Site icon Vistara News

Wild animal poaching : ತಲಕಾವೇರಿ ಕಾಡಿನಲ್ಲಿ ಬೇಟೆಗೆ ಬಂದ ನಾಲ್ವರಲ್ಲಿ ಒಬ್ಬನ ಸೆರೆ, ಮೂವರು ಪರಾರಿ

wild animals

#image_title

ಮಡಿಕೇರಿ: ಕೇರಳ ರಾಜ್ಯದ ಗಡಿಯಿಂದ ಅಕ್ರಮವಾಗಿ ನಾಡಬಂದೂಕಿನೊಂದಿಗೆ ತಲಕಾವೇರಿ ವನ್ಯಜೀವಿ ವಲಯದಲ್ಲಿ ಬೇಟೆಗೆಂದು (Wild animal poaching) ಬಂದಿದ್ದ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾರ್ಯಾಚರಣೆ ಸಂದರ್ಭ ಮೂವರು ತಲೆ ಮರೆಸಿಕೊಂಡಿದ್ದಾರೆ.

ತಲಕಾವೇರಿ ವನ್ಯಜೀವಿ ವಲಯದ ಪದಿನಾಲ್ಯನಾಡು ಮೀಸಲು ಅರಣ್ಯದಲ್ಲಿ ಬೇಟೆಗಾರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಚಾಂದೆಟ್ಟುಕೊಲ್ಲಿ ಗಸ್ತು ಹಾಗೂ ಉಪವಲಯದ ಸಿಬ್ಬಂದಿ ದಾಳಿ ನಡೆಸಿದರು.

ಒಂಟಿ ನಳಿಕೆಯ ಎರಡು ನಾಡ ಬಂದೂಕು ಸಹಿತ ಓರ್ವ ಆರೋಪಿಯನ್ನು ವಶಕ್ಕೆ ಪಡೆದರು. ತಲೆ ಮರೆಸಿಕೊಂಡಿರುವ ಮೂವರ ಪತ್ತೆಗೆ ತನಿಖೆ ಮುಂದುವರೆದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಹಾಗೂ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ ನಾಯಕ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಅಧಿಕಾರಿಗಳಾದ ಕೆ.ಕೊಟ್ರೇಶ, ಆನಂದ ಕೆ.ಕೆ, ಗಸ್ತು ವನಪಾಲಕ ಯತೀಶ್ ಬಿ.ಎಂ, ಸುಬ್ರಮಣಿ ಕೆ.ಎಂ ಹಾಗೂ ಕಳ್ಳ ಬೇಟೆ ತಡೆ ಶಿಬಿರದ ಸಿಬ್ಬಂದಿ ಪಾಲ್ಗೊಂಡಿದ್ದರು.

ಹೆಬ್ಬಲಸು ಅಕ್ರಮ ಸಾಗಾಟ: ಸಂಪಾಜೆಯಲ್ಲಿ ಆರೋಪಿ ಸೆರೆ

ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಒಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಸಂಪಾಜೆ ಅರಣ್ಯ ತನಿಖಾ ಠಾಣೆ ಮೂಲಕ ಸಾಗುತ್ತಿದ್ದ ಲಾರಿಯನ್ನು ತಡೆದ ತಪಾಸಣಾ ತಂಡ ಆರೋಪಿ ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದ ನಿವಾಸಿ ಮಹಮ್ಮದ್ ಸಫ್ಯಾನ್ (26) ನನ್ನು ಬಂಧಿಸಿತು. ಲಾರಿ ಮತ್ತು ಹೆಬ್ಬಲಸು ಮರದ 12 ನಾಟಗಳನ್ನು ವಶಕ್ಕೆ ಪಡೆಯಿತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಖೆ ಕೈಗೊಳ್ಳಲಾಗಿದೆ.

ಸಾಗುವಾನಿ ನಾಟಾದೊಂದಿಗೆ ಒಬ್ಬನ ಬಂಧನ

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ. ಎ.ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೊಯಿಸಿನ್ ಬಾಷಾ ಹಾಗೂ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಮಾರ್ಗದರ್ಶನದಲ್ಲಿ ತನಿಖಾ ಠಾಣೆಯಲ್ಲಿ ಕಾರ್ಯನಿರತರಾಗಿದ್ದ ಉಪ ವಲಯ ಅರಣ್ಯಾಧಿಕಾರಿ ಬಸವರಾಜಪ್ಪ ಪತ್ತೆ ಪ್ರಕರಣ ಪತ್ತೆ ಹಚ್ಚಿದರು.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿನಯಕೃಷ್ಣ ಎಂ.ಸಿ, ಗಸ್ತು ಅರಣ್ಯಪಾಲಕರಾದ ನಾಗರಾಜ್ ಎಸ್, ಕಾರ್ತಿಕ್ ಡಿ., ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಮತ್ತಿತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ Murder Case: ಜಾತ್ರೆಗಾಗಿ ಬಂದವಳನ್ನು ಚಾಕುವಿನಿಂದ ಇರಿದು ಕೊಂದ ಭಗ್ನ ಪ್ರೇಮಿ

Exit mobile version