Nice Project: ಕೂಡಲೇ ನೈಸ್‌ ಯೋಜನೆಯನ್ನು ವಾಪಸ್‌ ಪಡೆಯಿರಿ; ಸಿಎಂ ವಿರುದ್ಧ ಗುಡುಗಿದ ದೇವೇಗೌಡ - Vistara News

ಕರ್ನಾಟಕ

Nice Project: ಕೂಡಲೇ ನೈಸ್‌ ಯೋಜನೆಯನ್ನು ವಾಪಸ್‌ ಪಡೆಯಿರಿ; ಸಿಎಂ ವಿರುದ್ಧ ಗುಡುಗಿದ ದೇವೇಗೌಡ

Nice Project: ನೈಸ್ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಅದು ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆಯಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರವನ್ನು ಸಹ ಬಿಡುಗಡೆ ಮಾಡಿದರು.

VISTARANEWS.COM


on

HD Devegowda pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೈಸ್ ಯೋಜನೆಯನ್ನು (Nice Project) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು.‌ ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು (Farmers Land) ಸರ್ಕಾರ ಮರು ವಶಪಡಿಸಿಕೊಳ್ಳಬೇಕು. ಕೂಡಲೇ ಈ ಕೆಲಸ ಆಗಬೇಕು. ಬಡವರ ಪರ ಮಾತನಾಡುವ ಸಿಎಂ ಸಿದ್ದರಾಮಯ್ಯ (CM Siddaramaiah) ಇನ್ನೂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ರೈತರ ಪರ ನಿಲ್ಲುವುದಕ್ಕೆ ನಾನು ಮೀನಮೇಷ ಎಣಿಸುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ (HD Devegowda) ಎಚ್ಚರಿಕೆ ನೀಡಿದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ನೈಸ್‌ ಯೋಜನೆ ಬಗ್ಗೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರಿಗೆ ಏನು ಕಷ್ಟ ಇದೆಯೋ ಗೊತ್ತಿಲ್ಲ. ಅವರು ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಬಡವರ ಪರ ಮಾತನಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಖಾರವಾಗಿ ಪ್ರಶ್ನಿಸಿದರು.

ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ

ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ಧ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ ಎಂದು ದೇವೇಗೌಡ ಅಭಿಪ್ರಾಯಪಟ್ಟರು.

ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ಧ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ? ಎಂಬುದು ಸೇರಿದಂತೆ ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ ಎಂದು ಎಚ್‌.ಡಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ಸಿಎಂಗೆ ಬರೆದಿದ್ದ ಪತ್ರ ಬಿಡುಗಡೆ

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹ ಮಾಡಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಅಂತ ಸದನ ಸಮಿತಿಯೇ ವರದಿ ಕೊಟ್ಟಿದೆ. ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ.

ಈ ಹಿಂದೆ ಸೋನಿಯಾ ಗಾಂಧಿ ಅವರ ಬಳಿಯೂ ನೈಸ್ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾ‌ ಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ನಾನು ಜೀವನದಲ್ಲಿ ಮಾಡಿದ ಒಂದೇ ಒಂದು ತಪ್ಪು

ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಅಂತ ಮಹತ್ವಾಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಅಂತ ಇದನ್ನು ಮಾಡಿದೆ. ಆದರೆ‌, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವರು. ಸಿದ್ದರಾಮಯ್ಯ ಅವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷದೊಂದಿಗೆ ರೈತರು ಹಾಗೂ ಬಡವರ ಪರ ಹೋರಾಟ ಮಾಡುತ್ತೇವೆ ಎಂದು ಎಚ್.ಡಿ. ದೇವೇಗೌಡ ಅವರು ನೋವು ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಅವಧಿಯಲ್ಲಿ ಹೆಚ್ಚುವರಿ ಭೂಮಿ ಕೊಡಲು ಆಗುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸಲಾಗಿತ್ತು. ನೈಸ್ ಯೋಜನೆಗೆ ಹೆಚ್ಚುವರಿ ಭೂಮಿ ಕೊಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಯಡಿಯೂರಪ್ಪ ಅವರ ಸರಕಾರ ಪ್ರಮಾಣ ಪತ್ರ (ಅಫಿಡವಿಟ್) ಸಲ್ಲಿಸಿದ್ದರು. ಈ ಯೋಜನೆ ದೊಡ್ಡ ವಂಚನೆ ಎಂದು ಯಡಿಯೂರಪ್ಪ ಅವರೇ ಅಫಿಡವಿಟ್ ಹಾಕಿದ್ದರು. ಕುಮಾರಸ್ವಾಮಿ ಈಗಾಗಲೇ ಬಿಜೆಪಿ ಜತೆ ಚರ್ಚೆ ಮಾಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡುತ್ತಾರೆ ಎಂದು ದೇವೇಗೌಡರು ವಿವರಿಸಿದರು.

