ಕೊಪ್ಪಳ/ಕಲಬುರಗಿ: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಸೋಮವಾರ ವಿವಿಧೆಡೆ ವಿಶ್ವ ಪರಿಸರ ದಿನವನ್ನು (World Environment Day) ವಿಶೇಷವಾಗಿ ಆಚರಿಸಲಾಯಿತು.
ಯರಡೋಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪರಿಸರ ದಿನ
ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಯರಡೋಣಿ ಗ್ರಾಮದ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಇದನ್ನೂ ಓದಿ: WTC Final 2023: ಧೋನಿಯಿಂದ ಕೀಪಿಂಗ್ ಸಲಹೆ ಪಡೆದ ಶ್ರೀಕರ್ ಭರತ್
ವಿಸ್ತಾರ ನ್ಯೂಸ್, ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಗ್ರಾಮ ಪಂಚಾಯಿತಿ ಮತ್ತು ವಿಕಾಸ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಸಸಿಗಳನ್ನು ನೀಡಿ ಸ್ವಾಗತ ಕೋರಲಾಯಿತು.
ಕಾರ್ಯಕ್ರಮದಲ್ಲಿ ಸಿಆರ್‌ಪಿ ವಿಜಯಕುಮಾರ್ ಮಾತನಾಡಿ, ಪ್ರಕೃತಿ ನಮಗೆ ತಾಯಿ ಇದ್ದಂತೆ. ಹೀಗಾಗಿ ನಾವು ಪ್ರಕೃತಿಯನ್ನು ಸಂರಕ್ಷಣೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು ಎಂದರು. ಬಳಿಕ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಮುಖ್ಯೋಪಾಧ್ಯಾಯ ಶಶಿಧರ ಸ್ವಾಮಿ, ವಿಕಾಸ ಅಕಾಡೆಮಿ ಕಾರಟಗಿ ತಾಲೂಕು ಸಂಚಾಲಕ ಮಂಜುನಾಥ ಮಸ್ಕಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಚಿತ್ತಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನ ಆಚರಣೆ
ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಬಾಲಕ ಹಾಗೂ ಬಾಲಕಿಯರ ಪ್ರೌಢ ಶಾಲೆಯಲ್ಲಿ ಸೋಮವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಇದನ್ನೂ ಓದಿ: Krishi Khajane : ಆರೋಗ್ಯಕರ ಅನಾನಸ್ ಬೆಳೆಯುವುದು ಕಷ್ಟವೇನಲ್ಲ!
ಚಿತ್ತಾಪುರ ಸರ್ಕಾರಿ ಬಾಲಕ ಹಾಗೂ ಬಾಲಕಿಯರ ಪ್ರೌಢಶಾಲೆ ಮತ್ತು ವಿಸ್ಯಾರ ನ್ಯೂಸ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಅರಿವು ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಾಲೆಯ ಆವರಣದಲ್ಲಿ ಸಿಸಿ ನೆಡುವ ಮೂಲಕ ಸಂಭ್ರಮದಿಂದ ವಿಶ್ವ ಪರಿಸರ ದಿನವನ್ನು ಆಚರಿಸಿದರು.