Ram Mandir: ರಾಮಲಲ್ಲಾ ಪ್ರತಿಷ್ಠಾಪನೆಗೆ ನಾನು ಹೋಗಲ್ಲ; ಜ. 22ರ ಬಳಿಕ ಹೋಗುವೆ: ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

Ram Mandir: ರಾಮಲಲ್ಲಾ ಪ್ರತಿಷ್ಠಾಪನೆಗೆ ನಾನು ಹೋಗಲ್ಲ; ಜ. 22ರ ಬಳಿಕ ಹೋಗುವೆ: ಸಿಎಂ ಸಿದ್ದರಾಮಯ್ಯ

Ram Mandir: ನಾನು ಕೂಡ ಶ್ರೀರಾಮನ ಭಕ್ತ. ಆದರೆ, ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧ ನಮ್ಮ ಹೋರಾಟವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ. ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah infront of ayodhya ram mandir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಅಯೋಧ್ಯೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರೂ ಬೆಂಬಲಿಸಿದ್ದಾರೆ. ಹೀಗಾಗಿ ಅಂದು ತಾವು ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಜ.22ರ ನಂತರ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಲು ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಕೂಡ ಶ್ರೀರಾಮನ ಭಕ್ತ. ಆದರೆ, ಬಿಜೆಪಿಯವರು ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧ ನಮ್ಮ ಹೋರಾಟವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ. ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಹೈಕಮಾಂಡ್‌ ಟಾಸ್ಕ್‌; ಲೋಕಸಭೆಯಲ್ಲಿ ಸ್ಪರ್ಧಿಸಿ, ಇಲ್ಲವೇ ಗೆಲ್ಲಿಸಿ; ಸೋತರೆ ತಲೆದಂಡ!

ದೇವಸ್ಥಾನಗಳಲ್ಲಿ ಪೂಜೆ ಮಾಡಲು ನಾನು ಹೇಳಿಲ್ಲ: ಸಿದ್ದರಾಮಯ್ಯ

ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಜ್ಯದಲ್ಲಿ ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ? ಶ್ರೀರಾಮಚಂದ್ರ ಇಲ್ಲಿ ಇಲ್ಲವೇ? ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿಯೂ ಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೂ ಶ್ರೀರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ಮಟ್ಟದ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.

ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ ಆಗಿದ್ದೇವೆ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ. ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ, ಖರ್ಗೆ ಹೋಗದಿರುವುದೇ ಸರಿ: ಸಿಎಂ

ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕರು (Congress leaders) ಭಾಗವಹಿಸದೇ ಇರುವ ನಿರ್ಧಾರಕ್ಕೆ ಬಂದಿರುವುದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸಮರ್ಥನೆ ಮಾಡಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge), ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ಚೌದರಿ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ‌ ಎಂದು ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುವ ಮೂಲಕ ಬೆಂಬಲವನ್ನು ವ್ಯಕ್ತಪಡಿಸಿದ್ದರು.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ. ಇದನ್ನು ನಾನು ಬೆಂಬಲಿಸುತ್ತೇನೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದು ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ.

ಹಿಂದು ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.

ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ

ಆದರೆ, ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ಧೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್, ವಿಶ್ವ ಹಿಂದು ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ.

ಹಿಂದುಗಳನ್ನು ಒಡೆಯುವ ಕಾರ್ಯಕ್ರಮ

ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ. ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ. ಸಮಸ್ತ ಹಿಂದುಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದುಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ.

ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ

ಇನ್ನೇನು ಹತ್ತು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಲೋಕಸಭಾ ಚುನಾವಣೆಯ ಕಾಲದಲ್ಲಿಯೇ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ.

ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ

ಕಳೆದ 30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನತೆ ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ. ಈಗಾಗಲೇ ಜನ ಇಟ್ಟಿಗೆಯ ಹೆಸರಲ್ಲಿ ಸಂಗ್ರಹಿಸಿರುವ ದೇಣಿಗೆಯ ಲೆಕ್ಕವನ್ನು ಕೇಳತೊಡಗಿದ್ದಾರೆ.

ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ

ನಾವು ಹಿಂದು ಧರ್ಮದ ವಿರೋಧಿಗಳಲ್ಲ, ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪ್ರಶ್ಯತೆ, ಜಾತೀಯತೆ, ಅಂಧಶ್ರದ್ದೆ, ಕಂದಾಚಾರಗಳನ್ನು ವಿರೋಧಿಸುತ್ತೇವೆ. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರು, ಕುವೆಂಪು ಅವರು ಸೇರಿದಂತೆ ದೇಶದ ಅನೇಕಾನೇಕ ಮಹನೀಯರು ಆಚರಿಸುತ್ತಾ ಬಂದಿರುವ ಹಿಂದೂ ಧರ್ಮದ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಆದರೆ, ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದ ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ. ಈ ವಿಷಯದಲ್ಲಿ ನಾವು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಮಾಡುವುದಿಲ್ಲ.

ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ

ಜನಪ್ರತಿನಿಧಿಯಾಗಿ ಇಲ್ಲಿಯವರೆಗೆ ನೂರಾರು ದೇವಸ್ಥಾನಗಳ ಪ್ರತಿಷ್ಠಾಪನೆ, ಜೀರ್ಣೋದ್ದಾರದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಊರಿನಲ್ಲಿಯೇ ರಾಮನ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇನೆ. ಇದೇ ರೀತಿ ಮಸೀದಿ-ಚರ್ಚ್‌ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದ್ದೇನೆ. ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಲೇ ಬೇಕಾಗಿದೆ.

ಇದನ್ನೂ ಓದಿ: Lok Sabha Election 2024: ಮೈಸೂರಿನಲ್ಲಿ ಮತ್ತೆ ಸ್ಪರ್ಧಿಸಲು ಕುಮಾರಸ್ವಾಮಿ ಬೆಂಬಲ ಕೋರಿದ ಸಂಸದ ಪ್ರತಾಪ್‌ ಸಿಂಹ

ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧ

ಶ್ರೀರಾಮನ ಮೇಲೆ ನಂಬಿಕೆ ಮತ್ತು ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಅದೇ ರೀತಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡಾ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದೆ. ಯಾವ ಧರ್ಮ ಕೂಡಾ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

LKG UKG in Anganwadis: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.

VISTARANEWS.COM


on

LKG UKG in Anganwadis
Koo

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ (LKG UKG in Anganwadis) ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಿದ್ದಾರೆ.

ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವು ನಮ್ಮ ಉದ್ದೇಶವಾಗಿದೆ,. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನ ಮಾಡಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚನೆ: ಲಕ್ಷ್ಮಿ ಹೆಬ್ಬಾಳ್ಕರ್‌

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

ಇದನ್ನೂ ಓದಿ | LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

ಕ್ರೈಂ

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

Tumkur Shoot out : 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಬಿಯರ್‌ ಬಾಟೆಲ್‌ ಎಸೆದು ಹಲ್ಲೆ ಮಾಡಲು ಮುಂದಾಗಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

VISTARANEWS.COM


on

By

tumkur Shoot out
ಆರೋಪಿ ರಿಜ್ವಾನ್
Koo

ತುಮಕೂರು: ತುಮಕೂರಿನಲ್ಲಿ ಪೊಲೀಸ್ ತುಪಾಕಿ (Tumkur Shoot out) ಸದ್ದು ಮಾಡಿದೆ. ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಆರೋಪಿ ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ (ಜೂ.24) ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್‌ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್‌ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್‌ ಬಿಯರ್ ಬಾಟಲ್‌ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.

