ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ಹಳೆಯದಾದ ಸಿಮೆಂಟ್ ಟ್ಯಾಂಕ್ ಒಳಗೆ ಬಿದ್ದು ಕಾಡಾನೆ (Elephant Death) ಮೃತಪಟ್ಟಿದೆ.
ಶನಿವಾರಸಂತೆಯ ಎಳನೀರುಗುಂಡಿ ಎಸ್ಟೇಟ್‌ನಲ್ಲಿ ನಡೆದ ದುರ್ಘಟನೆ ನಡೆದಿದೆ. ಚಂದ್ರಶೇಖರ್ ಎಂಬುವವರ ಮನೆ ಬಳಿಯ ಹಳೆ ಗುಂಡಿಗೆ ಬಿದ್ದು ಮೃತಪಟ್ಟಿದೆ. ನಿಡ್ತ ಮಿಸಲು ಅರಣ್ಯದಿಂದ ಆಹಾರ ಅರಸಿ ಈ ಕಾಡಾನೆ ತೋಟಕ್ಕೆ ಬಂದಿದೆ ಎನ್ನಲಾಗಿದೆ.
ಈ ವೇಳೆ ತೋಟದ ಸಿಮೆಂಟ್ ಟ್ಯಾಂಕ್ ಬಳಿ ಬಂದಾಗ ಆಯತಪ್ಪಿ ಅದರೊಳಗೆ ಬಿದ್ದಿರುವ ಕಾಡಾನೆಯು ಮೇಲೆ ಏಳಲಾಗದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಶನಿವಾರಸಂತೆ ವಲಯ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Electric shock: ಜಮೀನಿನಲ್ಲಿ ಅಳವಡಿಸಿದ್ದ ತಂತಿಗೆ ಅಕ್ರಮ ವಿದ್ಯುತ್ ಸಂಪರ್ಕ; ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಚಾಮರಾಜನಗರದಲ್ಲಿ ಬಚಾವ್ ಆಗಿತ್ತು ಆನೆ; ಶ್ಲಾಘಿಸಿರುವ ಮೋದಿ
ಜಮೀನುಗಳಲ್ಲಿ ಬೇಲಿಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡುವ ಪ್ರಕರಣಗಳು ಆಗಾಗ ಕಂಡುಬರತ್ತಲೇ ಇವೆ. ಇದರಿಂದ ಸಾಕಷ್ಟು ಸಾವು-ನೋವುಗಳೂ ಸಂಭವಿಸುತ್ತಿದ್ದು, ಸೂಕ್ತ ಜಾಗೃತಿ ಮೂಡಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಇದೇ ರೀತಿಯಾಗಿ ಚಾಮರಾಜನಗರ ಜಿಲ್ಲೆಯಲ್ಲಿಯೂ ಈಚೆಗೆ ಪ್ರಕರಣ ನಡೆದಿತ್ತು. ಆನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿತ್ತು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರ ಹರಸಹಾಸದಿಂದ ಬದುಕುಳಿದಿತ್ತು. ಗುಂಡ್ಲುಪೇಟೆ ತಾಲೂಕು ಬರಗಿ ಸಮೀಪ ಬಂಡೀಪುರ ಓಂಕಾರ ಅರಣ್ಯ ವಲಯದ ವ್ಯಾಪ್ತಿಯ ಜಮೀನೊಂದರಲ್ಲಿ ಈ ಪ್ರಕರಣ ನಡೆದಿತ್ತು.
ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ
ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕಾಡಾನೆಯೊಂದನ್ನು ಬದುಕಿಸುವಲ್ಲಿ ಯಶಸ್ವಿಯಾಗಿದ್ದ ಬಂಡೀಪುರ ಅರಣ್ಯ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶನಿವಾರ (ಫೆ.೧೮) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಡಾನೆಗೆ ನೀಡಲಾಗುತ್ತಿದ್ದ ಚಿಕಿತ್ಸೆಯ ದೃಶ್ಯಗಳುಳ್ಳ ಫೋಟೊಗಳ ಸಹಿತ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಇದನ್ನು ನೋಡಿ ನನಗೆ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ನಿಜಕ್ಕೂ ಶ್ಲಾಘನೀಯ” ಎಂದು ಕೊಂಡಾಡಿದ್ದಾರೆ.
ಇದನ್ನೂ ಒದಿ: Cheetahs From South Africa: ದಕ್ಷಿಣ ಆಫ್ರಿಕಾದಿಂದ 10 ತಾಸು ಪ್ರಯಾಣ ಮಾಡಿ ಭಾರತ ತಲುಪಿದ 12 ಚೀತಾಗಳು
ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಭೂಪೇಂದ್ರ ಯಾದವ್ ಅವರು ಈ ಇಡೀ ಸಂಗತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿ ಶ್ಲಾಘನೆ ವ್ಯಕ್ತಪಡಿಸಿದ್ದರು. “ಬಂಡೀಪುರ ಹುಲಿ ರಕ್ಷಿತಾರಣ್ಯದ ಸಿಬ್ಬಂದಿಯ ಸಕಾಲಿಕ ಕ್ರಮದಿಂದಾಗಿ ವಿದ್ಯುತ್ ಸ್ಪರ್ಶದಿಂದ ಪ್ರಾಣಾಪಾಯದಿಂದ ನರಳುತ್ತಿದ್ದ ಆನೆಯನ್ನು ರಕ್ಷಿಸಲಾಗಿದೆ ಎಂಬ ವಿಷಯ ತಿಳಿದು ನನಗೆ ತುಂಬಾ ಸಂತೋಷವಾಗಿದೆ. ಹೆಣ್ಣು ಆನೆಯನ್ನು ಮತ್ತೆ ಮೀಸಲು ಪ್ರದೇಶಕ್ಕೆ ಬಿಡಲಾಗಿದೆ. ಜತೆಗೆ ಅದರ ಮೇಲೆ ನಿರಂತರ ನಿಗಾ ಇಡಲಾಗುತ್ತಿದೆ ಎಂದು ಭೂಪೇಂದ್ರ ಯಾದವ್ ಬರೆದುಕೊಂಡಿದ್ದರು. ಸಚಿವ ಭೂಪೇಂದ್ರ ಯಾದವ್ ಮಾಡಿರುವ ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಪ್ರಧಾನಿ, ಖುಷಿಯೊಂದಿಗೆ ಒಂದೆರೆಡು ಸಾಲುಗಳನ್ನು ಬರೆದುಕೊಂಡಿದ್ದಾರೆ.
