿಯೊಂದರಲ್ಲೇ 40 ಮರಗಳು ಉರುಳಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಗಳು ಬೀಳುವ ಸಮಯದಲ್ಲಿ ವಿದ್ಯುತ್​ ತಂತಿಗಳು ಕೂಡ ತುಂಡಾದ ಕಾರಣ ಬೆಂಗಳೂರಿನ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಯಿತು. ನಾಗರಿಕರು ರಾತ್ರಿಯೆಲ್ಲ ಕತ್ತಲೆಯಲ್ಲಿ ಕಳೆಯುವಂತಾಯಿತು.

ಇದನ್ನೂ ಓದಿ: Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

ಟ್ರಾಫಿಕ್ ಜಾಮ್​

ವಿಪರೀತ ಮಳೆಗೆ ನಗರದ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಟ್ರಾಫಿಕ್ ಜಾಮ್ ನಿಂದ ಜನರು ಪರದಾಡುವಂತಾಯಿತು. ಹೆಬ್ಬಾಳದಿಂದ ಕೋಡಿಗೆಹಳ್ಳಿವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು. ಎಂಜಿ ರೋಡ್, ಮಾಗಡಿ ರೋಡ್, ಮೈಸೂರು ರೋಡ್, ಕೆಂಗೇರಿಯವರೆಗೆ ಮಳೆಯಿಂದಾಗಿ ಟ್ರಾಫಿಕ್​ ಜಾಮ್ ಉಂಟಾಯಿತು. ತುಮಕೂರು ರೋಡ್ ನಲ್ಲಿ ಟ್ರಾಫಿಕ್ ಜಾಮ್ ಜೋರಾಯಿತು. ಮಳೆ ಕಡಿಮೆಯಾಗಿದ್ದರೂ ರಾತ್ರಿಯವರೆಗೂ ಟ್ರಾಫಿಕ್ ಜಾಮ್ ಕಂಡು ಬಂತು. ಅಲ್ಲಲ್ಲಿ ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ಅದರ ಮೇಲೆ ಓಡಾಡಿದ ವಾಹಗಳು ಅಲ್ಲಲ್ಲಿ ಕೆಟ್ಟು ನಿಂತವು.

ಅಂಡರ್ ಪಾಸ್​ಗಳಲ್ಲಿ ಕೆಟ್ಟು ನಿಂತ ವಾಹನಗಳು

ಬೆಂಗಳೂರಿನ ಹವಲಾರು ಕಡೆಗಳಲ್ಲಿ ಅಂಡರ್​ ಪಾಸ್​ ಕೆಳಗೆ ತುಂಬಿದ್ದ ನೀರಿನಲ್ಲಿ ವಾಹನಗಳು ಕೆಟ್ಟು ನಿಂತವು. ಇಂಥ ಪ್ರಕರಣಗಳಲ್ಲಿ ಹಲವಾರು ಮಂದಿ ಪ್ರಾಣಾಪಾಯಿಂದ ಪಾರಾದರು. ಶೇಷಾದ್ರಿಪುರದಲ್ಲಿ ಬಿಎಂಟಿಸಿ ಬಸ್​ ಕೆಟ್ಟು ನಿಂತ ಕಾರಣ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯರು ಬಸ್​ನಲ್ಲಿದ್ದ 22 ಮಂದಿಯನ್ನು ಕಾಪಾಡಿದರು.

