Site icon Vistara News

Gadag News: ಸಹೋದರನಿಗೆ ಕಾಮಗಾರಿ ಗುತ್ತಿಗೆ; ಲಕ್ಷ್ಮೇಶ್ವರ ಪುರಸಭೆ ಸದಸ್ಯನ ಸದಸ್ಯತ್ವ ಅನರ್ಹ

work contract for brother, Lakshmeshwara town municipal council member disqualified from membership

| ಪರಮೇಶ ಲಮಾಣಿ, ಲಕ್ಷ್ಮೇಶ್ವರ
ಸಹೋದರನಿಗೆ ಕಾಮಗಾರಿ ಗುತ್ತಿಗೆ ನೀಡಿದ ಹಿನ್ನೆಲೆಯಲ್ಲಿ ಪುರಸಭೆ ಸದಸ್ಯನ ಸದಸ್ಯತ್ವ ಅನರ್ಹಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗದಗ ಜಿಲ್ಲೆಯ (Gadag News) ಲಕ್ಷ್ಮೇಶ್ವರ ಪುರಸಭೆ 15ನೇ ವಾರ್ಡ್‌ ಸದಸ್ಯ ರಾಜೀವ ಕುಂಬಿ ಎಂಬುವವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ.

ಪುರಸಭೆ ಸದಸ್ಯ ಅಧಿಕಾರ‌ ದುರುಪಯೋಗ ಪಡಿಸಿಕೊಂಡಿರುವುದರಿಂದ ಕರ್ನಾಟಕ‌ ಪೌರಸಭೆಗಳ ಅಧಿನಿಯಮ, 1964 ಕಲಂ 16ರ ಉಲ್ಲಂಘನೆ ದೃಢಪಟ್ಟ ಹಿನ್ನೆಲೆಯಲ್ಲಿ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ಅನರ್ಹಗೊಂಡ ವಾರ್ಡ್‌ ಸದಸ್ಯ ರಾಜೀವ ಕುಂಬಿ, ಸಹೋದರ ವಿಜಯ ಕುಂಬಿಗೆ ಪುರಸಭೆ ಕಾಮಗಾರಿಗಳನ್ನು ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ್ದರು ಎನ್ನಲಾಗಿದೆ.

ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಿ ಪುರಸಭೆ ಸದಸ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮಹೇಶ ಕಲಘಟಗಿ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಅಧಿಕಾರ‌ ದುರುಪಯೋಗ ದೃಢಪಟ್ಟ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ರಾಜೀವ ಕುಂಬಿ ಅವರ ಪುರಸಭೆ ಸದಸ್ಯತ್ವ ಅನರ್ಹಗೊಳಿಸಿದ್ದಾರೆ.

ಇದನ್ನೂ ಓದಿ | Lokayukta Raid: ರಾಣೆಬೆನ್ನೂರು ಪಿಎಸ್‌ಐ, ವಾಹನ ಚಾಲಕ ಲೋಕಾಯುಕ್ತ ಬಲೆಗೆ; 40 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದರು

ಲಂಚ ಪಡೆಯುವಾಗ ರಾಣೆಬೆನ್ನೂರು ಪಿಎಸ್‌ಐ, ವಾಹನ ಚಾಲಕ ಲೋಕಾಯುಕ್ತ ಬಲೆಗೆ

ಹಾವೇರಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಮಯದಲ್ಲಿ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕ ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಸುನೀಲ್‌ ತೇಲಿ ಮತ್ತು ವಾಹನ ಚಾಲಕ ಸಚಿನ್‌ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ‌ ಮಾಡಿಸಿಕೊಡುವ ವಿಚಾರಕ್ಕೆ ಪಿಎಸ್‌ಐ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ಅದರಲ್ಲಿ 40 ಸಾವಿರ ರೂಪಾಯಿ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಪಿಎಸ್‌ಐಗೆ ಸಹಕರಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Exit mobile version