Site icon Vistara News

Temple and Non-Veg : ಮಾಂಸ ತಿಂದು ದೇಗುಲ ಪ್ರವೇಶ ವಿಚಾರದಲ್ಲಿ ನನ್ನನ್ನು ಟೀಕಿಸಿದವರು ಈಗ ಎಲ್ಲಿದ್ದಾರೆ; ಸಿದ್ದರಾಮಯ್ಯ ಪ್ರಶ್ನೆ

siddaramaiah stopped all new projects and payments of corporations

ಬೆಂಗಳೂರು: ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ಯಾಕೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್​ ಮಾಡಿರುವ ಅವರು ಮಾಂಸ ತಿನ್ನುವುದು, ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂಬುದಾಗಿಯೂ ಅವರು ಹೇಳಿದರು.

ಮಾಂಸಾಹಾರ ಸೇವಿಸಿ ದೇವರ ದರ್ಶನ ಪಡೆದ ಆರೋಪ ವಿಚಾರದಲ್ಲಿ ಪರದೂಷಣೆ ಮಾಡುತ್ತಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಅದನ್ನು ಬಿಟ್ಟು ಸಲ್ಲದ ಚರ್ಚೆಗಳು ಮಾಡಬಾರದು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೊ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿಟಿ ರವಿ ಅವರ ವಾದ ಸರಿಯಲ್ಲ. ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಅವರು ಹೇಳಿದರು.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : ಮಾಂಸ ತಿಂದು ದೇವಾಲಯಕ್ಕೆ ಹೋಗುವುದು ಅಪರಾಧ ಅನ್ನೋ ಬಿಜೆಪಿ ಸಿ.ಟಿ.ರವಿ ಬಗ್ಗೆ ತುಟಿ ಬಿಚ್ಚುವುದಿಲ್ಲ: ಕಾಂಗ್ರೆಸ್‌ ಟೀಕೆ

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂಬುದಾಗಿಯೂ ಅವರು ಪ್ರಶ್ನಿಸಿದರು.

Exit mobile version