Who Will Win In Dharwad's All Constituency In Electionಧಾರವಾಡ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿಗೆ ಭದ್ರಕೋಟೆ ಎಂಬ ಪ್ರತಿಷ್ಠೆ; ಶೆಟ್ಟರ್‌ಗೆ ಅಸ್ತಿತ್ವದ ಪ್ರಶ್ನೆ - Vistara News

ಕರ್ನಾಟಕ

ಧಾರವಾಡ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿಗೆ ಭದ್ರಕೋಟೆ ಎಂಬ ಪ್ರತಿಷ್ಠೆ; ಶೆಟ್ಟರ್‌ಗೆ ಅಸ್ತಿತ್ವದ ಪ್ರಶ್ನೆ

ಬಿಜೆಪಿ ಟಿಕೆಟ್‌ ನಿರಾಕರಣೆ ಬಳಿಕ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದ ಕಾರಣದಿಂದಾಗಿ ಧಾರವಾಡ ಜಿಲ್ಲೆಯು ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಹಾಗಾದರೆ, ಜಿಲ್ಲೆಯಲ್ಲಿ ರಾಜಕೀಯ ಹವಾಮಾನ ಹೇಗಿದೆ? ಇಲ್ಲಿದೆ ಮಾಹಿತಿ…

VISTARANEWS.COM


on

Dharwad District Election Survey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಪರಶುರಾಮ ತಹಶೀಲ್ದಾರ್‌, ವಿಸ್ತಾರ ನ್ಯೂಸ್‌, ಹುಬ್ಬಳ್ಳಿ

ಧಾರವಾಡ ಜಿಲ್ಲೆಯಲ್ಲಿ ಈ ಬಾರಿಯ ರಾಜಕೀಯ ಸಮೀಕರಣಗಳು ಬಹಳಷ್ಟು ಬದಲಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಡೈರೆಕ್ಟ್ ಫೈಟ್ ಇದೆ. ಆದರೆ, ಕಾಂಗ್ರೆಸ್ ಉರುಳಿಸಿರುವ ಶೆಟ್ಟರ್ ದಾಳ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹುಬ್ಬಳ್ಳಿಯ ಬೆಳವಣಿಗೆಗಳು ಸದ್ಯಕ್ಕೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಗಮನ ಸೆಳೆಯುತ್ತಿವೆ. ಜಗದೀಶ್‌ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಜಿಲ್ಲೆ ಮಾತ್ರವಲ್ಲ ಉತ್ತರ ಕರ್ನಾಟಕದ ರಾಜಕೀಯ ಚಿತ್ರಣ ಬದಲಿಸಿದೆ. ಇದೇ ಕಾರಣಗಳಿಂದಾಗಿ ಬಿಜೆಪಿಯ ಭದ್ರಕೋಟೆಯಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಶೆಟ್ಟರ್‌ ರಾಜೀನಾಮೆ, ಬಿಜೆಪಿ ಕಾರ್ಯಕರ್ತರಲ್ಲಿ ಮೂಡಿದ ಗೊಂದಲದಿಂದ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಹೇಳಿದರೂ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಅಬ್ಬರದ ಪ್ರಚಾರವು ಬಿಜೆಪಿಗೆ ವರದಾನವಾಗಿದೆ. ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೆಳೆದುಕೊಂಡರೂ ಕಾಂಗ್ರೆಸ್‌ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತದೆಯೇ ಎಂಬ ಪ್ರಶ್ನೆ ಮೂಡಿದಿದೆ. ಹಾಗಾದರೆ, ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ವಸ್ತುಸ್ಥಿತಿ ಹೇಗಿದೆ? ಯಾವ ಪಕ್ಷದ ಪರ ಜನರ ಒಲವಿದೆ? ಅಭ್ಯರ್ಥಿಗಳ ಲೆಕ್ಕಾಚಾರ ಏನಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಕಳೆದ ಚುನಾವಣೆ ಫಲಿತಾಂಶ
ಒಟ್ಟು ಕ್ಷೇತ್ರ: 7
ಬಿಜೆಪಿ: 5 (ಹುಬ್ಬಳ್ಳಿ- ಧಾರವಾಡ ಕೇಂದ್ರ, ಹುಬ್ಬಳ್ಳಿ- ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ, ಕಲಘಟಗಿ, ನವಲಗುಂದ)
ಕಾಂಗ್ರೆಸ್: 2 (ಹುಬ್ಬಳ್ಳಿ- ಧಾರವಾಡ ಪೂರ್ವ ಮೀಸಲು ಕ್ಷೇತ್ರ, ಕುಂದಗೋಳ)