ಡಿಸಿಎಂ ವಿರುದ್ಧ ಕಿಡಿ

ಈ ಸರ್ಕಾರ ಪಂಚರಾಜ್ಯ ಚುನಾವಣೆಯಲ್ಲಿ ಎಷ್ಟು ಹಣ ಎಲ್ಲಿಗೆ ತೆಗೆದುಕೊಂಡು ಹೋಗಿದೆ ಎನ್ನುವ ಮಾಹಿತಿ ಎಲ್ಲರಿಗೂ ಗೊತ್ತಿದೆ. ಇದು ಕರ್ನಾಟಕ ಜನರ ಸಂಪತ್ತು. ಡಿಸಿಎಂ‌ ಡಿ.ಕೆ. ಶಿವಕುಮಾರ್ ಅವರ ಉದ್ದಟತನವಾಗಿದೆ. ಅವರು ಎಲೆಲ್ಲಿ ಹೋಗಿದ್ದಾರೆ? ಎಷ್ಟು ಹಣ ಸಾಗಿಸಿದ್ದಾರೆ? ಎಷ್ಟು ಹಣವನ್ನು ಚುನಾವಣೆ ಆಯೋಗ ಸೀಜ್ ಮಾಡಿದೆ? ಈ ಹಣ ಹೋಗಿರೋದು ಬೆಂಗಳೂರಿನಿಂದ ಎನ್ನುವುದು ಜನರಿಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದರು.

ನೈಸ್ ಮಾತ್ರ ಅಲ್ಲ. ಬೆಂಗಳೂರಿನ ಎಲ್ಲ ಸಂಸ್ಥೆಗಳು ಹಾಗೂ ಜಲ ಸಂಪನ್ಮೂಲ ಇಲಾಖೆ ಅವರ ಬಳಿಯೇ ಇದೆ. ಏನೇನು ಆಗುತ್ತಿದೆ ಎಂದು ಹೇಳಿದರೆ ನಾಚಿಕೆ ಆಗುತ್ತದೆ. ದೇಶದ ಬಗ್ಗೆ, ಬಡವರ ಬಗ್ಗೆ ಉಪದೇಶ ಮಾಡುವ ಸಿಎಂ ಅವರು ಈ ಯೋಜನೆ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ನಾನು ಬಡವರ ‌ಪರ ಅಂತಾರೆ. ಅಹಿಂದ ಅಂತಾರೆ. ಇದನ್ನು ಯಾಕೆ ಇವರು ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸೇಡಿನ ರಾಜಕೀಯ ಬೇಡ

ತೆಲಂಗಾಣದಲ್ಲಿ ಮುಸ್ಲಿಮರಿಗೆ ಬಜೆಟ್ ಘೋಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಜತೆ ಮಂತ್ರಿ ಆಗಿದ್ದೋರು ನಿತ್ಯ ಏನೋ ಮಾತನಾಡುತ್ತಾರೆ‌. ಟಿಪ್ಪು ಬಿಟ್ಟು ಬೇರೆ ಏನು ಅಂತ ಮಾತಾಡ್ತಾರೆ. ನಾವು ರಾಮನನ್ನು ಪೂಜೆ ಮಾಡುತ್ತೇವೆ. ಅದರಲ್ಲಿ ನಮಗೇನೂ ಸಂಕೋಚ ಇಲ್ಲ. ನಮಗೆ ಭಕ್ತಿ ಇದೆ. ದೇವರಲ್ಲಿ ನಂಬಿಕೆ ಇದೆ ಎಂದರು.

