Site icon Vistara News

Bike Accident: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು, ಪತಿಗೆ ಗಾಯ

Bike and car damaged in accident

ರಾಮನಗರ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರಿಂದ ಮಹಿಳೆಯೊಬ್ಬರು ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ (Bike Accident) ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಮರ್ ಸಾಬರಪಾಳ್ಯ ಗೇಟ್ ಬಳಿ ಮಂಗಳವಾರ ನಡೆದಿದೆ.

ನೆಲಮಂಗಲ ಮೂಲದ ಅನಿತಾ (38) ಮೃತರು, ಪತಿ ರಾಜಣ್ಣಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್‌ನಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ದಂಪತಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಅನಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Stabbing Case: ಚೂರಿ ಇರಿದು ಯುವಕನ ಕೊಲೆ ಮಾಡಿದ ಆಟೋ ಚಾಲಕ; ಕೇಳಿದಷ್ಟು ಬಾಡಿಗೆ ಕೊಡಲಿಲ್ಲವೆಂದು ಕೊಂದೇ ಬಿಟ್ಟ!

ವಿದ್ಯುತ್ ತಂತಿ ತಗುಲಿ ಶಾಕ್‌ನಿಂದ ಯುವಕ ಸಾವು

ರಾಯಚೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ರಾಮರೆಡ್ಡಿ ಕ್ಯಾಂಪ್‌ನಲ್ಲಿ ನಡೆದಿದೆ. ಬಿಎ 4ನೇ ಸೆಮಿಸ್ಟರ್ ವಿದ್ಯಾರ್ಥಿ ಭೀಮಾಶಂಕರ (18) ಮೃತ ಯುವಕ. ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ಮಾಡಲಾಗುತ್ತಿತ್ತು. ಲೈನ್‌ಮ್ಯಾನ್‌ಗೆ ಸಹಾಯ ಮಾಡಲು ಹೋಗಿದ್ದಾಗ ವಿದ್ಯುತ್‌ ಸ್ಪರ್ಶಿಸಿ ಯುವಕ ಕೊನೆಯುಸಿರೆಳೆದಿದ್ದಾನೆ.

ವೀಲಿಂಗ್‌ ಪುಂಡರ ಹುಚ್ಚಾಟಕ್ಕೆ ಸವಾರ ಬಲಿ, ಮತ್ತೊಬ್ಬ ಗಂಭೀರ

ದೇವನಹಳ್ಳಿ: ವೀಲಿಂಗ್ (Wheeling Effect) ಪುಂಡರ ಹಾವಳಿಯಿಂದ ಈಗಾಗಲೇ ಸಾಕಷ್ಟು ಅಪಘಾತಗಳು (road Accident) ನಡೆದಿದೆ. ವೀಲಿಂಗ್‌ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣ ಬಿಟ್ಟಿದ್ದಾನೆ. ನಂದಿಬೆಟ್ಟದ ರಸ್ತೆಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ ಆಗಿದೆ. ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತ ದುರ್ದೈವಿ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ರಜೆ ಇರುವುದರಿಂದ ಕೆಲ ವೀಲಿಂಗ್‌ ಪುಂಡರ ಹಾವಳಿ ನಂದಿಬೆಟ್ಟದ ರಸ್ತೆಯಲ್ಲಿ ಹೆಚ್ಚಿದೆ.

ರೋಡ್‌ ಮಧ್ಯೆ ವೀಲಿಂಗ್‌ ಪುಂಡರ ಹುಚ್ಚಾಟ

ಇದನ್ನೂ ಓದಿ | Boys Drown: ದನ ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು, ಮತ್ತಿಬ್ಬರು ಬಚಾವ್

ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version