ಹುಬ್ಬಳ್ಳಿ- ಧಾರವಾಡ ಕೇಂದ್ರ: ಪ್ರತಿಷ್ಠೆಯ ಕಣ, ಶೆಟ್ಟರ್ VS ಬಿಜೆಪಿ ರಣಾಂಗಣ

ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರಿಗೆ ಟಿಕೆಟ್ ನಿರಾಕರಿಸುತ್ತಿದ್ದಂತೆಯೇ ಬಿಜೆಪಿ ತೊರೆದಿದ್ದಾರೆ. ಕಾಂಗ್ರೆಸ್ ಸೇರಿ ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಳೆದ ಆರು ಬಾರಿ ಬಿಜೆಪಿಯಿಂದ ಗೆದ್ದು ಸೋಲಿಲ್ಲದ ಸರದಾರ ಎನ್ನಿಸಿಕೊಂಡಿರುವ ಜಗದೀಶ್ ಶೆಟ್ಟರ್, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ. ಹೀಗಾಗಿ ಕ್ಷೇತ್ರದಲ್ಲಿ ಯಾರು ಗೆದ್ದರೂ ದಾಖಲೆ ನಿರ್ಮಾಣವಾಗಲಿದೆ. ಶೆಟ್ಟರ್ ಗೆದ್ದರೆ ಬಿಜೆಪಿ ಭದ್ರಕೋಟೆ ಛಿದ್ರವಾಗಿ ಮೊದಲ ಬಾರಿ ಕೈಪಡೆ ಗೆಲುವಿನ ಮಾಲೆ ಧರಿಸಲಿದೆ. ಶೆಟ್ಟರ್ ಸೋತರೆ ಬಿಜೆಪಿಯ ನಿರಂತರ ಗೆಲುವಿನ ದಾಖಲೆ ಮುಂದುವರಿಯಲಿದೆ. ಮಹೇಶ್‌ ಟೆಂಗಿನಕಾಯಿ ಅವರು ಇತಿಹಾಸ ಸೃಷ್ಟಿಸಲಿದ್ದಾರೆ. ಹೀಗಾಗಿ ಎರಡೂ ಪಕ್ಷಗಳ‌ ಘಟಾನುಘಟಿ ನಾಯಕರು ಹುಬ್ಬಳ್ಳಿಗೆ ದೌಡಾಯಿಸುತ್ತಿದ್ದಾರೆ. ಬಿಜೆಪಿಯಿಂದ ಲಿಂಗಾಯತರಿಗೆ ಅನ್ಯಾಯ ಎಂದು ಶೆಟ್ಟರ್ ಬಣ ಆರೋಪಿಸುತ್ತಿದೆ. ಶೆಟ್ಟರ್ ಪಕ್ಷದ್ರೋಹಿ ಎಂದು ಬಿಜೆಪಿ ಪಾಳಯ ಟೀಕಿಸುತ್ತಿದೆ. ಶೆಟ್ಟರ್ ವರ್ಸಸ್ ಬಿಜೆಪಿ ಅನ್ನುವ ರೀತಿ ಕ್ಷೇತ್ರದಲ್ಲಿ ಹೋರಾಟ ನಡೆಯುತ್ತಿದೆ. ಶೆಟ್ಟರ್ ಅವರು ಬಿಜೆಪಿಯ ಸಾಂಪ್ರದಾಯಿಕ ಮತದಾರರಾದ ಸಾವಜಿ, ಮರಾಠಾ ಮತ್ತು ಲಿಂಗಾಯತರ ಎಷ್ಟು ಮತಗಳನ್ನು ಸೆಳೆಯುತ್ತಾರೆ ಎನ್ನುವುದರ ಮೇಲೆ ಕ್ಷೇತ್ರದ ಫಲಿತಾಂಶ ನಿರ್ಧಾರವಾಗಲಿದೆ‌. ಒಟ್ಟಿನಲ್ಲಿ ಇದು ಪ್ರತಿಷ್ಠೆಯ ಕಣವಾಗಿದೆ.