ದಾಖಲಾದ ಮಳೆ (ಮಿಲಿಮೀಟರ್‌ಗಳಲ್ಲಿ)

ಹೊರಮಾವು(2) (ಮಹದೇವಪುರ): 80 ಮಿ.ಮೀ, ಕೊಡಿಗೇಹಳ್ಳಿ (ಯಲಹಂಕ): 78ಮಿ.ಮೀ, ವಿದ್ಯಾಪೀಠ (ದಕ್ಷಿಣ ವಲಯ) : 65.5 ಮಿ.ಮೀ, ಜಕ್ಕೂರು(1) (ಯಲಹಂಕ): 56 ಮಿ.ಮೀ, ಕಾಟನ್‌ಪೇಟೆ (ಪಶ್ಚಿಮ ವಲಯ): 55.5 ಮಿ.ಮೀ.
ಕೊಟ್ಟಿಗೆಪಾಳ್ಯ (ಆರ್‌ಆರ್‌ನಗರ): 54 ಮಿ.ಮೀ, ನಂದಿನಿಲೇಔಟ್ (ಪಶ್ಚಿಮ ವಲಯ): 52.5 ಮಿ.ಮೀ, ದಯಾನಂದನಗರ (ಪಶ್ಚಿಮ ವಲಯ): 49 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ (ಪಶ್ಚಿಮ ವಲಯ): 47.5 ಮಿ.ಮೀ, ಪೀಣ್ಯ ಸ್ಥಳೀಯ ಪ್ರದೇಶ (ದಾಸರಹಳ್ಳಿ): 45.5 ಮಿ.ಮೀ, ಯಲಹಂಕ (ಯಲಹಂಕ): 45.5 ಮಿ.ಮೀ, ವಿಶ್ವನಾಥ ನಾಗೇನಹಳ್ಳಿ (ಪೂರ್ವವಲಯ): 44.5 ಮಿ.ಮೀ, ಬೊಮ್ಮನಹಳ್ಳಿ (ಬೊಮ್ಮನಹಳ್ಳಿ ವಲಯ): 43.5 ಮಿ.ಮೀ, ಮಾರುತಿ ಮಂದಿರ ವಾರ್ಡ್ (ಪಶ್ಚಿಮ ವಲಯ): 43 ಮಿ.ಮೀ, ನಾಗಾಪುರ (ಪಶ್ಚಿಮ ವಲಯ): 41.5 ಮಿ.ಮೀ, ಹಂಪಿ ನಗರ (ದಕ್ಷಿಣ ವಲಯ): 40.5 ಮಿ.ಮೀ, ಸಂಪಂಗಿ ರಾಮನಗರ (1) (ಪೂರ್ವವಲಯ): 40 ಮಿ.ಮೀ, ಚೌಡೇಶ್ವರಿ ವಾರ್ಡ್ (ಯಲಹಂಕ): 39 ಮಿ.ಮೀ, ಬಿಟಿಎಂ ಲೇಔಟ್ (ದಕ್ಷಿಣ ವಲಯ): 38 ಮಿ.ಮೀ, ನಾಯಂಡಹಳ್ಳಿ (ಪಶ್ಚಿಮ ವಲಯ): 37 ಮಿ.ಮೀ, ಚಾಮರಾಜಪೇಟೆ (ಪಶ್ಚಿಮ ವಲಯ): 36.5 ಮಿ.ಮೀ, ಪುಲಕೇಶಿನಗರ (ಪೂರ್ವವಲಯ): 34.5 ಮಿ.ಮೀ, ಹೇರೋಹಳ್ಳಿ 33.5 ಮಿ.ಮೀ, ರಾಜಾಜಿನಗರ (ಪಶ್ಚಿಮ ವಲಯ): 33 ಮಿ.ಮೀ, ರಾಜರಾಜೇಶ್ವರಿ ನಗರ 31.5 ಮಿ.ಮೀ, ಉತ್ತರಹಳ್ಳಿ: 28 ಮಿ.ಮೀ, ಎಚ್ಎಸ್ಆರ್ ಲೇಔಟ್ ದಾಖಲಾದ 27.5 ಮಿ.ಮೀ, ಬಿಳೇಕಹಳ್ಳಿ (ಬೊಮ್ಮನಹಳ್ಳಿ ವಲಯ): 25.5 ಮಿ.ಮೀ, ದೊರೆಸಾನಿಪಾಳ್ಯ: 24.5 ಮಿ.ಮೀ, ಹೆಮ್ಮಿಗೆಪುರ 23.5 ಮಿ.ಮೀ, ಪಟ್ಟಾಭಿರಾಮನಗರ: 22 ಮಿ.ಮೀ, ಕುಶಾಲನಗರ 21 ಮಿ.ಮೀ, ಕೋಣನಕುಂಟೆ: 19.5 ಮಿ.ಮೀ.
ಸಿಂಗಸಂದ್ರ-2: 18.5 ಮಿ.ಮೀ, ಅರಕೆರೆ: 18.5 ಮಿ.ಮೀ, ರಾಜರಾಜೇಶ್ವರಿನಗರ: 18 ಮಿ.ಮೀ, ವಿದ್ಯಾರಣ್ಯಪುರ: 17.5 ಮಿ.ಮೀ, ದೊಡ್ಡನೆಕ್ಕುಂದಿ: 16.5 ಮಿ.ಮೀ, ಬಾಣಸವಾಡಿ: 15 ಮಿ.ಮೀ, ಮನೋರಾಯನಪಾಳ್ಯ: 15 ಮಿ.ಮೀ
ವನ್ನರಪೇಟ್: 14.5 ಮಿ.ಮೀ, ಹೆಮ್ಮಿಗೆಪುರ: 14 ಮಿ.ಮೀ, ಬೆಳ್ಳಂದೂರು: 13 ಮಿ.ಮೀ, ಹೊಯ್ಸಳನಗರ: 12 ಮಿ.ಮೀ, ಎಚ್.ಗೊಲ್ಲಹಳ್ಳಿ: 11.5 ಮಿ.ಮೀ, ಚೊಕ್ಕಸಂದ್ರ: 11 ಮಿ.ಮೀ, ಕಮ್ಮನಹಳ್ಳಿ: 10 ಮಿ.ಮೀ, ಹಾಲ್ ವಿಮಾನ ನಿಲ್ದಾಣ: 10 ಮಿ.ಮೀ, ಕೆಂಗೇರಿ: 10 ಮಿ.ಮೀ, ಎಚ್​ಎ ವಿಮಾನ ನಿಲ್ದಾಣ-2: 10 ಮಿ.ಮೀ, ಮಾರತ್ತಹಳ್ಳಿ: 10 ಮಿ.ಮೀ.

