Guru Vandana | ಯಾದಗಿರಿ ಚಂದ್ರಶೇಖರ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳಿಂದ ಗುರುವಂದನೆ - Vistara News

ಯಾದಗಿರಿ

Guru Vandana | ಯಾದಗಿರಿ ಚಂದ್ರಶೇಖರ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳಿಂದ ಗುರುವಂದನೆ

ಯಾದಗಿರಿಯಲ್ಲಿ ಚಂದ್ರಶೇಖರ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಪ್ರೌಢಶಾಲೆಯ 1991-92ನೇ ಬ್ಯಾಚ್‌ನ 10ನೇ ತರಗತಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

VISTARANEWS.COM


on

Guru Vandana
ಯಾದಗಿರಿಯ ನ್ಯೂ ಕನ್ನಡ ಪ್ರೌಢಶಾಲೆಯ 1991-92ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: 30 ವರ್ಷಗಳ ಹಿಂದಿನ ಗುರು ಶಿಷ್ಯರ ಅಪರೂಪದ ಸಮಾಗಮಕ್ಕೆ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ರಸ್ತೆಯ ಸಪ್ತಪದಿ ಕನ್ವೆನ್ಷನ್ ಹಾಲ್‌ ಸಾಕ್ಷಿಯಾಯಿತು. ಯಾದಗಿರಿಯ ಚಂದ್ರಶೇಖರ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಪ್ರೌಢಶಾಲೆಯ 1991-92ನೇ ಬ್ಯಾಚ್‌ನ ನೂರಾರು ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ತಮ್ಮನ್ನು ತಿದ್ದಿ ತೀಡಿ ಬೆಳೆಸಿದ ಶಿಕ್ಷಕ ವರ್ಗಕ್ಕೆ ಸನ್ಮಾನಿಸುವ ಮೂಲಕ ಗುರುವಂದನೆ (Guru Vandana) ಸಲ್ಲಿಸಿದರು.

ಬರೋಬ್ಬರಿ ಮೂರು ದಶಕಗಳ ಹಿಂದೆ, ಹೈಸ್ಕೂಲ್‌ನಲ್ಲಿ ಅಕ್ಷರ ಕಲಿಸಿದ ಗುರುಗಳು ಹಾಗೂ ಕಲಿತ ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಸಮ್ಮಿಲನ ಸಂಭ್ರಮಕ್ಕೆ, ಹಳೆಯ ನೆನಪುಗಳ ಮರುಕಳಿಸುವಿಕೆಗೆ ಕಾರಣವಾಗಿತ್ತು. ಕಾರ್ಯಕ್ರಮದಲ್ಲಿ ಅಂದಿನ ಶಿಕ್ಷಕರ ವೃಂದದ ಬಹುತೇಕ ಗುರುಗಳು ಹಾಗೂ ಮುಂಬೈ, ಬೆಂಗಳೂರು, ಹೈದರಾಬಾದ್ ಸೇರಿ ರಾಜ್ಯ ಹಾಗೂ ದೇಶದ ವಿವಿಧೆಡೆ ವಾಸಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ಅಲ್ಲಿ ಸೇರಿದ್ದರು.

Guru Vandana@yadgiri

ಭಾನುವಾರ ಬೆಳಗ್ಗೆ ನ್ಯೂ ಕನ್ನಡ ಪ್ರೌಢಶಾಲೆಯಲ್ಲಿ ಸಮಾವೇಶಗೊಂಡ ವಿದ್ಯಾರ್ಥಿಗಳು ಗುರುಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಹಿಂದಿನಂತೆ, ಶಾಲಾ ಆವರಣದಲ್ಲಿ ರಾಷ್ಟ್ರಗೀತೆಯ ನಂತರ ಆಯಾ ಕೊಠಡಿಗಳಿಗೆ ತೆರಳಿ ಆಗಿನಂತೆ ಅವರವರ ಬೆಂಚುಗಳ ಮೇಲೆ ಕುಳಿತು ನೆನಪುಗಳ ಮರುಕಳಿಸುವಂತೆ ಮಾಡಿದರು. ಅಲ್ಲೊಂದು ಫೋಟೋ ಸೆಷನ್ ಕೂಡ ನಡೆಯಿತು.