ಕಳೆದ ಚುನಾವಣೆ ಫಲಿತಾಂಶ
ಜಗದೀಶ್ ಶೆಟ್ಟರ್- ಬಿಜೆಪಿ- 75,794
ಮಹೇಶ್ ನಾಲವಾಡ್- ಕಾಂಗ್ರೆಸ್‌- 54,488
ಗೆಲುವಿನ ಅಂತರ- 21,306

ಹುಬ್ಬಳ್ಳಿ- ಧಾರವಾಡ ಪೂರ್ವ (ಎಸ್‌ಸಿ ಮೀಸಲು): ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್‌, ಎಐಎಂಐಎಂ ಸವಾಲು

ಹುಬ್ಬಳ್ಳಿ- ಧಾರವಾಡ ಪೂರ್ವ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಳೆದ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಪ್ರಸಾದ್ ಅಬ್ಬಯ್ಯ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಡಾ.‌ ಕ್ರಾಂತಿಕಿರಣ ಅವರನ್ನು ಕಣಕ್ಕೆ ಇಳಿಸಲಾಗಿದೆ. ಇವರು ಅತ್ಯಂತ ಚುರುಕಿನಿಂದ ಮತ್ತು ವ್ಯವಸ್ಥಿತವಾಗಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಟಿಕೆಟ್ ಕೈತಪ್ಪುವ ಸೂಚನೆ ಸಿಗುತ್ತಿದ್ದಂತೆ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಜೆಡಿಎಸ್ ಸೇರಿದ್ದಾರೆ. ಸದ್ಯ ಜೆಡಿಎಸ್ ಅಭ್ಯರ್ಥಿಯಾಗಿ ಅವರು ಕಣದಲ್ಲಿದ್ದು ಬಿಜೆಪಿ ವೋಟ್‌ಬ್ಯಾಂಕ್‌ಗೆ ಕುತ್ತು ತಂದಿದ್ದಾರೆ. ಇನ್ನೊಂದೆಡೆ ಎಐಎಂಐಎಂ ಪಕ್ಷದ ಅಭ್ಯರ್ಥಿ ದುರ್ಗಪ್ಪ ಬಿಜವಾಡ ಮುಸ್ಲಿಂ ವೋಟ್‌ ಬ್ಯಾಂಕ್‌ಗೆ ಕೈಹಾಕಿದ್ದಾರೆ. ಓವೈಸಿ ಕ್ಯಾಂಪೇನ್‌‌ನೊಂದಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಭಯ ಹುಟ್ಟಿಸಿದ್ದಾರೆ. ಜೆಡಿಎಸ್‌ ಕೂಡ ಭಾರಿ ಪೈಪೋಟಿ ಒಡ್ಡುತ್ತಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಸಾಂಪ್ರದಾಯಿಕ ಮತಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿವೆ. ಎಸ್‌ಸಿ ಹಾಗೂ ಮುಸ್ಲಿಂ ಮತಗಳನ್ನು ಗಟ್ಟಿಯಾಗಿ ಉಳಿಸಿಕೊಂಡರೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಹ್ಯಾಟ್ರಿಕ್ ಸಾಧಿಸಬಹುದು. ಏಕೆಂದರೆ, ಬಿಜೆಪಿ ಇಲ್ಲಿ ಪ್ರಬಲ ಪೈಪೋಟಿ ನೀಡುತ್ತಿದೆ.

