Site icon Vistara News

Rain News: ಅಫಜಲಪುರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

Relatives of deceased woman at Kalaburagi hospital

ಕಲಬುರಗಿ: ಜಿಲ್ಲೆಯಲ್ಲಿ ವಿವಿಧೆಡೆ ಶನಿವಾರ ಭಾರಿ ಮಳೆ (Rain News) ಸುರಿಯಿತು. ಈ ನಡುವೆ ಸಿಡಿಲು ಬಡಿದು ಒಬ್ಬ ಮಹಿಳೆ ಮೃತಪಟ್ಟು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಅಫಜಲಪುರ ತಾಲೂಕಿನ ಸಿದನೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸಿದನೂರ ಗ್ರಾಮದ ನಿವಾಸಿ ಕಲಾವತಿ ಮೃತ ಮಹಿಳೆ. ಸವಿತಾ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ದುರಂತ ಸಂಭವಿಸಿದೆ. ಸ್ಥಳಕ್ಕೆ ತಹಸೀಲ್ದಾರ್ ಸಂಜೀವಕುಮಾರ್ ದಾಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಯ ಹಲವಡೆ ವರುಣನ ಅಬ್ಬರ

ಕಲಬುರಗಿ ಜಿಲ್ಲೆಯ ಹಲವಡೆ ಶನಿವಾರ ಭಾರಿ ಮಳೆ ಸುರಿಯಿತು. ಜಿಲ್ಲೆಯ ಸೇಡಂ ತಾಲೂಕಿನ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಕಳೆದ ಕೆಲ ದಿನಗಳಿಂದ ಬಿಸಿಲಿನಿಂದ‌ ಕಂಗಾಲಾಗಿದ್ದ ಜನರಿಗೆ ಮಳೆ ತಂಪೆರೆದಿದೆ.

ಇದನ್ನೂ ಓದಿ | Weather report : ಮುಕ್ಕಾಲು ಕರ್ನಾಟಕಕ್ಕೆ ಮಳೆ ಸಿಂಚನ; ಹಲವೆಡೆ ಭರ್ಜರಿ, ಕೆಲವೆಡೆ ಸಾಧಾರಣ ವರುಣ

ಉತ್ತರ-ದಕ್ಷಿಣ ಕರ್ನಾಟಕದಲ್ಲಿ ಇನ್ನೆರಡು ದಿನ ಭಾರಿ ಮಳೆ; ಬೆಂಗಳೂರಲ್ಲಿ ರಾತ್ರಿ ಆರ್ಭಟ!

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸ್ವಲ್ಪ ಚೇತರಿಸಿಕೊಂಡಿರುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ (South Inland) ಮತ್ತು ದಕ್ಷಿಣ ಒಳನಾಡಿನ (North Inland) ಹಲವು ಕಡೆಗಳಲ್ಲಿ ಭರ್ಜರಿ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather Report) ಹೇಳಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: BK Hariprasad : ಸಣ್ಣ ಸಮುದಾಯದವರ ಅವಕಾಶಕ್ಕಾಗಿ ಬೀದಿಗಿಳಿಯುವೆ: ಸಿಎಂ ವಿರುದ್ಧ ಹರಿಪ್ರಸಾದ್‌ ಮತ್ತೆ ಗುಡುಗು

ಅಲ್ಲದೆ, ಕರಾವಳಿ ಜಿಲ್ಲೆಗಳಾದ (Coastal Karnataka Rainfall) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದೂ ಹೇಳಿದೆ.ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಏನೂ ಕಾಣದಿದ್ದರೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿಲ್ಲ.

Exit mobile version