tumkur Shoot out
ಗಾಯಾಳು ಪೊಲೀಸ್‌ ಪೇದೆ ರಮೇಶ್‌

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ಬಿಯರ್‌ ಬಾಟೆಲ್‌ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್‌ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೂ ರಿಜ್ವಾನ್‌ ಮೇಲೆ ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಹಾಗೂ ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿವೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ತುಮಕೂರು ಎಸ್‌ಪಿ ಅಶೋಕ್ ಕೆ.ವಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಳೆದ ಎರಡು ತಿಂಗಳಿಂದ ಸುಮಾರು 18 ಸರಗಳ್ಳತನ ಆಗಿತ್ತು. ಹಳ್ಳಿಗಳಿಗೆ ಹೋಗಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದರು. ಮಧುಗಿರಿ ಡಿವೈಎಸ್‌ಪಿ ನೇತೃತ್ವದಲ್ಲಿ ಆರೋಪಿಗಳನ್ನು ಸೆರೆಹಿಡಿಯಲು ತಂಡ ರಚನೆ ಮಾಡಲಾಗಿತ್ತು. A1 ಆರೋಪಿ ಚಿನ್ನು ಎಂಬಾತನನ್ನು ಮೊದಲಿಗೆ ಬಂಧಿಸಲಾಗಿತ್ತು. A2 ಆರೋಪಿ ರಿಜ್ವಾನ್ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಹೊಸಕೋಟೆಯಿಂದ ಆರೋಪಿ ರಿಜ್ವಾನ್‌ನನ್ನು ಬಂಧಿಸಿ ಕರೆತರುವಾಗ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಈಜಿಹಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಬಿಯರ್ ಬಾಟಲ್‌ನಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾ‌ನೆ. ಆಗ ಮಧುಗಿರಿ ಸಿಪಿಐ ಹನುಮಂತರಾಯಪ್ಪ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡು ಹೊಡೆದು ಬಂಧಿಸಿದ್ದಾರೆಂದು ಮಾಹಿತಿ ಬಂದಿದೆ. ಪೊಲೀಸ್ ಸಿಬ್ಬಂದಿಯ ಎಡಗೈಗೆ ಗಾಯ ಆಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗಾಗಲೇ ಆರೋಪಿಗಳು ಕದ್ದ ಚಿನ್ನವನ್ನು ರಿಕವರಿ ಮಾಡಲಾಗಿದೆ. 500 ಗ್ರಾಂ ಚಿನ್ನವನ್ನ ರಿಕವರಿ ಮಾಡಲಾಗಿದೆ ಎಂದರು.

ಕೊಡಗಿನಲ್ಲಿ ಮತ್ತೆ ಮಾರ್ಧನಿದ ಗುಂಡಿನ ಸದ್ದು

ಕೊಡಗಿನ ಕುಶಾಲನಗರಲ್ಲಿ ತಡರಾತ್ರಿ 12 ಗಂಟೆಗೆ ಗುಂಡಿನ ಶಬ್ಧ ಕೇಳಿ ಬಂದಿದೆ. ಅನುದೀಪ್ ( ಡುಮ್ಮಿ) ಮತ್ತು ಶಶಿಕುಮಾರ್ ಗೌಡ (ಎಂಎಲ್ಎ ಶಶಿ) ಇವರಿಬ್ಬರು ಸ್ನೇಹಿತರಾಗಿದ್ದಾರೆ. ತಡರಾತ್ರಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಈ ವೇಳೆ ಅನುದೀಪ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ಶಶಿ ಕಾಲಿಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರದ ಚೌಡೇಶ್ವರಿ ಬಡಾವಣೆ ಗುಮ್ಮನಕೊಲ್ಲಿಯಲ್ಲಿ ಘಟನೆ ನಡೆದಿದೆ. ಕುಶಾಲನಗರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

LKG UKG In Govt Schools: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

VISTARANEWS.COM


on

LKG UKG In Govt Schools
Koo

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ (LKG UKG In Govt Schools) ಪ್ರಾರಂಭ ವಿರೋಧಿಸಿ, ಗೌರವ ಧನ ಹೆಚ್ಚಳ ಹಾಗೂ ಗುಣಮಟ್ಟದ ಆಹಾರ ಪೂರೈಕೆ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತಿದೆ. ಹೀಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳ ಬಗ್ಗೆ ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಬೇಡಿಕೆಗಳ ಪೈಕಿ ಕೆಲವೊಂದನ್ನು ಪರಿಶೀಲಿಸಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಸರ್ಕಾರದ ಈ ನಿರ್ಧಾರದ ಹಿಂದೆ, ಅಂಗನವಾಡಿಗಳನ್ನು ಮುಚ್ಚುವ ಹುನ್ನಾರವಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಗಳಲ್ಲೇ ಆರಂಭಿಸಬೇಕು. ಇಲ್ಲದಿದ್ದರೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂಬುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒತ್ತಾಯವಾಗಿದೆ.

