Site icon Vistara News

Suicide | ಕೃಷ್ಣಾ ನದಿ ಸೇತುವೆ ಮೇಲಿಂದ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ: ಜೀವ ಹಿಂಡಿತೇ ಅನಾರೋಗ್ಯ?

suicide

ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಶಾಂತವ್ವ ಬಸಪ್ಪ ಜಂಬಗಿ(35) ಮೃತ ಮಹಿಳೆ.
ಅನಾರೋಗ್ಯದಿಂದ ಬಳಲುತ್ತಿದ್ದ ಆಕೆ ಮನನೊಂದು ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಲ್ಹಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ | Suicide | ಸ್ಕೂಲ್‌ನಲ್ಲಿ ಎಲ್ಲರೆದರು ಟೀಚರ್‌ ಬೈದರೆಂದು ನೇಣಿಗೆ ಶರಣಾದ ವಿದ್ಯಾರ್ಥಿನಿ!

Exit mobile version