Shakti Scheme : ಬಸ್‌ನಿಂದ ಕೆಳಗೆ ಬಿದ್ದಿದ್ದ ಮಹಿಳೆ ಸಾವು; ಅನಾಥ ಮಕ್ಕಳ ಪರಿಹಾರಕ್ಕೆ ಮೊರೆ - Vistara News

ಕರ್ನಾಟಕ

Shakti Scheme : ಬಸ್‌ನಿಂದ ಕೆಳಗೆ ಬಿದ್ದಿದ್ದ ಮಹಿಳೆ ಸಾವು; ಅನಾಥ ಮಕ್ಕಳ ಪರಿಹಾರಕ್ಕೆ ಮೊರೆ

Shakti Scheme : ಗದಗಿನಲ್ಲಿ ತುಂಬಿದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕವಿತಾ ಹೆಳವರ ಎಂಬ ಮಹಿಳೆ ಕೆಳಗೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈಗ ಕುಟುಂಬದವರು ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

VISTARANEWS.COM


on

Gadag Bus accident wome kavita died
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗದಗ: ಈಚೆಗೆ ಸಾರಿಗೆ ಬಸ್‌ನಲ್ಲಿ (KSRTC Bus) ಪ್ರಯಾಣ ಮಾಡುತ್ತಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ಕವಿತಾ ಬದುಕು ಅಂತ್ಯವಾಗಿದೆ. ಹಾಸಿಗೆ ಹಿಡಿದ ಪತಿ, ಮೂವರನ್ನು ಮಕ್ಕಳನ್ನು ಬಿಟ್ಟು ತಮ್ಮ ಬದುಕಿನ ಪ್ರಯಾಣವನ್ನು ಅವರು ಅಂತ್ಯಗೊಳಿಸಿದ್ದಾರೆ. ಈಗ ಆ ಕುಟುಂಬಕ್ಕೆ ದಿಕ್ಕೇ ಇಲ್ಲದಂತಾಗಿದೆ. ಅಲ್ಲದೆ, ಆಕೆಯ ತಪ್ಪಿಲ್ಲದಿದ್ದರೂ ಸುಳ್ಳು ಕೇಸನ್ನು ಹಾಕಲಾಗಿದೆ. ಹೀಗಾಗಿ ಈ ಕುಟುಂಬಕ್ಕೆ ದಿಕ್ಕೇ ಇಲ್ಲದಂತೆ ಆಗಿದೆ. ಅನಾಥ ಮಕ್ಕಳಿಗೆ ನ್ಯಾಯ ಸಿಗಬೇಕು, ಸರ್ಕಾರದಿಂದ ಸೂಕ್ತ ನ್ಯಾಯ ಸಿಗಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. ಅಲ್ಲದೆ, ಶಕ್ತಿ ಯೋಜನೆಯಿಂದ (Shakti Scheme) ಬಸ್‌ ರಶ್‌ ಆಗುತ್ತಿರುವುದೇ ಇಷ್ಟೆಲ್ಲ ಅವಘಡಕ್ಕೆ ಕಾರಣ ಎಂಬುದೂ ಕುಟುಂಬದವರ ಆರೋಪವಾಗಿದೆ.

ಜುಲೈ 17 ರಂದು ಕವಿತಾ ಹೆಳವರ (36) ಬಸ್‌ನಲ್ಲಿ ಹೋಗುವಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಬಳಿಕ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಸಾವು ಬದುಕಿನ ನಡುವಿನ ಹೋರಾಟ ಕೊನೆಗೂ ಅಂತ್ಯವಾಗಿದೆ. ಚಿಕಿತ್ಸೆಗೆ ಸ್ಪಂದಿಸದ ಕವಿತಾ ಉಸಿರು ನಿಲ್ಲಿಸಿದ್ದಾರೆ.