ಈದ್ಗಾ ಗಲಾಟೆಯಲ್ಲಿ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ನಾನು ದರ್ಗಾಗೆ ಹೋಗಿದ್ದೇನೆ. ತಿರುಪತಿಗೆ ಹೋಗಿದ್ದೇನೆ. ಬಿಜೆಪಿ ಜತೆ ಹೋದಾಗ ಸೇಡಿನ ರಾಜಕೀಯ ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ನಾವು ಹೇಳಿದ್ದೇವೆ. ಎನ್‌ಡಿಎ ಮಿತ್ರಪಕ್ಷವಾಗಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ನಮ್ಮ ಮಿತ್ರಪಕ್ಷದ ಬಗ್ಗೆ ಮಾತನಾಡುತ್ತಿದ್ದೇವೆ. ಮುಂದೆಯೂ ಹೇಳುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಹಿಂದು ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರ ಮೇಲೆ ಹಿಂದಿನ ಕೇಸ್ ರೀಓಪನ್ ಮಾಡಿ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ನವರು ಇದು ಸೇಡಿನ ರಾಜಕೀಯ ಮಾಡಿದ್ದಾರೆ. ಎನ್‌ಡಿಎ ಜತೆ ಇರುವ ನಾವು ಈ ಸಮಯದಲ್ಲಿ ನಮ್ಮ ಅಭಿಪ್ರಾಯವನ್ನು ಹೇಳುವ ಸ್ವಾತಂತ್ರ್ಯ ಇದೆ. ಸೇಡಿನ ರಾಜಕೀಯ ಮೂಲಕ ಇವರು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇಂಥ ಸಮಯದಲ್ಲಿ ನಾವು ಮಾತನಾಡುವ ಅವಶ್ಯಕತೆ ಇದೆ ಎಂದು ಮಾಜಿ ಪ್ರಧಾನಿ‌ ಎಚ್.ಡಿ. ದೇವೇಗೌಡ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಂತ್ಯವಾಗಲಿದೆ

60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳುತ್ತಿದ್ದೇನೆ, ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಈ ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭವಿಷ್ಯ ನುಡಿದರು.

ಎನ್‌ಡಿಎಗೆ ಭಾರಿ ಗೆಲುವು

ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ NDA ಸೋಲಿಸಿ 20 ಸೀಟು ಗೆಲ್ಲುತ್ತೇವೆ ಅಹಂನಿಂದ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಎಂದರೆ ಕನಸು ಮಾತ್ರ. ಈ‌ ಬಾರಿ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ‌ ಜನರು ಎನ್ ಡಿಎ ಮೈತ್ರಿಗೆ ಅಭೂತಪೂರ್ವ ತೀರ್ಪು ಕೊಡುತ್ತಾರೆ ಎಂದು ಮಾಜಿ ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಚಿನ್ನದ ಕತ್ತಿ ರಾಮನಿಗೆ ಅರ್ಪಣೆ

ಹಿಂದೆ ಪ್ರಧಾನಿ ಆಗಿದ್ದಾಗ ನನಗೆ ಒಮನ್ ದೇಶದಲ್ಲಿ ಚಿನ್ನದ ಕತ್ತಿಯನ್ನು ಉಡುಗೋರೆಯಾಗಿ ನೀಡಿದ್ದರು. ಅದನ್ನು ತೆರಿಗೆ ಕಟ್ಟಿ ಬೆಂಗಳೂರಿಗೆ ತರಿಸಿಕೊಂಡು ಶ್ರೀ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿರುವ ಶ್ರೀರಾಮ ದೇವರಿಗೆ ಅರ್ಪಿಸಿದೆ. ಆ ಕತ್ತಿಯನ್ನು ನಾನೇ ಇಟ್ಟುಕೊಳ್ಳಬಹುದಿತ್ತು. ಆದರೆ, ದೈವಸೇವೆ ನಮ್ಮ ನಂಬಿಕೆ. ಅದನ್ನೇ ಮಾಡಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಇದನ್ನೂ ಓದಿ: Drought Relief: ರೈತರಿಗೆ 2 ಸಾವಿರ ರೂಪಾಯಿ ಬರ ಪರಿಹಾರ ಬಿಡುಗಡೆ

ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ಮಾಜಿ ಶಾಸಕ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Modi in Karnataka: ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಬೆಳಗಾವಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು.

