Site icon Vistara News

Congress Guarantee No 5: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಉಚಿತ; ಇದು ಕಾಂಗ್ರೆಸ್‌ನ 5ನೇ ಗ್ಯಾರಂಟಿ

Congress Guarantee No 5

Congress Guarantee No 5

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆ, ಪದವೀಧರರಿಗೆ ಮಾಸಿಕ 3 ಸಾವಿರ ರೂ. ನಿರುದ್ಯೋಗ ಭತ್ಯೆ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿ ಹಲವು ಉಚಿತ ಭರವಸೆಗಳ ಗ್ಯಾರಂಟಿ ಮೂಲಕ ರಾಜ್ಯದ ಜನರ ಮತ (Congress Guarantee No 5) ಸೆಳೆಯಲು ಮುಂದಾಗಿರುವ ಕಾಂಗ್ರೆಸ್‌ ಈಗ ಐದನೇ ಗ್ಯಾರಂಟಿ ಘೋಷಿಸಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುವುದೇ ಕಾಂಗ್ರೆಸ್‌ನ ಐದನೇ ಗ್ಯಾರಂಟಿಯಾಗಿದೆ.

5ನೇ ಗ್ಯಾರಂಟಿ ಘೋಷಿಸಿದ ರಾಹುಲ್‌ ಗಾಂಧಿ

ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು, ಕಾಂಗ್ರೆಸ್‌ನ ಐದನೇ ಗ್ಯಾರಂಟಿಯನ್ನು ಘೋಷಿಸಿದರು. “ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದಾಗಿದೆ” ಎಂದು ರಾಹುಲ್‌ ಗಾಂಧಿ ಹೇಳಿದರು. ಇದುವರೆಗೆ ಕಾಂಗ್ರೆಸ್‌ ನಾಲ್ಕು ಗ್ಯಾರಂಟಿಗಳನ್ನು ನೀಡಲಾಗಿತ್ತು. ಈಗ ಐದನೇ ಗ್ಯಾರಂಟಿಯನ್ನು ಘೋಷಿಸಿದೆ.

ಕಾಂಗ್ರೆಸ್‌ ನೀಡಿದ ಐದು ಗ್ಯಾರಂಟಿಗಳ ಪಟ್ಟಿ ಹೀಗಿದೆ

  1. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆ
  2. ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ
  3. ಬಡ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 10 ಕೆ.ಜಿ ಅಕ್ಕಿ ಉಚಿತ ವಿತರಣೆ
  4. ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಸಹಾಯಧನ
  5. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರ

ಇದನ್ನೂ ಓದಿ: Modi Virtual samvada: ಕಾಂಗ್ರೆಸ್‌ನ ವಾರಂಟಿಯೇ ಮುಗಿದಿದೆ, ಇನ್ನು ಗ್ಯಾರಂಟಿ ಕಥೆ ಏನು?; ಮೋದಿ ಪ್ರಶ್ನೆ

Exit mobile version