ಯಾದಗಿರಿ: ಕಲಬುರಗಿ ಲೋಕಸಭಾ ಕ್ಷೇತ್ರದ (Lok Sabha Election 2024) ಸಮಗ್ರ ಅಭಿವೃದ್ಧಿಯ ಕನಸು ಕಟ್ಟಿಕೊಂಡ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಮನವಿ ಮಾಡಿದರು.
ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು
ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಜನರಿಗೆ ನೀಡಿದ್ದ ಪಂಚ ಗ್ಯಾರಂಟಿಗಳ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ನಾಲ್ಕೈದು ತಿಂಗಳಲ್ಲಿ ಈಡೇರಿಸಿ, ಜನರು ಸ್ವಾಭಿಮಾನದ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದೆ. ಅದರಂತೆ ನಮ್ಮ ಮೇಲೆ ಜನರಿಟ್ಟಿದ್ದ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರ, ದಲಿತರ, ಹಿಂದುಳಿದವರ ಉದ್ಧಾರಕ್ಕಾಗಿ 25 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಬಳಿಕ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಮಾತನಾಡಿದರು.
ಇದೇ ವೇಳೆ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ಕಳೆದ ಐದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಲಬುರಗಿ ಲೋಕಸಭಾ ಕ್ಷೇತ್ರದ ಪ್ರಗತಿಗಾಗಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಶರಣಿಕ ಕುಮಾರ ದೋಕಾ, ಕಾಂಗ್ರೆಸ್ ಮುಖಂಡ ಮರಿಗೌಡ ಹುಲಿಕಲ್, ಕಾಂಗ್ರೆಸ್ ಹಿರಿಯ ಮುಖಂಡರಾದ ಸಾಯಿಬಣ್ಣ ಬೊರಬಂಡ, ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿರಂಜನರೆಡ್ಡಿ ಶೆಟ್ಟಿಹಳ್ಳಿ, ಎಸಿ ಕಾಡ್ಲೂರು, ವಿಶ್ವನಾಥ ನೀಲಹಳ್ಳಿ, ಚಿದಾನಂದಪ್ಪ ಕಾಳೆಬೆಳಗುಂದಿ, ಬಸ್ಸುಗೌಡ ಬಿಳ್ಹಾರ, ಮಹಿಪಾಲರೆಡ್ಡಿ ದುಪ್ಪಲ್ಲಿ, ವಿಜಯ ಕಂದಳ್ಳಿ, ಸಾಬಣ್ಣ ಸೈದಾಪುರ, ಗ್ರಾ.ಪಂ ಸದಸ್ಯ ಶರಣಪ್ಪ ಬೈರಂಕೊಂಡಿ, ಆಂಜನೇಯ ರಾಂಪುರ, ಅನಿಲ್ ಭಾಸ್ಕರ್, ದೇವಪ್ಪ ಗುತ್ತೇದಾರ ರಾಚನಳ್ಳಿ, ಪುಂಡಲಿಕ್ ಗೊಂದಡಗಿ, ವೆಂಕಟೇಶ ಕೂಡಲೂರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.