VISTARANEWS.COM


on

Modi in Karnataka
Koo

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ನಗರಕ್ಕೆ ಪ್ರಧಾನಿ‌ ನರೇಂದ್ರ ಮೋದಿ (Modi in Karnataka) ಅವರು ಶನಿವಾರ ರಾತ್ರಿ ಆಗಮಿಸಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು. ಅಲ್ಲಿಂದ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ಗೆ ಪ್ರಧಾನಿ ತೆರಳಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ನಗರದ ಕಾಕತಿಯಲ್ಲಿರುವ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಮೋದಿ ಅವರು ವಾಸ್ತವ್ಯ ಮಾಡಲಿದ್ದು, ಅವರಿಗಾಗಿ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ. ಗುಜರಾತಿ ಸೇರಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಶೈಲಿಯ ಖಾದ್ಯಗಳನ್ನು ಸಿದ್ಧಪಡಿಸಿದ್ದು, ಮೂವತ್ತಕ್ಕೂ ಹೆಚ್ಚು ಬಗೆಯೆ ಪದಾರ್ಥಗಳನ್ನು ತಯಾರಿಸಲಾಗಿದೆ. ಇವುಗಳಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ, ಟೊಮ್ಯಾಟೊ ‌ಸಾರು,‌ ದಾಲ್ ಕೂಡ ಸೇರಿವೆ.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

Karnataka Election: PM Modi Roadshow Ends In Bengaluru, Here are some photos

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಹಾಸನ

Hasan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Hasan pen drive case
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಬೆಂಗಳೂರು

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

TCS World 10K: ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

VISTARANEWS.COM


on

TCS World 10K
Koo

ಬೆಂಗಳೂರು: ಏಪ್ರಿಲ್ 28ರಂದು (ಭಾನುವಾರ) ಟಿಸಿಎಸ್ ವರ್ಲ್ಡ್ 10ಕೆ (TCS World 10K) ಬೆಂಗಳೂರು ಟೂರ್ನಿಯಲ್ಲಿ ಭಾರತದ ಸ್ಟಾರ್ ಅಥ್ಲೀಟ್​​ಗಳು ಓಟದ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ ಆಯೋಜಿಸಲಾದ ಈ ಓಟವು ಒಟ್ಟು 1.75 ಕೋಟಿ ರೂಪಾಯಿ (2,10000 ಯುಎಸ್ ಡಾಲರ್) ಬಹುಮಾನವನ್ನು ಹೊಂದಿದೆ. 67 ಅಥ್ಲೀಟ್​ಗಳನ್ನು ಒಳಗೊಂಡಿರುವ ಭಾರತೀಯ ಎಲೈಟ್ ಶ್ರೇಣಿಯಲ್ಲಿ ಪುರುಷರ ಮತ್ತು ಮಹಿಳಾ ವಿಜೇತರಿಗೆ ತಲಾ 2,75,000 ರೂ.ಗಳ ನಗದು ನಗದು ಬಹುಮಾನ ಮತ್ತು ಕೋರ್ಸ್ ದಾಖಲೆಯನ್ನು ಮುರಿದರೆ ಇನ್ನೂ 1,00,000 ರೂ.ಗಳ ಬೋನಸ್ ದೊರೆಯಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ರೇಸ್​ ಸಮಯ ಈ ರೀತಿ ಇದೆ

  • ಓಪನ್ 10K ಮತ್ತು ಪೊಲೀಸ್ ಕಪ್ – ಬೆಳಿಗ್ಗೆ 5:10
  • ವಿಶ್ವ 10K ಮಹಿಳೆಯರು – ಬೆಳಿಗ್ಗೆ 6:40
  • ವಿಶ್ವ 10K ಪುರುಷರು – ಬೆಳಿಗ್ಗೆ 7:30
  • ಮಜ್ಜಾ ರನ್ – ಬೆಳಿಗ್ಗೆ 8:15
  • ಚಾಂಪಿಯನ್ಸ್ ವಿತ್ ಡಿಸೆಬಿಲಿಟಿಸ್ ಮತ್ತು ಸಿಲ್ವರ್ ರನ್ – ಬೆಳಿಗ್ಗೆ 8:40

ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

ಹಾಲಿ ಚಾಂಪಿಯನ್ ತಮ್ಶಿ ಸಿಂಗ್ ಮತ್ತು ನ್ಯಾಷನಲ್ ಕೋರ್ಸ್ ರೆಕಾರ್ಡ್ ಹೋಲ್ಡರ್ ಸಂಜೀವಿನಿ ಜಾಧವ್ ಅವರು ಭಾರತದ ಮಹಿಳಾ ಓಟಗಾರರನ್ನು ಮುನ್ನಡೆಸಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್ ರೋಡ್ ರೇಸ್​​ ಮುಂಚಿತವಾಗಿ ಮಾತನಾಡಿದ ಸಂಜೀವಿನಿ ಜಾಧವ್, “ನನ್ನ ತರಬೇತಿ ಉತ್ತಮವಾಗಿ ನಡೆಯುತ್ತಿದೆ. ನಾನು ಭಾನುವಾರ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಭಾರತೀಯ ಎಲೈಟ್​ ಮಹಿಳಾ ಓಟಗಾರರಲ್ಲಿ ಸಂಘಮಿತ್ರ ಮಹತಾ, ಪೂನಂ ದಿನಕರ್ ಸೋನುನೆ, ಏಕ್ತಾ ರಾವತ್, ಉಜಾಲಾ, ಪ್ರೀನು ಯಾದವ್, ಫೂಲನ್ ಪಾಲ್, ಭಾರತಿ ನೈನ್, ಚಾವಿ ಯಾದವ್ ಮತ್ತು ಸೀಮಾ ಕೂಡ ಮುಂಚೂಣಿಯಲ್ಲಿದ್ದಾರೆ.

ಪುರುಷರ ಸಾಲಿನಲ್ಲಿ ಯಾರ್ಯಾರು?

ಭಾರತೀಯ ಪುರುಷರ ಸಾಲಿನಲ್ಲಿ ಕಳೆದ ವರ್ಷದ ರನ್ನರ್ ಅಪ್ ಹರ್ಮನ್​ಜೋತ್​ ಸಿಂಗ್ 30:00 ನಿಮಿಷಗಳ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಈ ಬಾರಿ ಭರವಸೆ ಮೂಡಿಸಿದ್ದಾರೆ.

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

ಟಿಸಿಎಸ್ ವರ್ಲ್ಡ್ 10 ಕೆಯಲ್ಲಿ ಈ ಬಾರಿ ಬೆಂಗಳೂರಿನ ಗ್ರೌಂಡ್ ಮತ್ತು ವರ್ಚುವಲ್ ವಿಭಾಗಗಳಲ್ಲಿ 30,000 ಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಉತ್ತಮ್ ಚಂದ್, ನಿತೇಂದ್ರ ಸಿಂಗ್ ರಾವತ್, ಧರ್ಮೇಂದ್ರ, ವಿವೇಕ್ ಸಿಂಗ್ ಮೋರೆ, ಸಂದೀಪ್ ಸಿಂಗ್, ದಿನೇಶ್, ದೀಪಕ್ ಭಟ್, ಮೋಹನ್ ಸೈನಿ, ಅಮೃತ್ ಸಿಂಗ್ ಬೋಹ್ರಾ ಮತ್ತು ಸಂದೀಪ್ ದೇವ್ರಾರಿ ರೇಸ್ನಲ್ಲಿ ಸ್ಪರ್ಧಿಸುತ್ತಿರುವ ಇತರ ಭಾರತೀಯ ಪುರುಷ ಕ್ರೀಡಾಪಟುಗಳು.

