Will not sit with folded hands if chakravarthy sulibele is arrested says Kota Srinivas PoojaryKarnataka Politics: ಸೂಲಿಬೆಲೆಯನ್ನು ಬಂಧಿಸಿದರೆ ಕೈಕಟ್ಟಿ ಕೂರಲ್ಲ: ಕೋಟ ಶ್ರೀನಿವಾಸ ಪೂಜಾರಿ Vistara News
Connect with us

ಉಡುಪಿ

Karnataka Politics: ಸೂಲಿಬೆಲೆಯನ್ನು ಬಂಧಿಸಿದರೆ ಕೈಕಟ್ಟಿ ಕೂರಲ್ಲ: ಕೋಟ ಶ್ರೀನಿವಾಸ ಪೂಜಾರಿ

Karnataka Politics: ಚಕ್ರವರ್ತಿ ಸೂಲಿಬೆಲೆ ಅವರೇನೂ ಭಯೋತ್ಪಾದಕರಲ್ಲ. ಅವರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

VISTARANEWS.COM


on

Kota Srinivas Poojary
Koo

ಉಡುಪಿ: ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಬಗ್ಗೆ ಎಂ.ಬಿ. ಪಾಟೀಲ್ ಅವರು ಆಡಿದ ಮಾತುಗಳು ನನಗೆ ಆಶ್ಚರ್ಯ ಮೂಡಿಸಿದೆ (Karnataka Politics). ಜೈಲಿಗಟ್ಟಲು ಅವರೇನೂ ಭಯೋತ್ಪಾದಕರಲ್ಲ. ರಾಷ್ಟ್ರೀಯವಾದಿಯೊಬ್ಬರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆಗೆ ಜೈಲು ಗ್ಯಾರಂಟಿ ಎಂಬ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸುಮ್ಮನೆ ಇದ್ದರೆ ಆಯ್ತು, ಇಲ್ಲವಾದರೆ ಜೈಲಿಗಟ್ಟುತ್ತೇನೆ ಏಂಬ ಸಚಿವರ ಮಾತು ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಚಕ್ರವರ್ತಿ ಸೂಲಿಬೆಲೆ ಭಯೋತ್ಪಾದಕ ಅಲ್ಲ, ಒಬ್ಬ ರಾಷ್ಟ್ರಭಕ್ತ, ರಾಷ್ಟ್ರೀಯವಾದಿ ವಿಚಾರಗಳನ್ನು ಜನಮಾನಸದಲ್ಲಿ ಬಿತ್ತುವ ಭಾಷಣಕಾರ, ಉತ್ತಮ ಸಂಘಟಕ. ಅಪರಾಧವಲ್ಲದಂತಹ ರಾಷ್ಟ್ರೀಯವಾದಿ ನಿಲುವುಗಳನ್ನು ಜನರ ಮುಂದಿಡುವವರು. ಹೀಗಾಗಿ ಮಂತ್ರಿಗಳು ತಮ್ಮ ಇತಿಮತಿಯೊಳಗೆ ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Karnataka Politics: ಹಿಟ್ಲರ್‌ ಗಿಟ್ಲರ್‌ ಅಂದ್ರೆ ಜೈಲು ಗ್ಯಾರಂಟಿ: ಇದು ಚಕ್ರವರ್ತಿ ಸೂಲಿಬೆಲೆಗೆ ಎಂ.ಬಿ. ಪಾಟೀಲ್‌ ಎಚ್ಚರಿಕೆ ಧಾಟಿ!