ಕಳೆದ ಚುನಾವಣೆ ಫಲಿತಾಂಶ
ಪ್ರಸಾದ್ ಅಬ್ಬಯ್ಯ- ಕಾಂಗ್ರೆಸ್- 77‌,080,
ಚಂದ್ರಶೇಖರ ಗೋಕಾಕ- ಬಿಜೆಪಿ- 55,613
ಗೆಲುವಿನ ಅಂತರ: 21,467

ಕಲಘಟಗಿ: ಯಾರ ಪ್ರಾಬಲ್ಯ ಬಿಗಿ?

ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ಹೊಸ ಪ್ರಯೋಗಕ್ಕೆ ಕೈಹಾಕಿದೆ. ಹಾಲಿ ಶಾಸಕ ಸಿ‌.ಎಂ. ನಿಂಬಣ್ಣವರ್‌ಗೆ ಟಿಕೆಟ್ ಮಿಸ್ ಆಗಿದೆ. ಕಾಂಗ್ರೆಸ್‌ನಲ್ಲಿ ಸಂತೋಷ್ ಲಾಡ್ ವಿರುದ್ಧ ಟಿಕೆಟ್‌ಗಾಗಿ ಪೈಪೋಟಿಗೆ ಇಳಿದಿದ್ದ ನಾಗರಾಜ್ ಛಬ್ಬಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ. ಕಳೆದ ಬಾರಿಯ ಸೋಲಿನಿಂದ ಸಾಕಷ್ಟು ಪಾಠ ಕಲಿತಿರುವ ಸಂತೋಷ್ ಲಾಡ್ ಈ ಬಾರಿ ಸಂಪೂರ್ಣ ತಯಾರಿಯೊಂದಿಗೆ ಕಣಕ್ಕೆ ಇಳಿದಿದ್ದಾರೆ. ಸ್ಟಾರ್ ಪ್ರಚಾರಕರನ್ನು ಕರೆಸದೆ ತಾವೇ ಮನೆಮನೆ ಸುತ್ತುತ್ತಿದ್ದಾರೆ. ಮತದಾರರ ಬಳಿ ತೆರಳಿ, ತಮ್ಮ ಮೇಲೆ ಸಿಟ್ಟಿದ್ದರೆ ಕ್ಷಮಿಸಿ ಈ ಬಾರಿ ಆಶಿರ್ವದಿಸಿ ಎಂದು ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ನಾಗರಾಜ್ ಛಬ್ಬಿ ಮೂಲ ಬಿಜೆಪಿಗರ ಮನವೊಲಿಸಲು ಹರಸಾಹಸ ಪಡಬೇಕಾಗಿದೆ. ಬಿಜೆಪಿ ಟಿಕೆಟ್ ಮಿಸ್ ಆಗಿರುವ ಸಿ.ಎಮ್. ನಿಂಬಣ್ಣವರ್ ಕೂಡ ಕ್ಷೇತ್ರದಲ್ಲಿ ಅಷ್ಟೊಂದು ಚುರುಕಾಗಿ ಕೆಲಸ ಮಾಡುತ್ತಿಲ್ಲ ಎಂದು ಪಕ್ಷದ ಕಾರ್ಯಕರ್ತರೆ ಮಾತಾಡಿಕೊಳ್ಳುತ್ತಿದ್ದಾರೆ. ವಿಶಾಲವಾಗಿರುವ ಕಲಘಟಗಿ- ಅಳ್ನಾವರ ಕ್ಷೇತ್ರದಲ್ಲಿ ಸುಮಾರು 148 ಗ್ರಾಮಗಳಿವೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗೆ ಜನರನ್ನು ಮುಖತಃ ತಲುಪುವುದೇ ಸವಾಲಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಮರಾಠಾ ಮತದಾರರು ನಿರ್ಣಾಯಕರಾಗಿದ್ದಾರೆ. ಮರಾಠಾ ಸಮುದಾಯದ ಸಂತೋಷ್ ಲಾಡ್ ಮತ್ತು ಲಿಂಗಾಯತ ಸಮುದಾಯದ ನಾಗರಾಜ್ ಛಬ್ಬಿ ನಡುವೆ ತುರುಸಿನ ಸ್ಪರ್ಧೆಯಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಹಿಂದೆ ಲಾಡ್ ಮಾಡಿರುವ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿದ್ದು, ಕಾಂಗ್ರೆಸ್ ಇದನ್ನು ನೆಚ್ಚಿಕೊಂಡಿದೆ.