ತಜ್ಞರ ಕಮಿಟಿ ರಚನೆ ಮಾಡಲು ಚರ್ಚೆ: ಲಕ್ಷ್ಮಿ ಹೆಬ್ಬಾಳ್ಕರ್‌

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರದಿಂದ ಚಿಂತನೆ ಮಾಡಲಾಗಿದೆ. ಆದರೆ, ಈ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವ ಕಳಕಳಿ ಶಿಕ್ಷಣ ಇಲಾಖೆಗೆ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಬೇಡ ಎಂಬುವುದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಗಿದೆ, ಅಂಗನವಾಡಿಗಳನ್ನು ಮೇಲ್ದೆರ್ಜೇಗೇರಿಸುವ ಬಗ್ಗೆ ಸಿಎಂ ಹೇಳಿದ್ದಾರೆ. ಕನ್ನಡ, ಇಂಗ್ಲಿಷ್ ಎರಡನ್ನೂ ಕಲಿಸುವ ಚಿಂತನೆ ಇದೆ. ಸರ್ಕಾರಿ ಮಾಂಟೆಸ್ಸರಿ ಮಾದರಿಯಲ್ಲಿ ಮಾಡುತ್ತೇವೆ. 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾನ್ಸ್‌ ಡಿಪಾರ್ಟ್‌ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ. ಪ್ರಸ್ತುತ 2600 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

Suraj Revanna Case: 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ ನಡೆದಿದೆ. ಅಣ್ಣ ಸೂರಜ್ ನ್ಯಾಯಾಂಗ ಬಂಧನದಿಂದ ಸಿಐಡಿ ಕಸ್ಟಡಿಗೆ ಹೋದರೆ, ತಮ್ಮ ಪ್ರಜ್ವಲ್‌ನ ಎಸ್‌ಐಟಿ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರಾದ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, 10 ದಿನಕ್ಕೆ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಲು ಸೂಚಿಸಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಅಣ್ಣ ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು (Prajwal Revanna) ಕೋರ್ಟ್‌ಗೆ ಎಸ್ಐಟಿ ಟೀಂ ಹಾಜರುಪಡಿಸಿತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ನೀಡಿದೆ.

ಸೋದರ ಸೂರಜ್ ರೇವಣ್ಣ ಕೇಸ್‌ನ ಆದೇಶ ಬರೆಸುತ್ತಿರುವುದನ್ನು ನೋಡಿದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸಿಐಡಿ‌ ಕಸ್ಟಡಿಗೆ ಹೋಗಲಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಅಣ್ಣನನ್ನು ಎಷ್ಟು ದಿನ ಕಸ್ಟಡಿಗೆ ನೀಡಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಜ್ವಲ್ ಕೇಳಿದ್ದಾರೆ.

ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

suraj revanna shivakumar

ಹಾಸನ: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Homosexuality, abnormal sexual abuse, physical abuse) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ (Suraj Revanna Case) ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಕಾಣಿಸಿಕೊಂಡಿದೆ. ಸಂತ್ರಸ್ತ ಯುವಕನ ವಿರುದ್ಧ ದೂರು ನೀಡಿದ್ದ ಸೂರಜ್‌ ರೇವಣ್ಣ ಮಾಜಿ ಆಪ್ತ ಶಿವಕುಮಾರನೇ ಆ ಯುವಕನನ್ನು ಸೂರಜ್‌ಗೆ ಪರಿಚಯ ಮಾಡಿಸಿಕೊಟ್ಟಿದ್ದ ಎಂಬುದು ಖಚಿತವಾಗಿದ್ದು, ಸೂರಜ್‌ಗೆ ʼಹನಿ ಟ್ರ್ಯಾಪ್‌ʼ (Honey trap) ಮಾಡಿಸಿದನೇ ಎಂಬ ಅನುಮಾನ ವ್ಯಕ್ತವಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರು ಪ್ರಕರಣ ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ. ಮೊದಲ ಸಂತ್ರಸ್ತ ಯುವಕನ ವಿರುದ್ಧ ದೂರು ನೀಡಿದ್ದ ಶಿವಕುಮಾರ್, ಇದೀಗ ದೂರು ನೀಡಿದ್ದ ಸಂತ್ರಸ್ತನ ಜೊತೆಗೇ ಸೇರಿಕೊಂಡಿದ್ದಾನೆ. ಹೀಗಾಗಿ, ಸೂರಜ್ ರೇವಣ್ಣ ಬಳಿ ಹಣ ಕೀಳಲು ಇಬ್ಬರೂ ಸೇರಿ ಪ್ಲಾನ್‌ ಮಾಡಿದ್ರಾ ಎಂಬ ಅನುಮಾನ ಮೂಡಿದೆ. ಹಲವು ವರ್ಷಗಳಿಂದ ಸೂರಜ್ ಜೊತೆಗೇ ಇದ್ದ ಶಿವಕುಮಾರ್‌, ಅವರ ವೀಕ್‌ನೆಸ್ ತಿಳಿದು ಸ್ಕೆಚ್ ಹಾಕಿರಬಹುದು ಎನ್ನಲಾಗಿದೆ.

