ಮಂಗಳೂರು: ಕಳೆದ ಕೆಲವು ದಿನಗಳಿಂದ ಕಾಡಾನೆ ರಸ್ತೆಗೆ ಬರುವ ದೃಶ್ಯ ಮಂಗಳೂರಿನಲ್ಲಿ ಕಂಡುಬಂದಿದೆ. ಆದರೆ ಇತ್ತೀಚೆಗೆ ನಡೆದ ಘಟನೆ ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ. ಮಂಗಳೂರಿಗೆ ಹೋಗುವ ಶಿರಾಡಿಘಾಟ್‌ನ ರಸ್ತೆಯಲ್ಲಿ ಕಾಡಾನೆಯೊಂದು ಅಡ್ಡಲಾಗಿ ಬಂದಿದೆ.
ಶಿರಾಡಿಘಾಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರ್‌ಗೆ ಸರಿಯಾಗಿ ಕಾಡಾನೆ ಅಡ್ಡ ಬಂದಿದೆ. ಕಾರ್‌ನಲ್ಲಿದ್ದ ಪ್ರಯಾಣಿಕರು ಆತಂಕಗೊಂಡು ಕಾರ್ ಇಳಿದು ಓಡಿದ್ದಾರೆ. ತಮ್ಮ ವಾಹನಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಿದ್ದಾರೆ. ಓರ್ವ ಮಹಿಳೆ ಹಾಗೂ ಮತ್ತೋರ್ವ ವ್ಯಕ್ತಿ ಕೂದಲೆಳೆಯ ಅಂತರದಲ್ಲಿ ಕಾಡಾನೆಯಿಂದ ಪಾರಾಗಿದ್ದಾರೆ.
ಈ ಘಟನೆಯಲ್ಲಿ ಸದ್ಯ ಯಾವುದೇ ಜೀವಹಾನಿಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.
ಈ ಹಿಂದೆಯೂ ಕಾಡಾನೆ ರಸ್ತೆಗೆ ಬರುವುದು ಕಂಡಿದ್ದು ಇದರಿಂದ ಸ್ಥಳೀಯರು ಗಾಬರಿಗೊಂಡಿದ್ದರು. ಹಾಗೂ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು.
ಆದರೆ, ಈ ಬಗ್ಗೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ಗಂಭೀರ ವಿಷಯವಾಗಿದ್ದು, ಇದನ್ನು ಅರಣ್ಯ ಇಲಾಖೆಯವರು ಅಲಕ್ಷ್ಯ ಮಾಡದೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹೆಚ್ಚಿನ ಓದಿಗಾಗಿ: ನೇಕಾರರ, ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ವಿಸ್ತರಣೆ : CM ಬಸವರಾಜ ಬೊಮ್ಮಾಯಿ