ನಿಮಗೆ ರಾಜ್ಯದ ಹೊಣೆಗಾರಿಕೆ ಇದೆ, ಇಂತಹ ವಿಚಾರಗಳಲ್ಲಿ ಮಾತನಾಡುವುದು ಸರಿಯಲ್ಲ. ನೀವು ನಿಮ್ಮ ಹೇಳಿಕೆ ಹಿಂಪಡೆಯುವುದು ಉತ್ತಮ. ಚಕ್ರವರ್ತಿ ಸೂಲಿಬೆಲೆಯವರಿಗೆ ವಿನಾಕಾರಣ ತೊಂದರೆ ಕೊಟ್ಟಲ್ಲಿ ಬಿಜೆಪಿ ಸುಮ್ಮನಿರಲ್ಲ. ನಮಗೂ ನ್ಯಾಯ ಕೇಳುವ ಹಕ್ಕಿದೆ. ಯಾವ ರೀತಿ ಪ್ರತಿಕ್ರಿಯಿಸಬೇಕೋ, ಅದೇ ರೀತಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.

VISTARANEWS.COM


on

Edited by

No Rain Girl waiting For rain and holding Umbrella
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್‌ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.

ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು

ಉತ್ತರ ಒಳನಾಡಲ್ಲಿ ಲಘು ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಗುಡುಗು ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.

ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Karnataka Weather Forecast : ಕರಾವಳಿಯಲ್ಲಿ ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಫುಲ್‌ ಸ್ಟಾಪ್‌

Karnataka Weather Forecast : ದಕ್ಷಿಣ ಒಳನಾಡಲ್ಲಿ ಮಳೆ ದುರ್ಬಲವಾಗಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡಲ್ಲಿ (Rain News) ಸಾಮಾನ್ಯವಾಗಿರಲಿದೆ.

VISTARANEWS.COM


on

Edited by

Girl Enjoying Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Rain News) ತಗ್ಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣವಾಗಿದೆ. ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.

ಬ್ರೇಕ್‌ ಹಾಕಿದ ಮಳೆರಾಯ, ಶುಷ್ಕ ವಾತಾವರಣ

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣದಿಂದ ಕೂಡಿರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಲ್ಲಿ ಚದುರಿದ ಮಳೆ

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Karnataka Weather Forecast : ನಾಳೆ ದಕ್ಷಿಣದಲ್ಲಿ ದುರ್ಬಲ; ಉತ್ತರ, ಕರಾವಳಿಯಲ್ಲಿ ಸಾಮಾನ್ಯ ಮಳೆ

Rain News : ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು ಸಾಧಾರಣವಾಗಿರಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ (Karnataka Weather Forecast) ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Edited by

Boy holding Umbrella
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು (Rain News) ದುರ್ಬಲಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32ರಷ್ಟು ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಅತೀ ಕಡಿಮೆ ಉಷ್ಣಾಂಶ 14.2ರಷ್ಟು ದಾಖಲಾಗಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ರಾಜ್ಯದ ಉಳಿದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗಲಿದೆ. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Kidnapping case : ಸುಲಿಗೆಕೋರನಾದ ಸ್ನೇಹಿತ; ಕಿಡ್ನ್ಯಾಪ್‌ ಮಾಡಿ 50 ಲಕ್ಷಕ್ಕೆ ಡಿಮ್ಯಾಂಡ್‌!

