Yadgiri News: ಯಾದಗಿರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪಗೌಡ ಚಾಲನೆ Vistara News

ಯಾದಗಿರಿ

Yadgiri News: ಯಾದಗಿರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪಗೌಡ ಚಾಲನೆ

Yadgiri News: ಯಾದಗಿರಿ ನಗರದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಸೋಮವಾರ “ಜನತಾ ದರ್ಶನ” ಕಾರ್ಯಕ್ರಮ ಜರುಗಿತು.

VISTARANEWS.COM


on

Minister Sharanbasappa Gowda drives for Janata Darshan program in Yadagiri
ಯಾದಗಿರಿ ನಗರದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಸೋಮವಾರ “ಜನತಾ ದರ್ಶನ” ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಸರ್ಕಾರದ (Government) ವಿವಿಧ ಯೋಜನೆಯಡಿಯ ಸೌಲಭ್ಯ (Facility) ಹಾಗೂ ನಾಗರಿಕರ ಕುಂದುಕೊರತೆ, ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಸೋಮವಾರ “ಜನತಾ ದರ್ಶನ” ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯೊಂದಿಗೆ, ಮುಖ್ಯಮಂತ್ರಿಗಳ ಮುತುವರ್ಜಿಯಿಂದ ರಾಜ್ಯಾದ್ಯಂತ ಈ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಸೌಲಭ್ಯಗಳು ಕಡುಬಡವರು, ಸಮಾಜದ ಪ್ರತಿ ವ್ಯಕ್ತಿಗೆ ದೊರಕಿಸಲು ಹೆಚ್ಚಿನ ಆಸಕ್ತಿಯೊಂದಿಗೆ ಜನತಾ ದರ್ಶನ ಹಮ್ಮಿಕೊಂಡಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಿದಾಗ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಿ ಪರಿಹರಿಸಿದ್ದಲ್ಲಿ ಸರ್ಕಾರಕ್ಕೂ ಹಾಗೂ ಜನಪ್ರತಿನಿಧಿಗಳಿಗೂ ಒಳ್ಳೆಯ ಹೆಸರು ಬರಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಜನತಾ ದರ್ಶನ ಮೂಲಕ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹರಿಸಲು ಸರ್ಕಾರ ಇಂತಹ ದಿಟ್ಟಹೆಜ್ಜೆಯನ್ನು ಇಟ್ಟಿದೆ ಈ ಜಿಲ್ಲೆಯಲ್ಲಿ ಶೇ. 50 ರಷ್ಟು ಅಧಿಕಾರಿಗಳ ಕೊರತೆ ಮಧ್ಯೆಯೂ ಜನರಿಗೆ ಶಿಕ್ಷಣ, ಆರೋಗ್ಯ, ಸ್ವಚ್ಚತೆ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಗಳು ಹಾಗೂ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಕುಂದುಕೊರತೆ ಅರ್ಜಿಗಳು ಬಂದ ತಕ್ಷಣ ಸ್ಪಂದಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ತಿಂಗಳು 15 ದಿನಗಳಿಗೊಮ್ಮೆ ತಾಲೂಕಾವಾರು ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ಸಲ್ಲಿಕೆಯಾಗಿರುವ ಅರ್ಜಿಗಳಿಗೆ ತಕ್ಷಣ ಅಧಿಕಾರಿಗಳು ಪರಿಹಾರ ನೀಡಬೇಕು. ಇದಕ್ಕೆ ತಪ್ಪಿದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು, ಕೃಷಿ, ತೋಟಗಾರಿಕೆ, ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಬೇಕು, ಆರೋಗ್ಯ ಕ್ಷೇತ್ರ ಸುಧಾರಿಸಬೇಕು, ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಜತೆಗೆ ಉತ್ತಮ ಫಲಿತಾಂಶಕ್ಕೆ ವಿಶೇಷ ಗಮನ ನೀಡುವಂತೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Asian Games 2023: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್​ ತಂಡ; ಲಂಕಾ ವಿರುದ್ಧ ರೋಚಕ ಜಯ

ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ, ಗುರುಮಠಕಲ್ ಶಾಸಕ ಶರಣಗೌಡ ಕಂದುಕೂರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಸ್ವಾಗತಿಸಿದರು, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ ನಿರೂಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

Yadgiri News: ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ರ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು.

VISTARANEWS.COM


on

Vistara News Best Teacher Award -2023 programme inauguration by Yadgiri DC Sushila B. at Yadgiri
ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಉದ್ಘಾಟಿಸಿದರು.
Koo

ಯಾದಗಿರಿ: ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 (Vistara News Best Teacher Award -2023) ರ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆಯಿತು.