Continue Reading

ಪ್ರಮುಖ ಸುದ್ದಿ

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Mysore lok sabha Constituency :ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

VISTARANEWS.COM


on

Mysore lok sabha constituency
Koo

ಬೆಂಗಳೂರು: ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಎರಡು ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದೆ. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಿಡಿತ ಹೊಂದಿರುವ ಬಿಜೆಪಿಯ ಮೈತ್ರಿ ಪಾಲುದಾರ ಜೆಡಿಎಸ್ ಅವರ ಗೆಲುವಿನ ಅಭಿಯಾನದಲ್ಲಿ ಸಾಥ್ ನೀಡಿದೆ. ಹೀಗಾಗಿ ಈ ಬಾರಿಯ ಚುನಾವಣೆ ‘ಕಿಂಗ್ ವರ್ಸಸ್ ಆರ್ಡಿನರಿ ಸಿಟಿಜನ್’ ಎಂಬ ಟ್ಯಾಗ್ ಲೈನ್ ಹೊಂದಿದೆ. ಕಾಂಗ್ರೆಸ್​ನಿಂದ ಆ ಪಕ್ಷದ ರಾಜ್ಯ ವಕ್ತಾರ ಲಕ್ಷ್ಮಣ ಕಣದಲ್ಲಿದ್ದಾರೆ.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರವು ಮುಖ್ಯವಾಗಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ.ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಹಿಂದಿನ ಮೂರು ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ : Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading
Advertisement
Hassan Lok Sabha Constituency
ಪ್ರಮುಖ ಸುದ್ದಿ16 mins ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್16 mins ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ46 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ1 hour ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ1 hour ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ6 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ7 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ8 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