ಭಾನುವಾರ ರಾಜ್ಯದ ವಿವಿಧೆಡೆ ಮಳೆಯಾಗಿರುವ ವರದಿ ಆಗಿದೆ. ಕ್ಯಾಸಲ್ ರಾಕ್, ಔರಾದ್, ಖಜೂರಿ, ಭಾಗಮಂಡಲ, ಪೊನ್ನಂಪೇಟೆ ಪಿಡಬ್ಲ್ಯೂಡಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಮಂಕಿ, ಮಂಚಿಕೆರೆ, ಕದ್ರಾ , ಹುಮನಾಬಾದ್‌ನಲ್ಲಿ ತಲಾ 3 ಸೆಂ.ಮೀ ಮಳೆ ಸುರಿದಿದೆ. ಬೆಳ್ತಂಗಡಿ, ಗೇರುಸೊಪ್ಪ, ಸಿದ್ದಾಪುರ, ಹೊನ್ನಾವರ, ಜಗಲ್ ಬೆಟ್, ಸಿದ್ದಾಪುರ, ಲೋಂಡಾ, ಮಂಠಾಳ, ರಬಕವಿ, ಲಿಂಗನಮಕ್ಕಿ ಎಚ್‌ಎಂಎಸ್, ಜಯಪುರ, ಶೃಂಗೇರಿ ಎಚ್‌ಎಂಎಸ್, ವಿರಾಜಪೇಟೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಯಲ್ಲಾಪುರ, ಶಿರಾಲಿ, ಕುಮಟಾ, ಉಪ್ಪಿನಂಗಡಿ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಸೈದಾಪುರ, ಅಥಣಿ, ರಾಯಬಾಗ, ಸೇಡಬಾಳ್‌, ಚಿಕ್ಕೋಡಿ, ಸಂಕೇಶ್ವರ, ಕಲಬುರ್ಗಿ AWS,ಮಹಾಲಿಂಗಪುರ , ಕಲಬುರ್ಗಿ ನಗರ, ಧಾರವಾಡ ನಗರ, ಸಕಲೇಶಪುರ, ಹುಂಚದಕಟ್ಟೆ, ತಾಳಗುಪ್ಪ, ತ್ಯಾಗರ್ತಿ, ಕಮ್ಮರಡಿ, ಮೂರ್ನಾಡು ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

karnataka weather forecast : ಕರಾವಳಿಯಲ್ಲಿ ಪ್ರಬಲವಾದ ಮುಂಗಾರು; ಬಿರುಗಾಳಿ ಸಾಥ್‌

Rain News : ರಾಜ್ಯದಲ್ಲಿ ನೈರುತ್ಯ ಮುಂಗಾರು ಪ್ರಬಲಗೊಂಡಿದ್ದು, ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾನುವಾರ 8 ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ (karnataka weather forecast) ನೀಡಿದೆ.

VISTARANEWS.COM


on

Edited by

Girl in beach with Umbrella
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನೈರುತ್ಯ ಮುಂಗಾರು (karnataka weather forecast) ಪ್ರಬಲವಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ

ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭರ್ಜರಿ ಮಳೆ

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೀದರ್, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಡಿಮೆ ಮಳೆ ಸುರಿಯಲಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗುವ ಸೂಚನೆ ಇದೆ.

ಇದನ್ನೂ ಓದಿ: Letter to friend : ಹಾಯ್‌ ಪುಟ್ಟಾ.. ಹೇಗಿದಿಯಾ?; ದೇವರ ಹುಂಡಿಯಲ್ಲಿ ಓಡಿ ಹೋದ ಗೆಳತಿಗೊಂದು ಪತ್ರ!

ಈ ಜಿಲ್ಲೆಗಳಿಗೆ ಅಲರ್ಟ್‌

ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ 45-55 ಕಿ.ಮೀಯಿಂದ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
salman
ಬಾಲಿವುಡ್17 mins ago

Salman Khan: ಬರ್ತ್‌ ಡೇ ಪಾರ್ಟಿಯಲ್ಲಿ ಸಲ್ಮಾನ್‌ ಸಖತ್ ಡ್ಯಾನ್ಸ್! ಅಭಿಮಾನಿಗಳಿಗೆ ನಟನ ಆರೋಗ್ಯದ್ದೇ ಚಿಂತೆ

caste census repot image
ಕರ್ನಾಟಕ31 mins ago

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Sachin tendulkar
ಕ್ರಿಕೆಟ್33 mins ago

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

Eid Milad procession
ಕರ್ನಾಟಕ55 mins ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್1 hour ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ1 hour ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ1 hour ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema1 hour ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

Annu Rani
ಕ್ರೀಡೆ2 hours ago

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

Old Pension Scheme Madhu Bangarappa
ಕರ್ನಾಟಕ2 hours ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ5 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ6 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ16 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