ಯಾದಗಿರಿ: ಗ್ರಾಮೀಣ ಭಾಗದ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಾರ್ವಜನಿಕ ಜಿಲ್ಲಾ ಆಸ್ಪತ್ರೆ ಕಾರ್ಯಾರಂಭ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಆರಂಭವಾಗುವುದರಿಂದ ಹೆಚ್ಚಿನ ವೈದ್ಯರು ನೇಮಕಗೊಳ್ಳುತ್ತಾರೆ. ಇದರಿಂದ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.
ತಾಲೂಕಿನ ಮುದ್ನಾಳ ಗ್ರಾಮದಲ್ಲಿ 3.50 ಕೋಟಿ ರೂಪಾಯಿ ರೂಪಾಯಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಹಾಗೂ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ವಡಗೇರಾ ತಾಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲೂ ಕೂಡ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮತಕ್ಷೇತ್ರದ ಗಡಿ ಭಾಗದ ಹಳ್ಳಿಗಳ ಜನರಿಗೂ ಸೂಕ್ತ ವೈದ್ಯಕೀಯ ಸೇವೆ ಸಿಗಲಿದೆ ಎಂದರು.
ಬಳಿಕ ಇದೇ ಗ್ರಾಮದಲ್ಲಿ ಪ್ರೌಢಶಾಲೆ 13 ಕೊಠಡಿಗಳ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದರು. ಕೆಕೆಆರ್‌ಡಿಬಿ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ಕೊಠಡಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಗೆ 10 ಹೆಚ್ಚುವರಿ ಕೊಠಡಿಗಳು ನಿರ್ಮಾಣ ಮಾಡಲಾಗಿದೆ.
ಇದನ್ನೂ ಓದಿ | ಡಿ.12ಕ್ಕೆ ಪಂಚಮಸಾಲಿ ನಡಿಗೆ ವಿಧಾನಸೌಧದ ಒಳಗೆ; 25 ಲಕ್ಷ ಮಂದಿಯೊಂದಿಗೆ ಪ್ರತಿಭಟನೆ: ಜಯಮೃತ್ಯುಂಜಯ ಶ್ರೀ