ಕಳೆದ ಚುನಾವಣೆ ಫಲಿತಾಂಶ
ಸಿ.ಎಂ. ನಿಂಬಣ್ಣವರ್- ಬಿಜೆಪಿ- 83,267
ಸಂತೋಷ್ ಲಾಡ್- ಕಾಂಗ್ರೆಸ್- 57,270
ಗೆಲುವಿ‌ನ ಅಂತರ- 25,997

ಕುಂದಗೋಳ: ತಂತ್ರ-ಪ್ರತಿತಂತ್ರದ ಕ್ಷೇತ್ರದಲ್ಲಿ ಯಾರಿಗೆ ಗೆಲುವಿನ ಮಂತ್ರ?

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸಚಿವರಾಗಿದ್ದ ಪತಿ ಸಿ.ಎಸ್‌. ಶಿವಳ್ಳಿ ನಿಧನದ ಅನುಕಂಪದ ಅಲೆಯಲ್ಲಿ ಉಪಚುನಾವಣೆಯಲ್ಲಿ ಕುಸುಮಾವತಿ ಗೆದ್ದಿದ್ದರು. ಈಗ ಕ್ಷೇತ್ರದ ಚಿತ್ರಣ ಬದಲಾಗಿದೆ‌.‌ ಕಾಂಗ್ರೆಸ್‌ನಲ್ಲಿ ಹದಿನಾರು ಜನ ಟಿಕೆಟ್ ಆಕಾಂಕ್ಷಿಗಳಿದ್ದು ಕುಸುಮಾವತಿಗೆ ಟಿಕೆಟ್ ಕೊಡದಂತೆ ವರಿಷ್ಠರಿಗೆ ದಂಬಾಲು ಬಿದ್ದರೂ ಪ್ರಯೋಜನವಾಗಿಲ್ಲ‌. ಹೀಗಾಗಿ ಕುಸುಮಾವತಿ ಪರವಾಗಿ ಟಿಕೆಟ್ ವಂಚಿತರು ಮನಪೂರ್ವಕವಾಗಿ ಕೆಲಸ ಮಾಡುತ್ತಿಲ್ಲ‌. ಬದಲಾಗಿ ಒಳಪೆಟ್ಟು ಕೊಡಲು ಕಾಂಗ್ರೆಸ್‌ನ ಒಂದು ಬಣ ಎಲ್ಲ ರಣತಂತ್ರ ಮಾಡಿದೆ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ್ ಕಳೆದ ಮೂರು ವರ್ಷಗಳಿಂದ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸಂಬಂಧಿಯಾದ ಸಿ.ಸಿ. ಪಾಟೀಲರ ಸಹಕಾರದೊಂದಿಗೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸಾಕಷ್ಟು ಕೆಲಸ ಮಾಡಿಸಿದ್ದಾರೆ. ಜನರ ಕಷ್ಟಸುಖಗಳಿಗೆ ಸ್ಪಂದಿಸಿದ್ದಾರೆ. ಇದು ಬಿಜೆಪಿ ಅಭ್ಯರ್ಥಿಗೆ ವರವಾಗುವ ಸಾಧ್ಯತೆಗಳಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡರ್ ಪಕ್ಷೇತರವಾಗಿ ಕಣದಲ್ಲಿದ್ದಾರೆ. ತಾನು ಸೋತರೂ ಪರವಾಗಿಲ್ಲ ಬಿಜೆಪಿ ಅಭ್ಯರ್ಥಿ ಗೆಲ್ಲಬಾರದು ಎನ್ನುವ ಧೋರಣೆಯಲ್ಲಿ ಇದ್ದಂತೆ ಕಾಣಿಸುತ್ತಿದೆ‌. ಜೆಡಿಎಸ್ ಅಭ್ಯರ್ಥಿ ಹಜರತ್‌ಅಲಿ ಜೋಡಮನಿ ಕಾಂಗ್ರೆಸ್ ವೋಟ್‌ಬ್ಯಾಂಕ್‌ಗೆ ಕೈಹಾಕಿದ್ದು, ಮತ ವಿಭಜನೆಯಾಗಲಿವೆ. ಕ್ಷೇತ್ರದಲ್ಲಿ ಲಿಂಗಾಯತ, ಕುರುಬ, ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದು ಈ ಬಾರಿ ಮತದಾರರು ಯಾರಿಗೆ ಮಣೆ ಹಾಕ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.

