Electric Shock: ಜಾನುವಾರುಗಳಿಗೆ ಮೇವು ತರುವಾಗ ವಿದ್ಯುತ್ ತಂತಿ ತಗುಲಿ ರೈತ ಸಾವು - Vistara News

ಯಾದಗಿರಿ

Electric Shock: ಜಾನುವಾರುಗಳಿಗೆ ಮೇವು ತರುವಾಗ ವಿದ್ಯುತ್ ತಂತಿ ತಗುಲಿ ರೈತ ಸಾವು

Electric Shock: ರೈತರೊಬ್ಬರು ವಿದ್ಯುದಾಘಾತದಿಂದ ಮೃತಪಟ್ಟಿದ್ದಾರೆ. ಜಾನುವಾರುಗಳಿಗೆ ಮೇವು ತರಲೆಂದು ಜಮೀನಿಗೆ ಹೋದಾಗ ವಿದ್ಯುತ್‌ ತಂತಿ ತಗುಲಿದೆ. ಪರಿಣಾಮ ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Electric Shock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ವಿದ್ಯುತ್ ತಂತಿ ತಗುಲಿ (Electric Shock) ರೈತರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಯಾದಗಿರಿಯ ಹೊರಟೂರು ಗ್ರಾಮದ ರೈತ ಮರೇಪ್ಪ (43) ಮೃತ ದುರ್ದೈವಿ.

ಮರೇಪ್ಪ, ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮದ ಜಮೀನಿಗೆ ಬಂದಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿದ್ದರಿಂದ ವಿದ್ಯುತ್‌ ಪ್ರಸರಣವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯಕ್ತಿಕ ಆರ್ಥಿಕ ಸಹಾಯ ಮಾಡಿದರು. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: IPL 2024: ಐಪಿಎಲ್‌ ಪಂದ್ಯಕ್ಕೆ ಬೆಂಗಳೂರಿನಲ್ಲಿ ಬಿಎಂಟಿಸಿ ವಿಶೇಷ ಕಾರ್ಯಾಚರಣೆ; ಮೆಟ್ರೋ ರೈಲು ಓಡಾಟ ವಿಸ್ತರಣೆ

ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

ಮೇರಿಲ್ಯಾಂಡ್‌: ಕೊಲೆ ಪ್ರಕರಣದ (murder case) ಆರೋಪಿಯಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭದ್ರೇಶ್‌ಕುಮಾರ್ ಚೇತನ್‌ಭಾಯ್ ಪಟೇಲ್ ಅಲಿಯಾಸ್ ಭದ್ರೇಶ್‌ಕುಮಾರ್ ಸಿ. ಪಟೇಲ್‌ನ (Bhadreshkumar Chetanbhai Patel alias Bhadreshkumar C. Patel) ಸುಳಿವು ನೀಡಿದವರಿಗೆ 2,50,000 ಡಾಲರ್ (3 ಕೋಟಿ ರೂ.) ಬಹುಮಾನವನ್ನು ಯುನೈಟೆಡ್ ಸ್ಟೇಟ್ಸ್‌ನ (United States) ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ (Federal Bureau of Investigation) ಅಧಿಕಾರಿಗಳು ಘೋಷಿಸಿದ್ದಾರೆ.

ಗುಜರಾತ್‌ನ (gujarat) ಕಂತ್ರೋಡಿ ತಾಲೂಕಿನ ವಿರಾಮ್‌ಗಮ್‌ನ 34 ವರ್ಷದ ಭಾರತೀಯ ಮೂಲದ ಭದ್ರೇಶ್‌ಕುಮಾರ್ ಸಿ. ಪಟೇಲ್‌ 2015ರ ಏಪ್ರಿಲ್ 12ರಂದು ತನ್ನ ಹೆಂಡತಿಯನ್ನು ಕೊಂದು ಪರಾರಿಯಾಗಿದ್ದ ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿರುವ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಮತ್ತು ಆತನ ಪತ್ನಿ ಪಾಲಕ್ ಪಟೇಲ್ ಡೋನಟ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