ಇದನ್ನೂ ಓದಿ | ‌ವಚನಾನಂದ ಶ್ರೀ-ಯತ್ನಾಳ್‌ ನಡುವೆ ಜೋಕರ್‌-ಬ್ರೋಕರ್‌ ವಾರ್‌: ಸ್ವಾಮೀಜಿ ಬಣ್ಣ ಬಯಲು ಮಾಡುವೆ ಎಂದ ಶಾಸಕ

ನಂತರ, ಕಾರ್ಯಕ್ರಮದ ಸ್ಥಳಕ್ಕೆ ಗುರುಗಳು ಆಗಮಿಸಿದಾಗ ಬ್ಯಾಂಡ್‌, ಡೊಳ್ಳು ಹಾಗೂ ಸಂಗೀತದ ಮೂಲಕ ಅವರನ್ನು ಬರಮಾಡಿಕೊಂಡ ಶಿಷ್ಯವೃಂದ, ಗುರುಗಳ ಪಾದಗಳಿಗೆ ಪುಷ್ಪವೃಷ್ಟಿ ಮೂಲಕ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿತು. ಇಂತಹ ಅನಿರೀಕ್ಷಿತ ಹಾಗೂ ಸಂಭ್ರಮದ ಸ್ವಾಗತಕ್ಕೆ ಗುರುಗಳ ಕಣ್ಣೀರಂಚಲ್ಲಿ ನೀರಾಡಿಸಿತ್ತು.

Guru Vandana@ಯಾದಗಿರಿ

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿದ್ರಾಮಪ್ಪ ಪಾಟೀಲ್ ಚೇಗುಂಟಾ, ಸಂಸ್ಥೆಗೆ ಕೀರ್ತಿ ತಂದ ಶಿಷ್ಯವೃಂದಕ್ಕೆ ಶ್ಲಾಘಿಸಿದರಲ್ಲದೆ, ಇಂತಹ ಕಾರ್ಯಕ್ರಮಗಳು ನಿಜಕ್ಕೂ ಅವಿಸ್ಮರಣೀಯ ಎಂದರು.
ನಿವೃತ್ತ ಶಿಕ್ಷಕರಾದ ಎಚ್.ಎಸ್.ಬಿರಾದಾರ್ ಮಾತನಾಡಿ, ಮೂರು ದಶಕಗಳ ಹಿಂದಿನ ಘಟನೆಗಳ ಮೆಲುಕು ಹಾಕಿದರು. ಇಂತಹ ಅಭೂತಪೂರ್ವ ಸಂಭ್ರಮಾಚರಣೆ ಖುಷಿ ಹಾಗೂ ಸಾರ್ಥಕ ಭಾವ ಮೂಡಿಸಿದೆ ಎಂದರು.
77ರ ಹರೆಯದ ಸದಾನಂದ ಪಾಟೀಲ್ ಮಾತನಾಡಿ, ಇಂತಹ ಕಾರ್ಯಕ್ರಮ ಹಾಗೂ ಮಕ್ಕಳ ಪ್ರೀತಿ ನೋಡಿದರೆ 100 ವರ್ಷಗಳ ಕಾಲ ಜೀವಿಸುವ ಆಸೆಯಾಗುತ್ತದೆ ಎಂದು ಭಾವುಕರಾದರು.