2019ರ ವಿಧಾನಸಭೆ ಉಪ ಚುನಾವಣೆ ಫಲಿತಾಂಶ
ಕುಸುಮಾ ಶಿವಳ್ಳಿ- ಕಾಂಗ್ರೆಸ್- 77,587
ಎಸ್.ಐ ಚಿಕ್ಕನಗೌಡ-ಬಿಜೆಪಿ- 75,976
ಗೆಲುವಿನ ಅಂತರ- 1,611

ಧಾರವಾಡ ಗ್ರಾಮೀಣ: ಬದಲಾಗಬಹುದೇ ಕ್ಷೇತ್ರದ ಇತಿಹಾಸ?

ಧಾರವಾಡ ಗ್ರಾಮೀಣ ಕ್ಷೇತ್ರ ಇದೀಗ ರಾಜ್ಯದ ಗಮನ ಸೆಳೆದಿರುವ ಕ್ಷೇತ್ರವಾಗಿದೆ. ಮೊದಲ ಬಾರಿಗೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಯು ಜಿಲ್ಲೆಯ ಹೊರಗಿದ್ದುಕೊಂಡೇ ಚುನಾವಣೆ ಎದುರಿಸುವ ಸ್ಥಿತಿ ಎದುರಾಗಿದೆ. ಒಮ್ಮೆ ಗೆಲ್ಲಿಸಿದ ನಾಯಕನನ್ನು ಮತ್ತೊಮ್ಮೆ ಗೆಲ್ಲಿಸಿದ್ದ ಇತಿಹಾಸವೇ ಇಲ್ಲದ ಈ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಬಿಜೆಪಿಗೋ ಅಥವಾ ಕಾಂಗ್ರೆಸ್ ಗೋ ಅನ್ನೋದು ದೊಡ್ಡ ಪ್ರಶ್ನೆಯಾಗಿದೆ. ಅದರಲ್ಲೂ ಮಾಜಿ ಸಚಿವ ವಿನಯ್ ಕುಲಕರ್ಣಿ ಕ್ಷೇತ್ರದಲ್ಲಿ ಇಲ್ಲದಿದ್ದರೂ ಜನ ಮಾತ್ರ ವಿನಯ್ ಬಿಟ್ಟುಕೊಡಲು ತಯಾರಿಲ್ಲ. ಇತ್ತ ಕೋಟ್ಯಂತರ ರೂ. ಅನುದಾನ ತಂದಿರುವ ಬಿಜೆಪಿ ಶಾಸಕ ಅಮೃತ್ ದೇಸಾಯಿ ಅಭಿವೃದ್ಧಿ ಇಟ್ಟುಕೊಂಡು ಮತದಾರರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ಹೀಗಾಗಿ ಮತದಾರ ಪ್ರಭು ಇಬ್ಬರ ಮೇಲೂ ಹೆಚ್ಚು ಒಲವಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಬೇಲ್ ಮೇಲೆ ಹೊರಗಿರುವ ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ಸಿಗುತ್ತಿಲ್ಲ. ಅದನ್ನೇ ಬಂಡವಾಳವಾಗಿಸಿಕೊಂಡಿರುವ ಅವರು ಮತ್ತು ಅವರ ಬೆಂಬಲಿಗರು ಪ್ರಚಾರದ ಕಾರ್ಯದಲ್ಲಿ ಅನುಕಂಪದ ಅಲೆಯನ್ನು ಎಬ್ಬಿಸಿ ಮತ ಬೇಟೆ ಶುರು ಮಾಡಿದ್ದಾರೆ. ಹಾಗಾಗಿ, ಫಲಿತಾಂಶ ಕುತೂಹಲ ಕೆರಳಿಸಿದೆ.