2015ರ ಏಪ್ರಿಲ್ 13ರಂದು ಮೇರಿಲ್ಯಾಂಡ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಹೊರಡಿಸಲಾದ ಬಂಧನ ವಾರಂಟ್ ಪ್ರಕಾರ ಪಟೇಲ್ ವಿರುದ್ಧ ಉದ್ದೇಶಪೂರ್ವಕವಾಗಿ ಹಲ್ಲೆ, ಕೊಲೆ ಮಾಡಿರುವ ಆರೋಪವಿದೆ. ಯುನೈಟೆಡ್ ಸ್ಟೇಟ್ಸ್ ಡಿಸ್ಟ್ರಿಕ್ಟ್ ಕೋರ್ಟ್, ಡಿಸ್ಟ್ರಿಕ್ಟ್ ಆಫ್ ಮೇರಿಲ್ಯಾಂಡ್, ಬಾಲ್ಟಿಮೋರ್, ಮೇರಿಲ್ಯಾಂಡ್ 2015 ರಂದು FBI ನ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭದ್ರೇಶ್‌ಕುಮಾರ್ ಸಿ. ಪಟೇಲ್‌ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ನವವಿವಾಹಿತರಾದ ಭದ್ರೇಶಕುಮಾರ್ ಮತ್ತು ಪಾಲಕ್ ಪಟೇಲ್ ಕೊನೆಯ ಬಾರಿಗೆ ಜತೆಯಾಗಿ ಕಾಣಿಸಿಕೊಂಡಿದ್ದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ.


ಕೊಲೆ ಮಾಡಿ ಪರಾರಿಯಾಗಿದ್ದು ಹೇಗೆ?

ಮದುವೆಯಾದ ಬಳಿಕ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಪತ್ನಿಯೊಂದಿಗೆ ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿ ನೆಲೆಸಿದ್ದರು. ಅಲ್ಲಿ ಅವರಿಬ್ಬರೂ ಡೋನಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಪಾಲಕ್ ಅವರು ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಅವರು ಭಾರತಕ್ಕೆ ಮರಳಿ ಬರಲು ಬಯಸುವುದಾಗಿ ಹೇಳಿದ್ದಳು. ಬಳಿಕ ಪಾಲಕ್ ಮತ್ತು ಭದ್ರೇಶ್‌ಕುಮಾರ್ ಹಿಂದಿನ ಕೋಣೆಗೆ ತೆರಳಿದ್ದು, ಅಲ್ಲಿ ಅವಳನ್ನು ಆತ ಚಾಕುವಿನಿಂದ ಇರಿದು ಕೊಂದಿದ್ದ. ಬಳಿಕ ಆತ ಕೆಲವೇ ನಿಮಿಷದಲ್ಲಿ ಹೊರಗೆ ಹೋಗಿದ್ದ.

ಪತ್ನಿಯನ್ನು ಕೊಂದ ಅನಂತರ ಪಟೇಲ್ ಹತ್ತಿರದ ಅಪಾರ್ಟ್‌ಮೆಂಟ್‌ಗೆ ಹೋಗಿ ಬಟ್ಟೆ ಬದಲಿಸಿ, ಪಾಸ್‌ಪೋರ್ಟ್ ಮತ್ತು ಸ್ವಲ್ಪ ಹಣವನ್ನು ತೆಗೆದುಕೊಂಡು ನೆವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೊಟೇಲ್ ಗೆ ಟ್ಯಾಕ್ಸಿಯಲ್ಲಿ ತೆರಳಿದ್ದಾನೆ. ಅಲ್ಲಿ ಆತ ಸುಮಾರು 3 ಗಂಟೆಗೆ ಹೊಟೇಲ್ ಗೆ ತೆರಳಿ ಮರುದಿನ ಅಲ್ಲಿಂದ 10 ಗಂಟೆ ಸುಮಾರಿಗೆ ಹೊಟೇಲ್ ನಿಂದ ಚೆಕ್ ಔಟ್ ಮಾಡಿದ್ದಾನೆ. ಅಲ್ಲಿಂದ ನೆವಾರ್ಕ್ ಪೆನ್ ನಿಲ್ದಾಣಕ್ಕೆ ಹೋಗಿದ್ದು, ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಗದ್ದಲ ಗಲಾಟೆಗಳು ವರದಿ ಆಗಿವೆ. ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆದಿದೆ. ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

VISTARANEWS.COM


on

By

Lok sabha Election 2024
Koo

ಯಾದಗಿರಿ/ಬೆಳಗಾವಿ: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ (Lok Sabha Election 2024) ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.

ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕೈ-ಕಮಲ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇವಿಎಂಗೆ ಬೆಂಕಿ ಹಾಕಿದ ಯುವಕ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ಸಿಬ್ಬಂದಿ ನೀರು ಹಾಕಿ ಬೆಂಕಿ ಹರಿಸಿದ್ದಾರೆ. ಮರಾಠಾ ಆಕರ್ಷಣ ವಿಚಾರಕ್ಕೆ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇನ್ನೂ ಈ ಮತಗಟ್ಟೆಯಲ್ಲಿ ಸುಮಾರು 1300 ಮತದಾರರಿರುವ ಕೇಂದ್ರವಾಗಿದೆ. ಸದ್ಯ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

ವಿಜಯನಗರದಲ್ಲಿ ಮತದಾನ ಬಹಿಷ್ಕಾರ

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ವಿಂಗಡಣೆ ಮಾಡಿದ್ದಕ್ಕೆ ಮತದಾನ ಬಹಿಷ್ಕಾರ ಹಾಕಲಾಯಿತು. ಹಾರುವನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 78ರಲ್ಲಿ, ಚಿಲಕನಹಟ್ಟಿಯ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡುವಂತೆ ಮತದಾರರು ಪಟ್ಟು ಹಿಡಿದರು. ಕಳೆದ ಹಲವು ವರ್ಷದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯವಿತ್ತು. ಚಿಲಕನಹಟ್ಟಿಯಿಂದ ಹಾರುವನಹಳ್ಳಿ ಗ್ರಾಮಕ್ಕೆ 3 ಕಿ.ಮೀ ಅಂತರವಿದೆ. ಅದಕ್ಕೆ ರಾಷ್ಟ್ರೀಯ ಹೆದ್ದಾರಿ 50 ದಾಟಬೇಕಿದ್ದು, ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಗ್ರಾಮಸ್ಥರದ್ದು.

ದಾವಣಗೆರೆಯಲ್ಲಿ ಗೌಪ್ಯ ಮತದಾನ ವೈರಲ್‌

ದಾವಣಗೆರೆ: ಎಷ್ಟೇ ಕಟ್ಟುನಿಟ್ಟಾಗಿ ಗೌಪ್ಯ ಮತದಾನ ಮಾಡಿದರೂ ಫೋಟೋ ತೆಗೆದುಕೊಂಡು ಪಬ್ಲಿಕ್‌ ಮಾಡುತ್ತಿರುವವರು ಕಂಡುಬಂದಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ಗೆ ಮತ ಹಾಕಿದ್ದನ್ನು ಬಿಜೆಪಿ ಕಾರ್ಯಕರ್ತನೊಬ್ಬ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅದನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಮತಗಟ್ಟೆಗೆ ಮೊಬೈಲ್ ನಿಷೇಧ ಮಾಡಿದರೂ ಮೊಬೈಲ್ ತೆಗೆದುಕೊಂಡು ಹೋಗಲಾಗಿದೆ.

ಬೆಳಗಾವಿಯಲ್ಲಿ ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತ ವಾಗ್ವಾದ

ಬೆಳಗಾವಿ: ಕೆಲವೆಡೆ ಬಿಜಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬೆಳಗಾವಿಯ ಹನುಮಾನ್ ನಗರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತಗಟ್ಟೆಯಲ್ಲೇ ನಿಂತು ಮತದಾರರು ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರಭಾವ ಬೀರುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಕಾಂಗ್ರೆಸ್ ‌ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
hd revanna jailed 2
ಕ್ರೈಂ10 mins ago

HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Jyothi Rai clarity For torturing on indecent videos
ಕಿರುತೆರೆ14 mins ago

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಹೀಗಿದೆ!

IPL 2024 - Points Table
ಕ್ರೀಡೆ18 mins ago

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

Reservation Row
Lok Sabha Election 202419 mins ago

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Gurpatwant Singh Pannun
ವಿದೇಶ34 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Sangeeth Sivan dies Riteish Deshmukh Tusshar Kapoor pay tribute
ಮಾಲಿವುಡ್40 mins ago

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

SRH vs LSG
ಕ್ರೀಡೆ57 mins ago

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

bagalakote unrest
ಕ್ರೈಂ1 hour ago

Bagalakote Unrest: ಹಿಂದೂ ಯುವಕ- ಮುಸ್ಲಿಂ ಯುವತಿ ನವದಂಪತಿ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ಲಾಠಿಚಾರ್ಜ್‌

Do You Know
ಲೈಫ್‌ಸ್ಟೈಲ್1 hour ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ2 hours ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