ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.
ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.
ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾ ವಶ
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯಗಳನ್ನು ವಶ ಪಡೆಯಲಾಗಿದೆ. 93 ಲಕ್ಷದ 68 ಸಾವಿರ ರೂ. ಮೌಲ್ಯದ 2 ಕೆ.ಜಿ ಗಾಂಜಾ ವಶ ಪಡೆಯಲಾಗಿದೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ಆಹಾರ ಪದಾರ್ಥದ ಬಾಕ್ಸ್‌ನಲ್ಲಿ ಹಾಕಿಕೊಂಡು ಬಂದಿದ್ದ. ಸ್ಕ್ಯಾನಿಂಗ್ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