ಇದನ್ನೂ ಓದಿ: Rain News: ರಾಜ್ಯದಲ್ಲಿ 3 ದಿನ ಭಾರೀ ಮಳೆ, ಕರಾವಳಿಗೆ ರೆಡ್‌ ಅಲರ್ಟ್‌

ಆಕೆಗೇನು ಹುಚ್ಚು ಹಿಡಿದಿಲ್ಲ

ತುಂಬಿ ತುಳುಕುತ್ತಿದ್ದ ಬಸ್‌ನಲ್ಲಿ ನೂಕಾಡಿದ್ದರಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ. ಶಕ್ತಿ ಯೋಜನೆಯಿಂದ ಈಗೀಗ ಬಸ್‌ಗಳು ಸಖತ್‌ ರಶ್‌ ಆಗುತ್ತಿದ್ದು, ಇದರಿಂದ ಕವಿತಾ ಮೃತಪಟ್ಟಿದ್ದಾರೆ. ಚಲಿಸುವ ಬಸ್‌ನಿಂದ ಜಿಗಿಯಲು ಆಕೆಗೇನು ಹುಚ್ಚು ಹಿಡಿದಿಲ್ಲ. ಬದಲಾಗಿ ನೂಕಾಟದಿಂದ ಆಕೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಆದರೆ, ಕಂಡಕ್ಟರ್ ಮತ್ತು ಡ್ರೈವರ್ ತಮ್ಮ ರಕ್ಷಣೆಗಾಗಿ ಆಕೆಯೇ ಹಾರಿದ್ದಾಳೆ ಎಂಬ ರೀತಿಯಲ್ಲಿ ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣವನ್ನು ತಿರುಚಲು ಯತ್ನ ನಡೆದಿದೆ. ಪೊಲೀಸರು ಸಹ ನಮ್ಮ ಹೇಳಿಕೆಯ ಮೇಲೆ ಕೇಸ್ ದಾಖಲಿಸಿಲ್ಲ. ಯಾರೋ ಬೇರೆಯವರನ್ನು ಕರೆದುಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿದ ಬಳಿಕ ನನ್ನ ಸಹಿ ಮಾಡಿಸಿದ್ದಾರೆ. ನಾನು ತುರಾತುರಿಯಲ್ಲಿ ಸಹಿ ಮಾಡಿ ಆಸ್ಪತ್ರೆಗೆ ಹೋದೆ ಎಂದು ಮೃತ ಮಹಿಳೆ ಕವಿತಾ ಅವರ ಮೈದುನ ಜಗದೀಶ್ ಹೆಳವರ ಆರೋಪ ಮಾಡಿದ್ದಾರೆ.

ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದು, ಕುಟುಂಬ ಈಗ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಕಾರಣ, ಕವಿತಾ ಅವರ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದು, ಈಗ ಅನಾಥವಾದಂತೆ ಆಗಿದೆ. ಅವರನ್ನು ಯಾರು ಸಲಹುತ್ತಾರೆ. ಎಲ್ಲರ ಜವಾಬ್ದಾರಿಯನ್ನು ಕವಿತಾ ನಿಭಾಯಿಸುತ್ತಿದ್ದರು. ಆದರೆ, ಈಗ ಈ ಕುಟುಂಬಕ್ಕೆ ಯಾರು ದಿಕ್ಕು? ಎಂದು ಕವಿತಾ ಅತ್ತೆ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Rain News : ಬೀದರ್‌ನಲ್ಲೂ ಭಾರಿ ಮಳೆ; ಉಕ್ಕಿಹರಿದ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಈ ಸಾವಿಗೆ ನ್ಯಾಯ ಸಿಗಬೇಕು. ಕವಿತಾ ನಿಧನದಿಂದ ಆ ಕುಟುಂಬಕ್ಕೆ ಈಗ ದಿಕ್ಕೇ ಇಲ್ಲವಾಗಿದೆ. ಈಗ ತಾಯಿ ಇಲ್ಲದೆ ಅನಾಥವಾಗಿರುವ ಮಕ್ಕಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

