Site icon Vistara News

Death News: ಶಾಸಕ ರಾಜಾ ವೆಂಕಟಪ್ಪ ನಾಯಕ ಸಾವಿನ ಸುದ್ದಿ ಕೇಳಿ ಅಭಿಮಾನಿಗೆ ಹಾರ್ಟ್‌ ಅಟ್ಯಾಕ್‌

Death News Raja Venkatappa Nayaka Abhimani

ಯಾದಗಿರಿ: ಹಿರಿಯ ಕಾಂಗ್ರೆಸ್‌ ನಾಯಕ, ಸುರಪುರದಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರು ಹೃದಯಾಘಾತದಿಂದ ನಿಧನರಾಗಿದ್ದು (Death News), ಎಲ್ಲೆಡೆ ಕಂಬನಿ ಹರಿಯುತ್ತಿದೆ. ಸಹವರ್ತಿ ರಾಜಕಾರಣಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಾ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಇದರ ನಡುವೆ ಅವರ ಸಾವನ್ನು ಅರಗಿಸಿಕೊಳ್ಳಲಾಗದೆ ಒಬ್ಬ ಅಭಿಮಾನಿ ಹೃದಯಾಘಾತದಿಂದ (Fan dead by Heart attack) ಮೃತಪಟ್ಟಿದ್ದಾರೆ.

67 ವರ್ಷದ ರಾಜಾ ವೆಂಕಟಪ್ಪ ನಾಯಕ ಅವರು ಭಾನುವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಸಾವಿನ ಸುದ್ದಿ ಕೇಳಿದ ಅವರ ಅಪ್ಪಟ ಅಭಿಮಾನಿ ಹಣಮಂತ (64) ಎಂಬವರು ಕೂಡಾ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದ ನಿವಾಸಿಯಾಗಿರುವ ಹಣಮಂತ ಅವರು ರಾಜಾವೆಂಕಟಪ್ಪ ನಾಯಕ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆಯೇ ಗಾಬರಿಯಾಗಿ ಹೃದಯಘಾತದಿಂದ ಮೃತಪಟ್ಟರು. ಶಾಸಕ ರಾಜಾವೆಂಕಟಪ್ಪ ನಾಯಕ ಅವರ ನಿಧನದಿಂದ ಅಭಿಮಾನಿ ಬಳಗ ದೊಡ್ಡ ಮಟ್ಟದ ನೋವಿನಲ್ಲಿದೆ.

ಸುರಪುರ ವಿಧಾನಸಭೆ ಕ್ಷೇತ್ರದ ಎಸ್ ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಾಜಾ ವೆಂಕಟಪ್ಪ ನಾಯಕ. ಅವರು ಕಾಂಗ್ರೆಸ್ ಪಕ್ಷದಿಂದಲೇ ಪ್ರತಿ ಬಾರಿ ಗೆದ್ದಿದ್ದಾರೆ. 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ ಪತ್ನಿ ರಾಣಿ ಲತಾ ಕುಮಾರಿ ನಾಯಕ, ಪುತ್ರರಾದ ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ ನಾಯಕ ಇದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುರಪುರ ಪಟ್ಟಣದಲ್ಲಿ ನಡೆಯಲಿದೆ. ಅಂತ್ಯಕ್ರಿಯೆಗೆ ಸಕಲ ಸರ್ಕಾರಿ ಗೌರವ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

Death News : ಮನೆ ಮುಂದೆ ಅಭಿಮಾನಿಗಳು, ಅಂಗಡಿ ಮುಂಗಟ್ಟುಗಳು ಬಂದ್‌

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಹಿನ್ನೆಲೆಯಲ್ಲಿ ಅವರ ನಿವಾಸದ ಮುಂದೆ ದೊಡ್ಡ ಪ್ರಮಾಣದಲ್ಲಿ ಜನ ಸೇರಿದ್ದಾರೆ. ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.

Raja Venkatappa Nayaka DK Shivakumar

ಸುರಪುರ ಪಟ್ಟಣದಲ್ಲಿನ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ವ್ಯಾಪಾರಿಗಳು ಗೌರವ ಸಲ್ಲಿಸಿದರು. ಇಡೀ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ.

ಇದನ್ನೂ ಓದಿ : Death News : ಹಿರಿಯ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

ರಾಜಾ ವೆಂಕಟಪ್ಪ ನಾಯಕ ಅವರಿಗೆ ಡಿ.ಕೆ. ಶಿವಕುಮಾರ್‌ ಅಂತಿಮ ನಮನ

ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

ಬೆಂಗಳೂರು : ಸುರಪುರ‌ದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಶಾಸಕರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಜನಾನುರಾಗಿ ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು.ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರು ಕಟ್ಟಾ ಕಾಂಗ್ರೆಸ್‌ ನಾಯಕನಾಗಿಯೇ ಮುಂದುವರಿದಿದ್ದರು. ಕೆಲವು ದಿನದ ಹಿಂದಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ನಾಲ್ಕು ಬಾರಿ ಸುರಪುರ ಕ್ಷೇತ್ರ ಪ್ರತಿ‌ನಿಧಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಸದಾ ಸಾಮಾಜಿಕ ಬದ್ಧತೆ ಹೊಂದಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ‌

Exit mobile version