Site icon Vistara News

Death News : ಹಿರಿಯ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

Death News Raja Venkatappa Nayaka

ಯಾದಗಿರಿ: ರಾಜ್ಯದ ಹಿರಿಯ ಕಾಂಗ್ರೆಸ್‌ ಮುಖಂಡ, ಸುರಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ (Surapura Congress MLA) ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರು ಇನ್ನಿಲ್ಲ. ಅವರಿಗೆ 67 ವರ್ಷ ಆಗಿತ್ತು. ಅವರು ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ (Manipal Hospital) ಭಾನುವಾರ ಮಧ್ಯಾಹ್ನ ಕೊನೆಯುಸಿರೆಳೆದರು (Death News).

ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಕಟ್ಟಾ ಕಾಂಗ್ರೆಸ್‌ ನಾಯಕನಾಗಿಯೇ ಮುಂದುವರಿದಿದ್ದರು. ಕೆಲವು ದಿನದ ಹಿಂದಷ್ಟೇ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಲ್ಲಿ ಅವರು ಚಿಕಿತ್ಸೆ ಫಲಿಸದೆ ನಿಧನರಾದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷ ಕಟ್ಟಲು ಶಕ್ತಿ ಮೀರಿ ಶ್ರಮಿಸಿದ್ದರು.

ಇದನ್ನೂ ಓದಿ : Death News : ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿನಿಧಿ ಆಗಿದ್ದ ಹಿರಿಯ ಅಧಿಕಾರಿ ಬೈಕೆರೆ ನಾಗೇಶ್‌ ಇನ್ನಿಲ್ಲ

ಸೋಮವಾರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಯಾವಾಗ ಗೆಲುವು ಸಾಧಿಸಿದರು?

ಸುರಪುರ ವಿಧಾನಸಭೆ ಕ್ಷೇತ್ರದ ಎಸ್ ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಾಜಾ ವೆಂಕಟಪ್ಪ ನಾಯಕ. ಅವರು ಕಾಂಗ್ರೆಸ್ ಪಕ್ಷದಿಂದಲೇ ಪ್ರತಿ ಬಾರಿ ಗೆದ್ದಿದ್ದಾರೆ. 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

Exit mobile version