Site icon Vistara News

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Kalaburagi Lok Sabha Constituency Congress candidate Radhakrishna Doddamani election campaign

ಯಾದಗಿರಿ: ಈ ಬಾರಿಯ ಚುನಾವಣೆಯಲ್ಲಿ (Lok Sabha Election 2024) ತಮಗೆ ಮತ ನೀಡಿ ಆಶೀರ್ವದಿಸಿ, ನಿಮ್ಮೆಲ್ಲರ ಧ್ವನಿಯಾಗಿ, ಅಭಿವೃದ್ದಿ ಪರ ಕೆಲಸ ಮಾಡುತ್ತೇನೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.

ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಯರಗೋಳ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

ಈ ಚುನಾವಣೆಯು ಸತ್ಯ ಮತ್ತು ಸುಳ್ಳಿನ ನಡುವೆ ನಡೆಯುತ್ತಿದೆ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಅಭಿವೃದ್ದಿ ಎಂಬುವುದು ಮರಿಚಿಕೆಯಾಗಿದೆ, ಕೇಂದ್ರ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮನೋಭಾವನೆ ತೋರಿದೆ, ಕ್ಷೇತ್ರದ ಅಭಿವೃದ್ದಿಗೆ ನಾನು ಹತ್ತಾರು ಹೊಸ ಯೋಜನೆಗಳ ಕಲ್ಪನೆಗಳನ್ನು ಇಟ್ಟುಕೊಂಡು ಚುನಾವಣೆ ಕಣಕ್ಕೀಳಿದಿದ್ದೇನೆ, ಕಲಬುರಗಿ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ, ನನಗೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಶರಣಪ್ಪ ಮಾನೇಗಾರ ಮಾತನಾಡಿ, ರಾಜ್ಯದಲ್ಲಿ ಈ ಹಿಂದೆ 5 ವರ್ಷ ಅಧಿಕಾರ ನಡೆಸಿದ ಬಿ.ಜೆ.ಪಿ. ಸರ್ಕಾರದ ದುರಾಡಳಿತದಿಂದ ಬೇಸತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಚುನಾವಣೆ ಸಮಯದಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದಾರೆ, ನಾವು ಅಭಿವೃದ್ದಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಆದರೆ ಬಿಜೆಪಿಯವರು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ ಮತದಾರರು ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಶಾಸಕ ಲಕ್ಷ್ಮಿಕಾಂತರಾವ್, ಗುರುಮಿಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಚಪೇಟ್ಲಾ, ಪಕ್ಷದ ಮುಖಂಡರಾದ ಸಿದ್ದಲಿಂಗರೆಡ್ಡಿ ಉಳ್ಳೆಸುಗೂರ, ಶ್ರೇಣಿಕ್‌ಕುಮಾರ ದೋಕಾ, ಚಂದ್ರಶೇಖರ ವಾರದ, ಸೂರ್ಯಕಾಂತ ಅಲ್ಲಿಪೂರ, ರಾಜುಗೌಡ ಅರಕೇರಾ (ಬಿ), ಬಸವರಾಜ ಬಾಚವಾರ, ದೇವಿಂದ್ರಪ್ಪ ಅರಕೇರಾ, ಅಯ್ಯಣ್ಣ ಠಾಣಗುಂದಿ, ಚಂದ್ರಕಾಂತ ಕವಲ್ದಾರ ಹತ್ತಿಕುಣಿ, ಭೀಮರಾಯ ಠಾಣಗುಂದಿ, ಕಿಷನ್ ರಾಠೋಡ್, ಬಸವರಾಜಪ್ಪ ಬಂಡಿ, ಸಾಹೇಬಗೌಡ ಗಾಂಪಲ್ಲಿ, ಶರಣಪ್ಪ ಕೋಲ್ಕರ್, ಯಂಕಾರಡ್ಡಿ ಮಾನೇಗಾರ, ಮಲ್ಲು ಕುಂಬಾರಳ್ಳಿ. ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.

Exit mobile version