ಯುವಕ ಐದು ಕೋಟಿ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ ಬಗ್ಗೆ ಶಿವಕುಮಾರ್ ಮತ್ತು ಸೂರಜ್ ದೂರು ನೀಡಿದ್ದರು. ಬ್ಲ್ಯಾಕ್‌ಮೇಲ್ ಆರೋಪದಲ್ಲಿ ‌ಪಾತ್ರ ತಿಳಿಯುತ್ತಿದ್ದಂತೆ ಶಿವಕುಮಾರ್‌ ಉಲ್ಟಾ ಹೊಡೆದಿದ್ದಾನೆ. ಮೊದಲ ಸಂತ್ರಸ್ತ ಸಲ್ಲಿಸಿರುವ ದೂರಿನ ಮೇಲೆಯೂ ಅನುಮಾನ ಮೂಡಿದೆ. ಡಿಜಿಪಿಗೆ ಕೊಟ್ಟ‌ ದೂರಿಗೂ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆದ ದೂರಿಗೂ ವ್ಯತ್ಯಾಸವಿದೆ.

ಸಂತ್ರಸ್ತ ಮೊದಲು ಎರಡು ಪುಟಗಳ ದೂರು ನೀಡಿದ್ದ. ನಂತರ ಹದಿನಾಲ್ಕು ಪುಟಗಳ ದೂರು ವೈರಲ್ ಆಗಿದೆ. ಡಿಜಿಪಿ ಕಚೇರಿ‌ ಮುಂದೆ ನಿಂತು ಫೋಟೋ‌ ತೆಗೆದು ಯುವಕ ಸೂರಜ್‌ಗೆ ಕಳಿಸಿದ್ದ. ಸೂರಜ್‌ ಅನ್ನು ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡಲು ಈ ಫೋಟೋ‌ ಕಳಿಸಿರುವುದಾಗಿ ಆರೋಪವಿದೆ.

ಪರಿಚಯ ಮಾಡಿಸಿದ್ದೇ ಶಿವಕುಮಾರ್‌

ಅರಕಲಗೂಡು ಮೂಲದ ಯುವಕನನ್ನು ಸೂರಜ್‌ಗೆ ಪರಿಚಯ ಮಾಡಿಸಿದ್ದೇ ಶಿವಕುಮಾರ್ ಎಂಬುದು ಗೊತ್ತಾಗಿದೆ. ಶಿವಕುಮಾರ್, ಸೂರಜ್ ರೇವಣ್ಣನ ಆಪ್ತ. ಈತ ಒಳ್ಳೆಯ ಹುಡುಗ ಯುವಕನನ್ನು ಸೂರಜ್ ಬಳಿ ಕರೆತಂದು ಪರಿಚಯ ಮಾಡಿಕೊಟ್ಟಿದ್ದ ಶಿವಕುಮಾರ್. ಊರುಕಡೆ ಒಳ್ಳೆಯ ಸಂಘಟನೆ ಮಾಡಿಕೊಂಡಿದ್ದಾನೆ. ನಮ್ಮ ಪಕ್ಷಕ್ಕೆ ದುಡಿಯುತ್ತಾನೆ ಅಂತ ಯುವಕನ ಪರ ಹೇಳಿದ್ದ. ಖಾಸಗಿ ಫೈನಾನ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಅರಕಲಗೂಡು ಮೂಲದ ಯುವಕನನ್ನು 4 ತಿಂಗಳ ಹಿಂದೆ ಸೂರಜ್‌ಗೆ ಪರಿಚಯ ಮಾಡಿಸಿದ್ದ. ಹೀಗಾಗಿ, ಯುವಕನನ್ನು ಬಿಟ್ಟು ಸೂರಜ್ ಟ್ರ್ಯಾಪ್ ಮಾಡಿದನೇ ಸೂರಜ್ ಆಪ್ತ ಶಿವಕುಮಾರ್ ಎಂಬ ಅನುಮಾನ ಮೂಡಿದೆ.

