ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ಸುಳ್ಯ, ಪುತ್ತೂರು, ಕಡಬದಲ್ಲಿ ನಿಷೇಧಾಜ್ಞೆ ಜಾರಿ ನಡುವೆಯೂ ಹಿಂದು ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ತೀವ್ರ ಒತ್ತಾಯ ಮಾಡಿವೆ.
ಜಿಲ್ಲೆಯಲ್ಲಿ ಬಹುತೇಕ ಪ್ರದೇಶಗಳಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂದಿದ್ದು, ವಿವಿಧೆಡೆ ಶಾಲಾ-ಕಾಲೇಜುಗಳು ಮುಚ್ಚಲಾಗಿದ್ದು, ವ್ಯಾಪಾರಿಗಳು ಸ್ವಯಂ ಘೋಷಿತವಾಗಿ ಅಂಗಡಿಗಳನ್ನು ಮುಚ್ಚಿ ಬಂದ್ ಬೆಂಬಲ ನೀಡಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಆಯೋಜಿಸಲಾಗಿದೆ.
ಮುಂಜಾನೆ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಅಪರಿಚಿತರಿಂದ ಕಲ್ಲೆಸೆಯಲಾಗಿದೆ. ಇನ್ನು ಬಂದ್ ಕರೆಯಿಲ್ಲದಿದ್ದರೂ ಕುಕ್ಕೆ ಸುಬ್ರಹ್ಮಣ್ಯ, ಬಂಟ್ವಾಳ ತಾಲೂಕಿನ ವಿಟ್ಲಪೇಟೆಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿದ್ದು, ಸುಳ್ಯ ಬಸ್ ನಿಲ್ದಾಣ ಸೇರಿ ವಿವಿಧೆಡೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಹಿಂದು ಪರ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ | Praveen Nettaru Murder | ಹುಟ್ಟೂರಿನತ್ತ ಪ್ರವೀಣ್ ಮೃತ ದೇಹ, ಅಂತ್ಯಕ್ರಿಯೆಗೆ ಸಿದ್ಧತೆ