ನಿವೃತ್ತ ಶಿಕ್ಷಕರಾದ ಚಂದ್ರಕಾಂತ ಲೇವಡಿ, ಮಹಾದೇವಪ್ಪಾ ಮುನಗಲ್, ನಾಗನಗೌಡ ಪಾಟೀಲ್, ಸುರೇಂದ್ರನಾಥ್ ಕಡೇಚೂರು, ಶಿವಶಂಕರ ಪಾಟೀಲ್, ವಿಜಯರಾವ್ ಕುಲ್ಕರ್ಣಿ, ಮಲ್ಲಪ್ಪ ಮುಂಡ್ರಿಕೇರಿ, ಪರಿಮಳಾ ಜೋಷಿ, ಶೋಭಾ ಟಪಾಲ, ಅಕ್ಕನಾಗಮ್ಮ, ಜುಬೇದಾ ಬೇಗಂ ಮಾತನಾಡಿದರು. ಕಾರ್ಯದರ್ಶಿಗಳ ಸಹಿತ ಅಂದಿನ ಈ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ಮಹಾದೇವ ಅವರನ್ನು ಗೌರವಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ನರಸಿಂಗರಾವ್ ಕುಲ್ಕರ್ಣಿ ಹಾಗೂ ಪರಿಮಳಾ ನಿರೂಪಿಸಿದರು, ಶಿವಶರಣಪ್ಪ ಬಿ. ನಾಯಕ್ ಸ್ವಾಗತಿಸಿ, ರೋಹಿತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಪ್ಪಾ ಮ್ಯಾಗೇರಿ ವಂದಿಸಿದರು, ಅಗಲಿದ ಗುರುಗಳು ಹಾಗೂ ಸಹೋದ್ಯೋಗಿಗಳ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. ಅನಿವಾರ್‍ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಬರಲಾಗದ ಶಿಕ್ಷಕರು ಇದರ ಯಶಸ್ಸಿಗೆ ಸಂದೇಶ ಕಳುಹಿಸಿದ್ದರು. ಲಿಂಗೇರಿ ಮೊರಾರ್ಜಿ ಶಾಲೆಯ ಚಂದ್ರಶೇಖರ ಗೋಗಿ ಹಾಗೂ ತಂಡದಿಂದ ನಾಡಗೀತೆ, ವಚನ ಗಾಯನ ಮತ್ತು ವಿತೇಶ ತಂಡದಿಂದ ಸಂಗೀತ ಸಂಜೆ ನಡೆಯಿತು. ಬಾಲಪ್ರತಿಭೆ ಪವನ್ ಮ್ಯಾಗೇರಿ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು.

1991-92ನೇ ಸಾಲಿನ ಎಸ್‌ಎಸ್‌ಎಲ್‌ಸಿಯ ಎಲ್ಲ ಕನ್ನಡ ಹಾಗೂ ಆಂಗ್ಲ ವಿಭಾಗದಲ್ಲಿ ಅಭ್ಯಸಿಸಿದ್ದ ಅಂದಿನ ಬಹುತೇಕ ವಿದ್ಯಾರ್ಥಿಗಳು ಆಗಮಿಸಿದ್ದರು. ಇದರ ಅಂಗವಾಗಿ ಎಲ್ಲರಿಗೂ ಸ್ಮರಣಿಕೆ ಹಾಗೂ ಸನ್ಮಾನಿಸಲಾಯಿತು.

ಇದನ್ನೂ ಓದಿ | Panchamasali Community | ಮುರುಗೇಶ್ ನಿರಾಣಿ ಸಾಹೇಬ್ರು ಸ್ವಲ್ಪ ದಿನದಲ್ಲೇ ಸಿಎಂ ಆಗ್ತಾರೆ: ರಾಮಣ್ಣ ಲಮಾಣಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಯಾದಗಿರಿ

Lok Sabha Election 2024: ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯನ್ನು ಗೆಲ್ಲಿಸಿ: ಸಚಿವ ದರ್ಶನಾಪುರ

Lok Sabha Election 2024: ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಜಿಲ್ಲಾಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಚುನಾವಣಾ ಪ್ರಚಾರ ಕೈಗೊಂಡು ಮತ ಯಾಚಿಸಿದರು.

VISTARANEWS.COM


on

Minister Sharanbassappa Gowda Darshanpur Election campaign
Koo

ಯಾದಗಿರಿ: ಕಲಬುರಗಿ ಲೋಕಸಭಾ ಕ್ಷೇತ್ರದ (Lok Sabha Election 2024) ಸಮಗ್ರ ಅಭಿವೃದ್ಧಿಯ ಕನಸು ಕಟ್ಟಿಕೊಂಡ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಮನವಿ ಮಾಡಿದರು.

