Site icon Vistara News

Bengaluru News: ಯಾದಗಿರಿಯ ಸರ್ಕಾರಿ ಶಾಲೆ ಮೂಲಸೌಲಭ್ಯ ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಕಚೇರಿ

The cm office immediately responded to the request for infrastructure to the government school in Yadgiri

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯೊಂದರಲ್ಲಿನ (Government High School) ಅವ್ಯವಸ್ಥೆಗಳ ಬಗ್ಗೆ ಸಿಎಂ (CM) ಅವರ ಎಕ್ಸ್ ಖಾತೆಗೆ ಟ್ಯಾಗ್ ಮಾಡಿ ಮುಖ್ಯಮಂತ್ರಿಗಳ ಕಚೇರಿಯ ಗಮನ ಸೆಳೆದ ಪರಿಣಾಮ, ತುರ್ತು ಕಾಮಗಾರಿ ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು (Bengaluru News) ಕಲ್ಪಿಸಿಕೊಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗಂಗನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೌಚಾಲಯಕ್ಕಾಗಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು ಮಾತ್ರವಲ್ಲದೇ ಶಾಲೆಯ ದುರಾವಸ್ಥೆಯನ್ನು ಕಂಡು ಬೇಸತ್ತಿದ್ದ ಗ್ರಾಮಸ್ಥರು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದಿದ್ದರು. ಹೆಣ್ಣುಮಕ್ಕಳಿಗೆ ಶೌಚಾಲಯವಿಲ್ಲದೆ ಇದ್ದರೇ ಹೇಗೆ ಎಂದು ಪ್ರಶ್ನಿಸಿ, ಶಾಲಾ ಮುಖ್ಯಸ್ಥರು ಮುಖ್ಯಮಂತ್ರಿಗಳ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದರು.

ಇದನ್ನೂ ಓದಿ: Uttara Kannada News: ವಿಶ್ವದರ್ಶನ ಪ್ರಕಾಶನದ ʼನಟ್ಟಿರುಳುʼ ಕವನ ಸಂಕಲನ, ತ್ರಿಪುರಾಂಬಿಕೆ ಧ್ವನಿಸುರುಳಿ ಲೋಕಾರ್ಪಣೆ

ಇದು ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ಬಂದು ತಕ್ಷಣವೇ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ದುರಾವಸ್ಥೆಯನ್ನು ಸರಿಪಡಿಸುವಂತೆ ದೂರವಾಣಿ ಮುಖಾಂತರ ಸೂಚಿಸಿ, ಕುಡಿಯುವ ನೀರು, ಬಿಸಿಯೂಟ ಮತ್ತು ಶೌಚಾಲಯಕ್ಕಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ತುರ್ತು ಕಾಮಗಾರಿಯನ್ನು ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗಿದೆ. ಶಾಲೆಯ ಹೊರಗೆ ಕಲಿಯುತ್ತಿದ್ದ ಶಾಲಾ ಮಕ್ಕಳು ಈಗ ಶಾಲಾ ಕೊಠಡಿಗಳಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಗ್ರಾಮಸ್ಥರು ಹಾಗೂ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: UPI service: ಶ್ರೀಲಂಕಾ, ಮಾರಿಷಸ್‌ನಲ್ಲಿ ಭಾರತೀಯ ಯುಪಿಐ ಸೇವೆ ಆರಂಭ

ಜನಸ್ಪಂದನ ಕಾರ್ಯಕ್ರಮವು ಜನರ ಅಹವಾಲುಗಳಿಗೆ ಸಕಾರಾತ್ಮಕ ಪರಿಹಾರ ದೊರಕಿಸುವ ಪ್ರಯತ್ನವಾಗಿದೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸಾರ್ವಜನಿಕ ಕುಂದು ಕೊರತೆಗಳನ್ನು ಕೂಡ ಪರಿಗಣಿಸಿ ಬಗೆಹರಿಸಲು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಪ್ರತ್ಯೇಕ ತಂಡವನ್ನು ನಿಯೋಜಿಸಲಾಗಿದ್ದು, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version