ಕಳೆದ ಚುನಾವಣೆ ಫಲಿತಾಂಶ
ಅಮೃತ್ ದೇಸಾಯಿ- ಬಿಜೆಪಿ- 85,123
ವಿನಯ್ ಕುಲಕರ್ಣಿ- ಕಾಂಗ್ರೆಸ್- 64,783
ಗೆಲುವಿನ ಅಂತರ: 10,340

ನವಲಗುಂದ: ಬಿಜೆಪಿ ಪರ ಅಲೆ, ಕಾಂಗ್ರೆಸ್‌ ಒಡೆದ ಮನೆ

ಬಂಡಾಯದ ನಾಡು ಅಂತಲೇ ಗುರುತಿಸಿಕೊಂಡಿರುವ ನವಲಗುಂದ ವಿಧಾನಸಭಾ ಕ್ಷೇತ್ರ ರೈತ ಹೋರಾಟದ ಮೂಲಕ ನಾಡಿಗೆ ರೈತರ ಶಕ್ತಿ ತೋರಿಸಿದೆ. ಮಹದಾಯಿ ಹೋರಾಟದ ಕಿಚ್ಚು ಈ ನೆಲದಲ್ಲಿ ಆರಂಭವಾಗಿದ್ದು, ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಯಾರು ತರುತ್ತಾರೋ ಅವರಿಗೆ ನಮ್ಮ ಮತ ಅಂತ ಈ ಹಿಂದೆಯೇ ರೈತರು ಹೇಳಿದ್ದರು. ಅದರಂತೆ ಇದೀಗ ಮಹದಾಯಿ ಡಿಪಿಆರ್ ಸಿದ್ಧವಾಗಿದ್ದು ಟೆಂಡರ್ ಪ್ರಕ್ರಿಯೆ ಸಹ ನಡೆದಿದೆ ಎನ್ನುತ್ತಾರೆ ಬಿಜೆಪಿ ನಾಯಕರು. ಹೀಗಾಗಿ ಬಿಜೆಪಿ ಹಾಲಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಪರ ಸದ್ಯಕ್ಕೆ ಜನರ ಒಲವಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿ ಟಿಕೆಟ್ ಗಿಟ್ಟಿಸಿಕೊಂಡಿರೋ ಕೋನರೆಡ್ಡಿ ಅವರಿಗೆ ಒಳಗೊಳಗೇ ಶತ್ರುಗಳ ಕಾಟವೂ ಹೆಚ್ಚಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮೇಲೆ ಮೂಲ ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಕೋನರೆಡ್ಡಿ ಗೆಲುವಿಗೆ ಮೂಲ ಕಾಂಗ್ರೆಸ್ಸಿಗರು ಶ್ರಮಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಸದ್ಯಕ್ಕೆ ಸಮಬಲ ಹೋರಾಟ ಜೋರಾಗಿದ್ದು, ಬಿಜೆಪಿ ಒಂದು ಕೈ ಮೇಲೆಯೇ ಇದೆ ಅಂತ ಹೇಳಬಹುದಾಗಿದೆ.

