Site icon Vistara News

Yadgiri News: ಯಾದಗಿರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪಗೌಡ ಚಾಲನೆ

Minister Sharanbasappa Gowda drives for Janata Darshan program in Yadagiri

ಯಾದಗಿರಿ: ಸರ್ಕಾರದ (Government) ವಿವಿಧ ಯೋಜನೆಯಡಿಯ ಸೌಲಭ್ಯ (Facility) ಹಾಗೂ ನಾಗರಿಕರ ಕುಂದುಕೊರತೆ, ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಸೋಮವಾರ “ಜನತಾ ದರ್ಶನ” ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯೊಂದಿಗೆ, ಮುಖ್ಯಮಂತ್ರಿಗಳ ಮುತುವರ್ಜಿಯಿಂದ ರಾಜ್ಯಾದ್ಯಂತ ಈ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಸೌಲಭ್ಯಗಳು ಕಡುಬಡವರು, ಸಮಾಜದ ಪ್ರತಿ ವ್ಯಕ್ತಿಗೆ ದೊರಕಿಸಲು ಹೆಚ್ಚಿನ ಆಸಕ್ತಿಯೊಂದಿಗೆ ಜನತಾ ದರ್ಶನ ಹಮ್ಮಿಕೊಂಡಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಿದಾಗ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಿ ಪರಿಹರಿಸಿದ್ದಲ್ಲಿ ಸರ್ಕಾರಕ್ಕೂ ಹಾಗೂ ಜನಪ್ರತಿನಿಧಿಗಳಿಗೂ ಒಳ್ಳೆಯ ಹೆಸರು ಬರಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಜನತಾ ದರ್ಶನ ಮೂಲಕ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹರಿಸಲು ಸರ್ಕಾರ ಇಂತಹ ದಿಟ್ಟಹೆಜ್ಜೆಯನ್ನು ಇಟ್ಟಿದೆ ಈ ಜಿಲ್ಲೆಯಲ್ಲಿ ಶೇ. 50 ರಷ್ಟು ಅಧಿಕಾರಿಗಳ ಕೊರತೆ ಮಧ್ಯೆಯೂ ಜನರಿಗೆ ಶಿಕ್ಷಣ, ಆರೋಗ್ಯ, ಸ್ವಚ್ಚತೆ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಗಳು ಹಾಗೂ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಕುಂದುಕೊರತೆ ಅರ್ಜಿಗಳು ಬಂದ ತಕ್ಷಣ ಸ್ಪಂದಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ತಿಂಗಳು 15 ದಿನಗಳಿಗೊಮ್ಮೆ ತಾಲೂಕಾವಾರು ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ಸಲ್ಲಿಕೆಯಾಗಿರುವ ಅರ್ಜಿಗಳಿಗೆ ತಕ್ಷಣ ಅಧಿಕಾರಿಗಳು ಪರಿಹಾರ ನೀಡಬೇಕು. ಇದಕ್ಕೆ ತಪ್ಪಿದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು, ಕೃಷಿ, ತೋಟಗಾರಿಕೆ, ಗ್ಯಾರಂಟಿ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಬೇಕು, ಆರೋಗ್ಯ ಕ್ಷೇತ್ರ ಸುಧಾರಿಸಬೇಕು, ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಜತೆಗೆ ಉತ್ತಮ ಫಲಿತಾಂಶಕ್ಕೆ ವಿಶೇಷ ಗಮನ ನೀಡುವಂತೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Asian Games 2023: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್​ ತಂಡ; ಲಂಕಾ ವಿರುದ್ಧ ರೋಚಕ ಜಯ

ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ, ಗುರುಮಠಕಲ್ ಶಾಸಕ ಶರಣಗೌಡ ಕಂದುಕೂರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಸ್ವಾಗತಿಸಿದರು, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ ನಿರೂಪಿಸಿದರು.

Exit mobile version