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಜನರಿಗೆ ನೀಡಿದ್ದ ಪಂಚ ಗ್ಯಾರಂಟಿಗಳ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ನಾಲ್ಕೈದು ತಿಂಗಳಲ್ಲಿ ಈಡೇರಿಸಿ, ಜನರು ಸ್ವಾಭಿಮಾನದ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದೆ. ಅದರಂತೆ ನಮ್ಮ ಮೇಲೆ ಜನರಿಟ್ಟಿದ್ದ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರ, ದಲಿತರ, ಹಿಂದುಳಿದವರ ಉದ್ಧಾರಕ್ಕಾಗಿ 25 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಬಳಿಕ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಮಾತನಾಡಿದರು.

ಇದೇ ವೇಳೆ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ಕಳೆದ ಐದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಲಬುರಗಿ ಲೋಕಸಭಾ ಕ್ಷೇತ್ರದ ಪ್ರಗತಿಗಾಗಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.‌

ಇದನ್ನೂ ಓದಿ: Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಶರಣಿಕ ಕುಮಾರ ದೋಕಾ, ಕಾಂಗ್ರೆಸ್ ಮುಖಂಡ ಮರಿಗೌಡ ಹುಲಿಕಲ್, ಕಾಂಗ್ರೆಸ್ ಹಿರಿಯ ಮುಖಂಡರಾದ ಸಾಯಿಬಣ್ಣ ಬೊರಬಂಡ, ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿರಂಜನರೆಡ್ಡಿ ಶೆಟ್ಟಿಹಳ್ಳಿ, ಎಸಿ ಕಾಡ್ಲೂರು, ವಿಶ್ವನಾಥ ನೀಲಹಳ್ಳಿ, ಚಿದಾನಂದಪ್ಪ ಕಾಳೆಬೆಳಗುಂದಿ, ಬಸ್ಸುಗೌಡ ಬಿಳ್ಹಾರ, ಮಹಿಪಾಲರೆಡ್ಡಿ ದುಪ್ಪಲ್ಲಿ, ವಿಜಯ ಕಂದಳ್ಳಿ, ಸಾಬಣ್ಣ ಸೈದಾಪುರ, ಗ್ರಾ.ಪಂ ಸದಸ್ಯ ಶರಣಪ್ಪ ಬೈರಂಕೊಂಡಿ, ಆಂಜನೇಯ ರಾಂಪುರ, ಅನಿಲ್‌ ಭಾಸ್ಕರ್, ದೇವಪ್ಪ ಗುತ್ತೇದಾರ ರಾಚನಳ್ಳಿ, ಪುಂಡಲಿಕ್ ಗೊಂದಡಗಿ, ವೆಂಕಟೇಶ ಕೂಡಲೂರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Yadgir News: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರ ದುರ್ಮರಣ

Yadgir News: ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಮೂವರು ಸ್ನೇಹಿತರು ಕೆರೆಗೆ ಈಜಾಡಲು ತೆರಳಿದ್ದರು. ಈ ವೇಳೆ ನೀರು ಪಾಲಾಗಿದ್ದಾರೆ.

VISTARANEWS.COM


on

Three boys drown
Koo

ಯಾದಗಿರಿ: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ (Yadgir News) ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಮೂವರು ಸ್ನೇಹಿತರು ಕೆರೆಗೆ ಈಜಾಡಲು ತೆರಳಿದ್ದರು. ಈ ವೇಳೆ ಮೂವರೂ ನೀರು ಪಾಲಾಗಿದ್ದಾರೆ. ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಮೃತ ದುರ್ದೈವಿಗಳು. ಬಾಲಕರ ಮೃತದೇಹಗಳನ್ನು ಸ್ಥಳೀಯರು ಹೊರೆ ತೆಗೆದಿದ್ದಾರೆ.