ಕಳೆದ ಚುನಾವಣೆ ಫಲಿತಾಂಶ
ಶಂಕರ ಪಾಟೀಲ್ ಮುನೇನಕೊಪ್ಪ-ಬಿಜೆಪಿ- 65,718
ಎನ್.ಎಚ್. ಕೋನರೆಡ್ಡಿ-ಜೆಡಿಎಸ್-45‌,197
ಗೆಲುವಿನ ಅಂತರ: 20,521

ಹುಬ್ಬಳ್ಳಿ-ಧಾರವಾಡ ಪಶ್ಚಿಮ: ಸಮಬಲದ ಹೋರಾಟ, ಫಲಿತಾಂಶ ಕುತೂಹಲಕರ

ಅರವಿಂದ್ ಬೆಲ್ಲದ್ ಕುಟುಂಬಕ್ಕೆ ಹಲವು ವರ್ಷಗಳಿಂದ ಆಶೀರ್ವಾದ ಮಾಡುತ್ತ ಬಂದಿರುವ ಕ್ಷೇತ್ರ ಅಂದ್ರೆ ಅದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ. ಆದರೆ, ಈ ಬಾರಿ ಮಾತ್ರ ಕಾಂಗ್ರೆಸ್‌ನಲ್ಲಿ ಪ್ರಬಲ ಅಭ್ಯರ್ಥಿ ದೀಪಕ್ ಚಿಂಚೋರೆ ಇದ್ದು, ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ಓಡಾಟ ಮಾಡುತ್ತಾ ಜನರ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಅರವಿಂದ್ ಬೆಲ್ಲದ್‌ ಅವರಿಗೆ ನೇರಾನೇರ ಪೈಪೋಟಿ ನೀಡುವ ಪ್ರಬಲ ಅಭ್ಯರ್ಥಿ ಅಂತಲೇ ಚಿಂಚೋರೆ ಗುರುತಿಸಿಕೊಂಡಿದ್ದು, ಕೊನೆಯ ಕ್ಷಣದವರೆಗೂ ಈ ಪಶ್ಚಿಮ ಕ್ಷೇತ್ರದ ಕಾವು ಜೋರಾಗಿಯೇ ಇರಲಿದೆ. ಸದ್ಯಕ್ಕೆ ಟ್ರೆಂಡ್‌ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಪರವಿದ್ದು, ಯಾವಾಗ ಬೇಕಾದರೂ ಬದಲಾಗಬಹುದಾಗಿದೆ.

ಕಳೆದ ಚುನಾವಣೆ ಫಲಿತಾಂಶ
ಅರವಿಂದ್ ಬೆಲ್ಲದ್- ಬಿಜೆಪಿ- 96,462
ಇಸ್ಮಾಯಿಲ್ ತಮಟಗಾರ-ಕಾಂಗ್ರೆಸ್- 55,975
ಗೆಲುವಿನ ಅಂತರ: 40,487

ಇದನ್ನೂ ಓದಿ: ಕೊಪ್ಪಳ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕಾಂಗ್ರೆಸ್- ಬಿಜೆಪಿ ಮಧ್ಯೆ ಫೈಟ್, ಇದೆಯಾ ಗಾಲಿ ಜನಾರ್ದನ್ ರೆಡ್ಡಿ ಎಫೆಕ್ಟ್?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

By

Dolly Dhananjay
Koo

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year
Continue Reading

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

By

Hc grants interim bail to actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಕೊಡಗು

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.

VISTARANEWS.COM


on

By

murder case
Koo

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್‌ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.

murder case
Murder Case

ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು

murder case
Murder Case

ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
Murder Case

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading
Advertisement
Dolly Dhananjay
ಸಿನಿಮಾ3 ಗಂಟೆಗಳು ago

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dina Bhavishya
ಭವಿಷ್ಯ14 ಗಂಟೆಗಳು ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ1 ದಿನ ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ2 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ3 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು3 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು3 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು3 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ4 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