ಕಾಡಾನೆಗೆ ನೀಡಲಾಗುತ್ತಿದ್ದ ಚಿಕಿತ್ಸೆಯ ದೃಶ್ಯಗಳುಳ್ಳ ಫೋಟೊಗಳ ಸಹಿತ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಇದನ್ನು ನೋಡಿ ನನಗೆ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ನಿಜಕ್ಕೂ ಶ್ಲಾಘನೀಯ” ಎಂದು ಕೊಂಡಾಡಿದ್ದಾರೆ.
ಟ್ವೀಟ್ ಮಾಡಿದ್ದ ಭೂಪೇಂದ್ರ ಯಾದವ್
ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಭೂಪೇಂದ್ರ ಯಾದವ್ ಅವರು ಈ ಇಡೀ ಸಂಗತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿ ಶ್ಲಾಘನೆ ವ್ಯಕ್ತಪಡಿಸಿದ್ದರು. “ಬಂಡೀಪುರ ಹುಲಿ ರಕ್ಷಿತಾರಣ್ಯದ ಸಿಬ್ಬಂದಿಯ ಸಕಾಲಿಕ ಕ್ರಮದಿಂದಾಗಿ ವಿದ್ಯುತ್ ಸ್ಪರ್ಶದಿಂದ ಪ್ರಾಣಾಪಾಯದಿಂದ ನರಳುತ್ತಿದ್ದ ಆನೆಯನ್ನು ರಕ್ಷಿಸಲಾಗಿದೆ ಎಂಬ ವಿಷಯ ತಿಳಿದು ನನಗೆ ತುಂಬಾ ಸಂತೋಷವಾಗಿದೆ. ಹೆಣ್ಣು ಆನೆಯನ್ನು ಮತ್ತೆ ಮೀಸಲು ಪ್ರದೇಶಕ್ಕೆ ಬಿಡಲಾಗಿದೆ. ಜತೆಗೆ ಅದರ ಮೇಲೆ ನಿರಂತರ ನಿಗಾ ಇಡಲಾಗುತ್ತಿದೆ ಎಂದು ಭೂಪೇಂದ್ರ ಯಾದವ್ ಬರೆದುಕೊಂಡಿದ್ದರು.
ಸಚಿವ ಭೂಪೇಂದ್ರ ಯಾದವ್ ಮಾಡಿರುವ ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಪ್ರಧಾನಿ, ಖುಷಿಯೊಂದಿಗೆ ಒಂದೆರೆಡು ಸಾಲುಗಳನ್ನು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Maha Shivaratri 2023: ಧಾರವಾಡ ಸೋಮೇಶ್ವರನ ಗರ್ಭಗುಡಿ ಪ್ರವೇಶಕ್ಕೆ ಅವಕಾಶ; ಐತಿಹಾಸಿಕ ತ್ರಿಕುಟೇಶ್ವರನಿಗೆ ವಿಶೇಷ ಪೂಜೆ
ಏನಿದು ಪ್ರಕರಣ?
ಗುಂಡ್ಲುಪೇಟೆ ತಾಲೂಕು ಬರಗಿ ಸಮೀಪ ಬಂಡೀಪುರ ಓಂಕಾರ ಅರಣ್ಯ ವಲಯದ ವ್ಯಾಪ್ತಿಯ ಜಮೀನೊಂದರಲ್ಲಿ ಅಕ್ರಮವಾಗಿ ಎಳೆಯಲಾಗಿದ್ದ ವಿದ್ಯುತ್ ತಂತಿ ಬೇಲಿಗೆ ತಾಗಿ ಕಾಡಾನೆಯೊಂದು ಕುಸಿದುಬಿದ್ದಿತ್ತು. ಅದಕ್ಕೆ ತೀವ್ರವಾಗಿ ವಿದ್ಯುತ್ ಆಘಾತವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕಾಡಾನೆಯನ್ನು ಬದುಕಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯಕೀಯ ತಂಡವು ಹರಸಾಹಸವನ್ನೇ ಪಟ್ಟಿದ್ದವು. ಸತತ ನಾಲ್ಕು ಗಂಟೆಗಳ ಚಿಕಿತ್ಸೆಯ ತರುವಾಯ ಕಾಡಾನೆಯು ಜೀವ ಉಳಿಸಿಕೊಂಡಿತ್ತು.