VISTARANEWS.COM


on

ಬೆಂಗಳೂರು, ಏ.19: ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಹೋದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಇಂಡಿಯಾ ಒಕ್ಕೂಟಕ್ಕೆ ಜಯವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಾಗೂ ಕ್ಷೇತ್ರ ವಿಂಗಡಣೆ ವಿರುದ್ದ ಪ್ರತಿಭಟಿಸಿದ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳ ಹೋರಾಟಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕಂತಹ ದೊಡ್ಡ ಜಯ. ಮಹಿಳೆಯರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಒಕ್ಕೂಟ ನಿಂತಿದೆ. ಇಲ್ಲಿ ಯಾರಿಗೂ ಅವಮಾನವಾಗಿಲ್ಲ” ಎಂದರು.
ಸಂವಿಧಾನ ತಿದ್ದುಪಡಿ ಮಾಡುವಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಮಹಿಳಾ ಮೀಸಲಾತಿ ಕಾಯ್ದೆ ಕಾಂಗ್ರೆಸ್ ಪಕ್ಷದ ಕನಸು ಮತ್ತು ಕೂಸು. ಇದರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಈಗ ಬಿಜೆಪಿ ಸರ್ಕಾರ ಮಾಡಿರುವ ನಿರ್ಧಾರ ಸರಿಯಾದ ಸಮಯವಲ್ಲ. ನಮ್ಮದು ಹಿಟ್ಲರ್ ಆಡಳಿತವಲ್ಲ” ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸಬೇಕಿತ್ತು. ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ತರುವ ಪ್ರಮೇಯವೇನಿತ್ತು. ಇಂಡಿಯಾ ಒಕ್ಕೂಟದ ಎಲ್ಲಾ ಸದಸ್ಯರಿಗೆ ನಾನು ಶುಭಾಶಯಗಳನ್ನು ತಿಳಿಸುತ್ತೇನೆ ಎಂದೂ ಶಿವಕುಮಾರ್‌ ಹೇಳಿದ್ದಾರೆ.
ಸೋಲುತ್ತದೆ ಎಂದರೂ ಬಿಲ್ ತಂದಿದ್ದು ಬಿಜೆಪಿ
ವಿಪಕ್ಷಗಳ ವಿರುದ್ದ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಲ್ ಸೋಲುತ್ತದೆ ಎಂದು ಗೊತ್ತಿದ್ದರೂ ತಂದವರು ಅವರು. ಅವರುಗಳು ಮಹಿಳಾ ವಿರೋಧಿಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಪ್ರತಿನಿಧಿಗಳಲ್ಲವೇ? ಇವರುಗಳು ಜನರಿಂದ ಗೆದ್ದಿಲ್ಲವೇ? ಅವರುಗಳು ಇದರ ಬಗ್ಗೆ ಮಾತನಾಡಬೇಕಿತ್ತು, ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಬಿಲ್ ಅವರ ಆಸ್ತಿಯಲ್ಲ. ದೇಶದ ಆಸ್ತಿ” ಎಂದರು.
“ಈ ಹಿಂದೆ ರಾಜೀವ್ ಗಾಂಧಿಯವರು ಶೇ 50 ರಷ್ಟು ಮೀಸಲಾತಿ ತಂದಿದ್ದರು. ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು. ಈ ಬಿಲ್ ಅಡಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರಗಳನ್ನು ಕತ್ತರಿಸಿ ಉತ್ತರ ಭಾರತದ ಕ್ಷೇತ್ರಗಳನ್ನು ಹೆಚ್ಚು ಮಾಡಲು ಹೊರಟಿರುವುದು ಸರಿಯಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮನ್ನೆಲ್ಲಾ ಕರೆದು ಚರ್ಚೆ ಮಾಡಬೇಕಿತ್ತು” ಎಂದು ಹೇಳಿದರು.

Continue Reading

Latest

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

VISTARANEWS.COM


on

ಬೆಂಗಳೂರು: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ ಅವರು 61ನೇ ಸಾಲಿನ ‘ಫೆಮಿನಾ ಮಿಸ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಪುತ್ರಿಯೊಬ್ಬರು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ತಮ್ಮ ‘ಎಕ್ಸ್’ ಸಂದೇಶದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಅಭಿನಂದನೆಗಳು.
ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಏಪ್ರಿಲ್ 18ರಂದು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ‘ಫೆಮಿನಾ ಮಿಸ್ ಇಂಡಿಯಾ ಫಿನಾಲೆ ಸ್ಪರ್ಧೆ ಜರುಗಿತ್ತು. ಗೆಲುವು ಸಾಧಿಸಿದ ನಂತರ ಸಾಧ್ವಿ ಸೈಲ್ ತಮ್ಮ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿದ್ದ ಸುದ್ದಿ ವೈರಲ್‌ ಆಗಿ ಗಮನ ಸೆಳೆದಿತ್ತು.

Continue Reading

Latest

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

VISTARANEWS.COM


on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದು ಸರಿಯಷ್ಟೇ. ಈ ಸಂದರ್ಭದಲ್ಲಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟಿದ ಫೋಟೋ ಭಾರಿ ವೈರಲ್‌ ಆಗಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನು ಹೇಳಿರಬಹುದು ಎಂದು ಕುತೂಹಲ ಮೂಡಿದ್ದು ಮಾತ್ರವಲ್ಲದೆ, ಊಹಾಪೋಹಗಳಿಗೂ ಕಾರಣವಾಗಿತ್ತು.
ಇದೀಗ ಮೋದಿ-ಸಿದ್ದರಾಮಯ್ಯ ಅವರ ಮಾತಿನ ರಹಸ್ಯ ಬಹಿರಂಗವಾಗಿದೆ. ಸ್ವತಃ ಸಿದ್ದರಾಮಯ್ಯ ಅವರೇ ಗುಟ್ಟನ್ನು ಬಹಿರಂಗಗೊಳಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೋದಿ ಇಬ್ಬರು ಗುಟ್ಟಾಗಿ ಏನನ್ನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳೀದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಉತ್ತರಿಸಿದೆ. ಇಷ್ಟು ವಿಚಾರ ಬಿಟ್ಟು ಬೇರೆ ಏನೂ ಇಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Continue Reading

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading
Advertisement
Latest27 ನಿಮಿಷಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest1 ಗಂಟೆ ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ1 ಗಂಟೆ ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ1 ಗಂಟೆ ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest1 ಗಂಟೆ ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ2 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest2 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest3 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest3 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest4 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