ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ (Drowned in Water) ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.
ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್ ಮೃತದುರ್ದೈವಿ.
ವಸಂತ್ ನೀರು ಕುಡಿಯಲು ಕೃಷಿ ಹೊಂಡಕ್ಕೆ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ
ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ
ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.
ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
A woman who was walking on a road being dragged by a cattle in Thiruvotriyur, Chennai. pic.twitter.com/yNuHYoY8D5
— KS / Karthigaichelvan S (@karthickselvaa) June 17, 2024
ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.
ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