ತುಮಕೂರು: ಹಾವು ಕಡಿತದಿಂದ ಮಹಿಳೆ ಮೃತಪಟ್ಟಿರುವ ಘಟನೆ ಜಿಲ್ಲೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿದೆ. ಸೋಮವಾರ ಸಂಜೆ ತೋಟದಲ್ಲಿ ಬೆಳೆದಿದ್ದ ಹೂಗಳನ್ನ ಕೊಯ್ಯಲು ಹೋಗಿದ್ದಾಗ ಮಹಿಳೆಗೆ ಹಾವು ಕಚ್ಚಿದೆ (Snake Bite).
ಶಾರದಮ್ಮ (42) ಮೃತ ದುರ್ದೈವಿ. ಹಾವು ಕಚ್ಚಿದ ಕೂಡಲೇ ಅವರನ್ನು ಕೊರಟಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | CCB Raid: ಮೀಟರ್ ಬಡ್ಡಿ ದಂಧೆ; 4 ಕಡೆ ಸಿಸಿಬಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ವಶ
ದಪ್ಪ ಇದೇನೆ ಎಂದು ಮನನೊಂದು ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ (Suicide Case) ಒಂದೇ ಸಮನೆ ಹೆಚ್ಚುತ್ತಿದೆ. ಅದರಲ್ಲೂ ಮುಖ್ಯವಾಗಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡಕ್ಕೋ, ವಯಸ್ಸಿನಲ್ಲಿ ಎದುರಾಗುವ ಮಾನಸಿಕ ಖಿನ್ನತೆಗೋ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ ಒಬ್ಬ ಎಂಬಿಬಿಎಸ್ ವಿದ್ಯಾರ್ಥಿನಿ (MBBS Student ends life) ಹಾಸ್ಟೆಲ್ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ʻʻನಾನು ತೀರಾ ದಪ್ಪ ಇದ್ದೇನೆ, ನೋಡೋಕೆ ಚೆನ್ನಾಗಿ ಕಾಣ್ತಾ ಇಲ್ಲʼʼ ಎಂದು ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಗಳೂರಿನ ಎ.ಜೆ ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಕೆ ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಇದನ್ನೂ ಓದಿ | West Bengal Violence: ಗುಂಡಿಕ್ಕಿ ತೃಣಮೂಲ ನಾಯಕನ ಹತ್ಯೆ; ಆರೋಪಿಯ ಕೊಲೆ; ಪರಿಸ್ಥಿತಿ ಉದ್ವಿಗ್ನ
ʻʻʻನಾನು ದಪ್ಪ ಇದ್ದೇನೆ. ನೋಡಲು ಚೆನ್ನಾಗಿ ಕಾಣ್ತಾ ಇಲ್ಲ.ʼʼ ಎಂದು ದೀರ್ಘ ಸುಸೈಡ್ ನೋಟ್‌ನಲ್ಲಿ ಅವರು ಹೇಳಿದ್ದಾರೆ. ʻʻಎಂ.ಬಿ.ಬಿಎಸ್. ಮುಗಿಸಬೇಕು ಅಂತ ತುಂಬಾ ಆಸೆ ಇತ್ತು. ಆದರೆ, ನನ್ನ ಸೌಂದರ್ಯಕ್ಕೆ ದಪ್ಪ ಜೀವ ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಆಗಲಿಲ್ಲ. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನ ಎಂದು ಅವರು ಹೇಳಿದ್ದಾರೆ.
ಶಿರಸಿಯಲ್ಲಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡ ಚಿರತೆ
ಉತ್ತರ ಕನ್ನಡ: ಜಿಲ್ಲೆಯ ಶಿರಸಿ ತಾಲೂಕಿನ ಬಿಕ್ನಳ್ಳಿ ಗ್ರಾಮದ ಬಾವಿಯಲ್ಲಿ ಚಿರತೆಯೊಂದು ಬಿದ್ದು ಪ್ರಾಣ ಕಳೆದುಕೊಂಡಿದೆ. ಶಿರಸಿ ವಲಯದ ಉಂಚಳ್ಳಿ ಬಿಕ್ನಳ್ಳಿ ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಇದು ಆಹುತಿಯಾಗಿದೆ. ಇದು ಆಹಾರ ಅರಿಸಿ ಜನವಸತಿ ಪ್ರದೇಶಕ್ಕೆ ಬಂದು ಆಯತಪ್ಪಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇದು ಒಂದುವರೆ ವರ್ಷದ ಹೆಣ್ಣು ಚಿರತೆಯಾಗಿದೆ
ಮುಂಜಾನೆ ನಸುಕಿನ ವೇಳೆ ಬಾವಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಡಿಎಫ್ಓ ಅಜ್ಜಯ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ಬಾವಿಯಿಂದ ಚಿರತೆ ಶವ ಮೇಲೆತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