ಶಶಿ ಸೂಪರ್ ಬಜಾರ್, ಎನ್.ವಿ.ಎಂ ರೆಸಿಡೆನ್ಸಿ, ಪಾಟೀಲ್‌ ಡಿಜಿಟಲ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕು ರೂಪಿಸುವ ಹೆಮ್ಮೆಯ ಶಿಕ್ಷಕರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ನೀಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಸಾಧಕ ಶಿಕ್ಷಕರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ನೀಡುತ್ತಿರುವುದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿದರು.

ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಮುಖ್ಯವಾಗಿದೆ‌. ಮಕ್ಕಳು ಶಾಲೆ ಬಿಟ್ಟರೆ ಶಿಕ್ಷಕರು ಮಕ್ಕಳ ಕಾಳಜಿ ವಹಿಸಿ ಅಂತಹ ಮಕ್ಕಳ ಮನೆಗೆ ತೆರಳಿ ಮುಖ್ಯವಾಹಿನಿಗೆ ತರುವ ಕಾರ್ಯ ನಿರಂತರವಾಗಿ ಮಾಡುವ ಜವಾಬ್ದಾರಿ ಹೊಂದಬೇಕು. ಯಾದಗಿರಿ ಜಿಲ್ಲೆಯು ಶೈಕ್ಷಣಿಕ ಮಟ್ಟದಲ್ಲಿ ಹಿಂದುಳಿದಿದ್ದು, ಶಿಕ್ಷಣ ಮಟ್ಟ ಅಭಿವೃದ್ಧಿ ಪಡಿಸಲು ಶಿಕ್ಷಕರು ಹೆಚ್ಚು ಶ್ರಮವಹಿಸಿ ಶಿಕ್ಷಣ ನೀಡಬೇಕಿದೆ ಎಂದ ಅವರು, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರು ಶ್ರಮವಹಿಸಿ ಈ ಬಾರಿ ಉತ್ತಮ ಫಲಿತಾಂಶ ಬರುವ ಕಾರ್ಯ ಮಾಡಬೇಕು ಎಂದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ ಮಾತನಾಡಿ, ವಿಸ್ತಾರ ನ್ಯೂಸ್ ಹಲವು ವಿಭಿನ್ನ ಕಾರ್ಯಕ್ರಮ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರದ ಕಾರ್ಯಕ್ರಮ ಮೂಲಕ ಎಲ್ಲಾ ವರ್ಗದವರ ಕಾಳಜಿ ತೊರುತ್ತಿದೆ.

ಎಲೆಮರೆ ಕಾಯಿಯಂತೆ ಜ್ಞಾನ ದಾಸೋಹ ಮಾಡುತ್ತಿರುವ ಶಿಕ್ಷಕರನ್ನು ಗುರುತಿಸಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಪ್ರದಾನ ಮಾಡುವ ಕಾರ್ಯ ಉತ್ತಮವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಡಾ‌.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ವಿಸ್ತಾರ ನ್ಯೂಸ್ ನಿರೀಕ್ಷೆಗೂ ಮೀರಿ ಜನರಿಗೆ ತಲುಪುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Weight Loss Tips: ದೇಹ ತೂಕ ಇಳಿಸಲು ಸಹಕಾರಿ ಈ ಈರುಳ್ಳಿ ಹೂವು!

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಮಲ್ಲಿಕಾರ್ಜುನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಗೆ ಆಯ್ಕೆಯಾದ ಕಂದಕೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮಧುಮತಿ ಎಚ್.ಸಿಂಗೆ, ಬಿಳ್ಹಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೊಟ್ರಬಸಪ್ಪ ಕಡ್ಲಿ, ತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೀರಣ್ಣಗೌಡ ಬಿ. ಪಾಟೀಲ, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜ್ಯೋತಿ ಎಚ್.ಪಾಟೀಲ್, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುರೇಖಾ ಜಿ.ಶೆಕ್ ಸಿಂದೆ, ರಾಮಸಮುದ್ರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಿಂಗಣ್ಣ ಟಿ.ವಡಗೇರಿ, ಕಲಬುರಗಿಯ ದಿಶಾ ಪಿಯು ಕಾಲೇಜಿನ ಉಪನ್ಯಾಸಕರಾದ ಸಂತೋಷ ಜಾಕಾಪುರೆ, ಅಂಬರೀಶ್ ಜಿಡಗಿ, ಕಲಬುರಗಿಯ ಸರ್ವಜ್ಞ ಪಿಯು ಕಾಲೇಜುನ ಉಪನ್ಯಾಸಕ ಅಶೋಕ್ ಎಚ್.ಕಾಬಾ, ಯಾದಗಿರಿಯ ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಣುಕಾ ಎಂ.ಹೊಸಮನಿ ಅವರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ, ಪ್ರಾಥಮಿಕ ಶಿಕ್ಷಕರ ಸಂಘ ಜಿಲ್ಲಾ ಘಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತನಾರತಿ ಸಾಂಸ್ಕೃತಿಕ ಪ್ರತಿಷ್ಠಾನ, ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜಿಲ್ಲಾ ಘಟಕ ಇವರ ಸಹಕಾರದಲ್ಲಿ ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂತು.