Continue Reading

ಉತ್ತರ ಕನ್ನಡ

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

Lok Sabha Election 2024: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಎಲ್ಲಾ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ ಸಿದ್ದಗೊಂಡಿದ್ದು, ಕೈಗಾ ಸಂಸ್ಥೆಯು ತನ್ನ ಸಿ.ಎಸ್.ಆರ್ ಫಂಡ್ ಯೋಜನೆಯಡಿ ಸಿದ್ದಪಡಿಸಿರುವ ಈ ಕಿಟ್ ಅನ್ನು ಕೈಗಾ ಅಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

VISTARANEWS.COM


on

Lok Sabha Election 2024 special kit for the polling staff
Koo

ಕಾರವಾರ: ಜಿಲ್ಲೆಯಲ್ಲಿ ಮೇ 7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ (Lok Sabha Election 2024) ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಎಲ್ಲಾ ಸಿಬ್ಬಂದಿಗೆ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ (Special Kit) ಸಿದ್ದಗೊಂಡಿದ್ದು, ಕೈಗಾ ಸಂಸ್ಥೆಯು ತನ್ನ ಸಿ.ಎಸ್.ಆರ್ ಫಂಡ್ ಯೋಜನೆಯಡಿ ಸಿದ್ದಪಡಿಸಿರುವ ಈ ಕಿಟ್ ಅನ್ನು ಕೈಗಾ ಅಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಈ ಕಿಟ್‌ನಲ್ಲಿ ಪ್ರತಿಯೊಬ್ಬರೂ ದೈನಂದಿನ ಉಪಯೋಗಕ್ಕೆ ಬಳಸುವ ಟೂತ್ ಬ್ರಶ್, ಟೂತ್‌ಪೇಸ್ಟ್, ಸೋಪು, ಬಾಚಣಿಗೆ, ಸ್ಯಾನಿಟೈಸರ್ ಅಲ್ಲದೇ ಮತಗಟ್ಟೆಯಲ್ಲಿ ಸೊಳ್ಳೆಗಳಿದ್ದಲ್ಲಿ ಸಿಬ್ಬಂದಿಗಳು ಅದರಿಂದ ರಕ್ಷಿಸಿಕೊಳ್ಳಲು ಸೊಳ್ಳೆ ನಿವಾರಕ ಕ್ರೀಮ್ ಸಹ ಲಭ್ಯವಿದೆ.

ಇದನ್ನೂ ಓದಿ: Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

ಕೈಗಾ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಒಟ್ಟು 7500 ಕಿಟ್ ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದು, ಈ ಕಿಟ್ ಗಳನ್ನು ಮೇ 6 ರಂದು ನಡೆಯುವ ಮತಯಂತ್ರಗಳ ಮಸ್ಟರಿಂಗ್ ಸಮಯದಲ್ಲಿ ಮತಗಟ್ಟೆ ಸಾಮಗ್ರಿಗಳ ಜತೆಗೆ ಎಲ್ಲಾ ಮತಗಟ್ಟೆ ಸಿಬ್ಬಂದಿಗೆ ವಿತರಿಸಲಾಗುವುದು.

ಕೈಗಾ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಜಿಲ್ಲಾಡಳಿತದ ಕಾರ್ಯಕ್ರಮಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಹ ಜಿಲ್ಲೆಯ ಎಲ್ಲಾ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ದೃಷ್ಟಿಯಿಂದ, ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ಕಿಟ್‌ಗಳನ್ನು ನೀಡಿದೆ. ಈ ಕಿಟ್‌ನಲ್ಲಿನ ವಸ್ತುಗಳ ಬಳಕೆಯಿಂದ ಸಿಬ್ಬಂದಿ ಮತದಾನದ ದಿನ ಇನ್ನಷ್ಟು ಹೆಚ್ಚು ಲವಲವಿಕೆಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದ್ದು, ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಕೈಗಾ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಹೇಳಿದರು.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಈ ವೇಳೆ ಕೈಗಾ ಸಂಸ್ಥೆಯ ಸಿ.ಎಸ್.ಆರ್ ಫಂಡ್ ಯೋಜನೆಯ ಸದಸ್ಯ ಕಾರ್ಯದರ್ಶಿ ಆಶೀಶ್ ಲಾಲ್ ಹಾಗೂ ಸದಸ್ಯ ದಿನೇಶ್ ಗಾಂವಕರ್ ಕಿಟ್ ಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

Continue Reading
Advertisement
Modi in Karnataka
ಪ್ರಮುಖ ಸುದ್ದಿ24 mins ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ47 mins ago

Hasan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ1 hour ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು1 hour ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ1 hour ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ2 hours ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ2 hours ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ2 hours ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ2 hours ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ3 hours ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20246 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ11 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ18 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