ಇದನ್ನೂ ಓದಿ | Smuggling Case: ಬ್ಯಾಂಕಾಕ್‌ನಿಂದ ಸ್ಮಗ್ಲಿಂಗ್‌ ಮಾಡುತ್ತಿದ್ದ 10 ಹಳದಿ ಅನಕೊಂಡ ವಶಕ್ಕೆ, ಆರೋಪಿ ಬಂಧನ

ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

Road Accident

ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ (Road Accident) ನಡೆದಿದೆ. ವಿಕಾಸ್ ಆಚಾರ್ಯ (22) ಅಪಘಾತದಲ್ಲಿ ಮೃತಪಟ್ಟ ಯುವಕ.

ಕೋಟ ಮಣೂರು ಸುರೇಶ್ ಆಚಾರ್ಯ ಅವರ ಪುತ್ರ ವಿಕಾಸ್ ಸೋಮವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಕಡೆ ಬರುತ್ತಿದ್ದ. ಕೋಟ ಗುಜರಿ ಅಂಗಡಿ ಸಮೀಪ ಬರುವಾಗ ವಿಕಾಸ್‌ಗೆ ಬೈಕ್‌ನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಪಲ್ಟಿಯಾಗಿ ಗಂಭೀರ ಗಾಯಗೊಂಡ ವಿಕಾಸ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗ ರವಾನಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Rain News : ರಾಜ್ಯದ ಹಲವೆಡೆ ಸುರಿದ ಮಳೆಯಿಂದಾಗಿ ವಾತಾವರಣವು ತಂಪಾಗಿತ್ತು. ಇದೀಗ ಮತ್ತೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದ್ದು, ಬಿಸಿ ಗಾಳಿಗೆ ಜನರು ತತ್ತರಿಸಿ ಹೋಗಲಿದ್ದಾರೆ. ಮಳೆ ಮುನ್ಸೂಚನೆ ನಡುವೆಯೂ (Karnataka Weather Forecast) ಬಿಸಿ ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಲವೆಡೆ ಗುಡುಗು, ಸಿಡಿಲಿನ ಎಚ್ಚರಿಕೆಯನ್ನು ನೀಡಲಾಗಿದೆ. ಇದರ ಜತೆಗೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ರಾಮನಗರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ ಹಾಗೂ ಉತ್ತರ ಕನ್ನಡ, ಉಡುಪಿಯಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Health Tips: ಒಂದೇ ಕಡೆ ಕೂತಿರುತ್ತೀರಾ? ಸಮಸ್ಯೆಗಳು ಒಂದೆರಡಲ್ಲ!

ಬೆಂಗಳೂರಿಗಿಲ್ಲ ಮಳೆ ಭಾಗ್ಯ

ರಾಜಧಾನಿ ಬೆಂಗಳೂರಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇದ್ರೆ, ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಒಳನಾಡಿಗೆ ಬಿಸಿ ಮುಟ್ಟಿಸಲಿದೆ ಗಾಳಿ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆ ವಾತಾವರಣ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ook between H and L
ಪ್ರಮುಖ ಸುದ್ದಿ20 mins ago

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Lok Sabha Election-2024
ರಾಜಕೀಯ21 mins ago

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

Neha Murder Case How can a mobile photo be leaked when accused Fayaz is in jail
ಹುಬ್ಬಳ್ಳಿ47 mins ago

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Money Guide
ಮನಿ-ಗೈಡ್56 mins ago

Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Lok Sabha Election 2024
ಕರ್ನಾಟಕ1 hour ago

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Virat Kohli
ಪ್ರಮುಖ ಸುದ್ದಿ1 hour ago

Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

The Legend of Hanuman
ಸಿನಿಮಾ1 hour ago

The Legend of Hanuman: ಹನುಮ ಜಯಂತಿಯಂದೇ ‘ದಿ ಲೆಜೆಂಡ್ ಆಫ್ ಹನುಮಾನ್’ ಸೀಸನ್ 4 ಘೋಷಣೆ

HD Kumaraswamy challenges Congress to give Cauvery guarantee to Mandya
Lok Sabha Election 20241 hour ago

HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Fantasy Gaming
ಕ್ರೀಡೆ2 hours ago

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Shivasharane Akkamahadevi Jayanti Celebration and Shivanubhava programme at Soraba
ಶಿವಮೊಗ್ಗ2 hours ago

Shivamogga News: ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆ, ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ: ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