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ಬಳ್ಳಾರಿ ಬ್ಯೂರೋ ಮುಖ್ಯಸ್ಥ ಶಶಿಧರ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯಡಿಯೂರ ಶ್ರೀ ಸಂಗೀತ ಪಾಠ ಶಾಲೆಯ ಸಂಗೀತ ಕಲಾವಿದರಾದ ಶರಣಕುಮಾರ ವಠಾರ, ನಾಗರಾಜ್ ಶಹಾಪುರ, ಮಹೇಶ್ ಶಿರವಾಳ, ಶರಣು ಕೊಲಕುಂದಾ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು . ಸುರಪುರದ ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ಸಂಸ್ಥೆಯ ತರಬೇತಿದಾರ ಅನೀಲ್‌ ಕುಮಾರ್ ಕಟ್ಟಿಮನಿ ಅವರ ಕಲಾ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಗುರುನಾಥ, ರಾಜನಕೊಳ್ಳೂರು ಪ್ರಥಮ ದರ್ಜೆ ಗುತ್ತಿಗೆದಾರ ಬಿ‌.ಎಂ.ಅಳ್ಳಿಕೋಟೆ, ಶಶಿ ಸೂಪರ್‌ ಬಜಾರ್‌ನ ಮಾಲೀಕ ಮಲ್ಲಿಕಾರ್ಜುನ ಶಿರಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ವಿಸ್ತಾರ ನ್ಯೂಸ್ ಜಿಲ್ಲಾ ವರದಿಗಾರ ನಾಗಪ್ಪ ಮಾಲಿಪಾಟೀಲ, ರಾಜುಕುಂಬಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಮರಯ್ಯ ಜಾಲಿಬೆಂಚಿ ನಿರೂಪಿಸಿ, ವಂದಿಸಿದರು.

Continue Reading

ಕರ್ನಾಟಕ

karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ (karnataka Weather Forecast) ಸಿಂಚನವಾದರೆ, ಕರಾವಳಿಯಲ್ಲಿ ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ಮುಂದಿನ 24 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Acid attack: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಆ್ಯಸಿಡ್‌ ಎರಚಿದ ದುರುಳ

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇನ್ನು ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದಂದು ಬಿಸಿಲಿನಿಂದ ಕೂಡಿರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಸೋಮವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕೋಲಾರದ ರಾಯಲ್ಪಾಡಲ್ಲಿ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 17.0 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ಮಳೆಯಾಟ; ಇನ್ನೊಂದು ವಾರ ಮೋಡ ಕವಿದ ವಾತಾವರಣ

Rain News : ದಕ್ಷಿಣ ಒಳನಾಡು, ಮಲೆನಾಡಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಟಕ್ಕೆ ಬ್ರೇಕ್‌ (Karnataka Weather Forecast) ಬಿದ್ದಿದೆ. ಎಲ್ಲೆಲ್ಲಿದೆ ಮಳೆ ಅಲರ್ಟ್‌?

VISTARANEWS.COM


on

By

Rain in south interior and malnad Cloudy weather for another week
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಘಳಿಗೆಗೊಂದು ವಾತಾವರಣ (Karnataka weather Forecast) ಇರಲಿದೆ. ಒಮ್ಮೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಸಮಯ ಸಣ್ಣ ಮಳೆಯೊಂದಿಗೆ ಭಾರಿ ಮಳೆಯಾಗುವ (rain News) ಸಾಧ್ಯತೆ ಇದೆ..

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.

ಅಲ್ಲಲ್ಲಿ ಮಳೆ

ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ಹಾವೇರಿ, ವಿಜಯಪುರ, ದಾವಣಗೆರೆ, ಧಾರವಾಡ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ನಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇದನ್ನೂ ಓದಿ: Mens Winter Fashion: ಚಳಿಗಾಲದ ಮೆನ್ಸ್ ಲೇಯರ್‌ ಲುಕ್‌ಗೆ 3 ಮಿಕ್ಸ್‌ ಮ್ಯಾಚ್‌ ಸ್ಟೈಲಿಂಗ್‌ ರೂಲ್ಸ್

ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜತೆಗೆ ಚಾಮರಾಜನಗರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೀದರ್ ಮತ್ತು ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
lidkar ambassador dolly dhananjay Officially
South Cinema8 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ13 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ30 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ43 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್43 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ58 mins ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್1 hour ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

pranab mukherjee and rahul gandhi
ದೇಶ1 hour ago

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ13 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ16 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