Site icon Vistara News

ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಗೃಹಿಣಿ ಮೃತ್ಯು

Woman dies after falling from 10th floor of apartment in Bengaluru

ಬೆಂಗಳೂರು: ಯಲಹಂಕ ಬಳಿಯ ನಾಗೇನಹಳ್ಳಿ ಸಮೀಪದ ಅಪಾರ್ಟ್‌ಮೆಂಟ್‌ (Bangalore Apartments) 10ನೇ ಮಹಡಿಯಿಂದ ಬಿದ್ದು ಗೃಹಿಣಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆಯಾಗಿರಬಹುದೇ ಎಂಬ ಸಂಶಯ ಕಾಡಿದೆ. ಅಮೃತಾ ಶರ್ಮ (27) ಮೃತ ದುರ್ದೈವಿ.

ಅಮೃತಾ ಶರ್ಮಾ ಮೂಲತಃ ಲಖನೌ ಮೂಲದವರಾಗಿದ್ದು, ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಲ್ಲಿ ವಾಸವಾಗಿದ್ದರು. ಅಡುಗೆ ಕೋಣೆಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಜಿಗಿದು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಎರಡು ವರ್ಷದ ಹಿಂದಷ್ಟೆ ವಿವಾಹವಾಗಿದ್ದ ಅಮೃತಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದರು. ಗುರುವಾರ ರಾತ್ರಿ (ಜೂ.22) ಹತ್ತು ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಿಂದ ಅಮೃತಾ ಶರ್ಮ ಬಿದ್ದಿದ್ದಾರೆ. ಕೂಡಲೆ ಸ್ಥಳೀಯರು ಅಮೃತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ 10ನೇ ಮಹಡಿಯಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಲಖನೌನಿಂದ ಅಮೃತಾ ತಾಯಿ ಆಗಮಿಸುತಿದ್ದಾರೆ.

ಒಂದೇ ಮನೆಯಲ್ಲಿ ತಂದೆ-ತಾಯಿ, ಮಗಳು ನೇಣು ಬಿಗಿದು ಆತ್ಮಹತ್ಯೆ

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು (Family death) ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ (Chamaraja nagara news) ನಡೆದಿದೆ.

ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಇದನ್ನೂ ಓದಿ: Road Accident: ವಿಜಯನಗರ, ಕುಶಾಲನಗರದಲ್ಲಿ ಪ್ರತ್ಯೇಕ ಅಪಘಾತ, ನಾಲ್ಕು ಮಂದಿಯ ಸಾವು

ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ. ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತಾ? ಬೇರೆ ಏನಾದರೂ ಕಾರಣಗಳಿವೆಯೇ ಎಂದು ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version