ಈ ಅನುಮಾನಕ್ಕೆ ಪುಷ್ಟಿ ನೀಡುವಂತೆ ಇನ್ನೊಂದು ಘಟನೆಯೂ ನಡೆದಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಶಿವಕುಮಾರ್‌ ಬಿಜೆಪಿ ಬಣವೊಂದರ ನಾಯಕರ, ಕಾರ್ಯಕರ್ತರ ಜೊತೆ ಕಾಣಿಸಿಕೊಂಡಿದ್ದ. ಈ ಬಣ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌ ಗೆಲುವನ್ನು ಹಾಗೂ ಪ್ರಜ್ವಲ್‌ ರೇವಣ್ಣ ಸೋಲನ್ನು ಸಂಭ್ರಮಿಸಿತ್ತು. ಶ್ರೇಯಸ್ ಪರ ಸೆಲೆಬ್ರೇಷನ್ ಮಾಡಿದ ಬಿಜೆಪಿ ಕಾರ್ಯಕರ್ತರ ತಂಡದಲ್ಲಿ ಶಿವಕುಮಾರ್ ಕಂಡುಬಂದಿದ್ದ.

Suraj Revanna Case: ನಾಪತ್ತೆಯಾದ ಸೂರಜ್‌ ಆಪ್ತನ ವಿರುದ್ಧವೂ ದೂರು ನೀಡಿರುವ ಸಂತ್ರಸ್ತ!

ಹೀಗಾಗಿ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣರನ್ನು ಶಿವಕುಮಾರ್ ಸಿಲುಕಿಸಿದನೇ ಎಂಬ ಅನುಮಾನ ದಟ್ಟವಾಗಿದೆ. ಸೂರಜ್ ಪರ, ಸಂತ್ರಸ್ತ ಯುವಕನ ವಿರುದ್ಧ ಬ್ಲ್ಯಾಕ್‌ಮೇಲ್ ದೂರು ನೀಡಿ ನಂತರ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಶಿವಕುಮಾರ್ ವಿರುದ್ಧ ಅನುಮಾನ ಹೆಚ್ಚಿದೆ. ಜೊತೆಗಿದ್ದೇ ಖತರ್‌ನಾಕ್‌ ಪ್ಲಾನ್ ಮಾಡಿ, ಯುವಕನ ಮೂಲಕ ʼಹನಿಟ್ರ್ಯಾಪ್‌ʼ ಮಾಡಿದ ಶಿವಕುಮಾರ್, ಸೂರಜ್‌ ಬೆನ್ನಿಗೆ ಹಿಂದಿನಿಂದ ಇರಿದನೇ ಎಂಬ ಅನುಮಾನ ಪೊಲೀಸರಲ್ಲೂ ಮೂಡಿದೆ.

Continue Reading
Advertisement
JP Nadda
ದೇಶ6 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ7 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್17 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್32 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ39 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ44 mins ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ52 mins ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Job Alert
ಉದ್ಯೋಗ53 mins ago

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Unusual Story
Latest54 mins ago

Unusual Story: 15 ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿ ಗರ್ಭಿಣಿ! ಜೈಲು ಶಿಕ್ಷೆ

Suraj Revanna Case
ಕರ್ನಾಟಕ1 hour ago

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