ಕರ್ನಾಟಕ ಎಲೆಕ್ಷನ್
Modi In Karnataka | ಅನ್ಯ ಸರ್ಕಾರಗಳಿಗೆ ವೋಟ್ ಬ್ಯಾಂಕ್ ಚಿಂತೆ; ನಮಗೆ ಅಭಿವೃದ್ಧಿಯೇ ಆದ್ಯತೆ: ಪ್ರಧಾನಿ ಮೋದಿ
ಡಬಲ್ ಇಂಜಿನ್ ಸರ್ಕಾರದ ಕಾರಣಕ್ಕೆ ಕೇಂದ್ರದ ಯೋಜನೆಗಳು ರಾಜ್ಯದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಯಾಗುತ್ತಿವೆ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು.
ಯಾದಗಿರಿ: ವಿವಿಧ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿ ಕೇವಲ ಜಾತಿ ಮತದ ಆಧಾರದಲ್ಲಿ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದವು. 2014ರಿಂದ ಆಡಳಿತದಲ್ಲಿರುವ ನಮ್ಮ ಸರಕಾರವು ಕೇವಲ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಯೋಜನೆಗೆ ಚಾಲನೆ ಸೇರಿ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದು.
ಕನ್ನಡದಲ್ಲೆ ಭಾಷಣ ಆರಂಭಿಸಿದ ಮೋದಿ, ʼಕರ್ನಾಟಕದ ಎಲ್ಲ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು” ಎಂದರು. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಜನರೇ ಕಾಣುತ್ತಿದ್ದಾರೆ. ಹೆಲಿಪ್ಯಾಡ್‌ನಲ್ಲೂ, ಕಾರ್ಯಕ್ರಮದಲ್ಲಿ, ಪೆಂಡಾಲ್ ಹೊರಗೂ ಬಿಸಿಲಿನಲ್ಲಿ ಜನರು ನಿಂತಿದ್ದಾರೆ. ನೀವು ನೀಡುತ್ತಿರುವ ಈ ಪ್ರೀತಿ, ಆಶೀರ್ವಾದವೇ ನಮ್ಮೆಲ್ಲರ ಬಹುದೊಡ್ಡ ಶಕ್ತಿ ಎಂದು ಪ್ರಶಂಸಿಸಿದರು.
ಯಾದಗಿರಿಯು ಸಮೃದ್ಧ ಇತಿಹಾಸವನ್ನು ಒಳಗೊಂಡಿದೆ. ರಟ್ಟಿಹಳ್ಳಿ ಕೋಟೆಯು ನಮ್ಮ ಪೂರ್ವಜರ ಸಾಮರ್ಥ್ಯದ ಪ್ರತೀಕ. ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ನಂಟು ಹೊಂದಿದ ಅನೇಕ ಸ್ಥಳಗಳು ಈ ಕ್ಷೇತ್ರದಲ್ಲಿವೆ. ಮಹಾನ್ ರಾಜಾ ವೆಂಕಟಪ್ಪ ನಾಯಕ ತಮ್ಮ ಉತ್ತಮ ಆಡಳಿತದಿಂದಾಗಿ ಈ ಪ್ರದೇಶ ವಿಖ್ಯಾತವಾಗಿತ್ತು. ಈ ಪರಂಪರೆಯ ಮೇಲೆ ನಮಗೆ ಗೌರವವಿದೆ.
ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ ಹಾಗೂ ಆಧುನೀಕರಣದಿಂದ ಸುತ್ತಲಿನ ರೈತರಿಗೆ ನೇರವಾಗಿ ಲಾಭವಾಗಿತ್ತದೆ. ಯಾದಗಿರಿ ಬಹುಗ್ರಾಮ ಕುಡಿಯುವ ನೀರಿನಿಂದ ಶುದ್ಧ ಕುಡಿಯುವ ನೀರು ಸಿಗುತ್ತದೆ. ಸೂರತ್-ಚೆನ್ನೈ ಎಕನಾಮಿಕ್ ಕಾರಿಡಾರ್ ಭಾಗದ ಕಾರ್ಯ ಆರಂಭವಾಗಿದೆ. ಇದರಿಂದಾಗಿ ಯಾದಗಿರಿ-ರಾಯಚೂರು ಹಾಗೂ ಕಲಬುರಗಿ ಸಹಿತ ಈ ಕ್ಷೇತ್ರದಲ್ಲಿ ಜನರ ಜೀವನ ಸುಧಾರಿಸುತ್ತದೆ ಮತ್ತು ಉದ್ಯಮಗಳಿಗೂ ಶಕ್ತಿ ಲಭಿಸುತ್ತದೆ. ಅಭಿವೃದ್ಧಿಯ ಈ ಯೋಜನೆಗಳಿಗೆ ಯಾದಗಿರಿಯ ಹಾಗೂ ಕರ್ನಾಟಕದ ಜನರಿಗೆ ಅಭಿನಂದನೆಗಳು.
ಬೊಮ್ಮಾಯಿ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ವೇಗವಾಗಿ ಕೆಲಸ ಆಗುತ್ತಿರುವುದು ಪ್ರಶಂಸನೀಯ. ಭಾರತದ ಸ್ವಾತಂತ್ರ್ಯದ 75 ವರ್ಷ ಪೂರೈಸಿದೆ. ಮುಂದಿನ 25 ವರ್ಷಗಳ ಹೊಸ ಸಂಕಲ್ಪವನ್ನು ಸಿದ್ಧಪಡಿಸಿಕೊಳ್ಳಲು ಮುಂದೆ ನಡೆಯುತ್ತಿದೆ. ಈ ಅಮೃತ ಕಾಲವು ಪ್ರತಿ ರಾಜ್ಯಕ್ಕೂ ಮಹತ್ವದ್ದು. ಈ ಅವಧಿಯಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯವನ್ನು ನಿರ್ಮಾಣ ಮಾಡಬೇಕು. ದೇಶದ ಪ್ರತಿ ನಾಗರಿಕ, ರಾಜ್ಯವೂ ಈ ಅಭಿಯಾನದಲ್ಲಿ ಕೈಜೋಡಿಸಿದರೆ ಮಾತ್ರ ಇದು ಸಾಧ್ಯ. ಹೊಲದಲ್ಲಿ ದುಡಿಯುವ ರೈತನಿಂದ ಉದ್ಯಮಿಯವರೆಗೆ ಎಲ್ಲರ ಜೀವನವೂ ಸುಧಾರಣೆಯಾದರೆ ಮಾತ್ರ ಸಾಧ್ಯ ಎಂದರು.
ಕೆಟ್ಟ ನೀತಿಗಳಿಂದ ಕಲಿತ ಪಾಠ
ಹಿಂದಿನ ದಶಕಗಳ ಕೆಟ್ಟ ಅನುಭವಗಳು, ತಪ್ಪು ನೀತಿಗಳಿಂದ ಕಲಿಯಬೇಕು. ಅವುಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು. ಉತ್ತರ ಕರ್ನಾಟಕದ ಸಾಮರ್ಥ್ಯ ಬೇರೆ ಯಾರಿಗಿಂತಲೂ ಕಡಿಮೆ ಇಲ್ಲ. ಆದರೂ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದೆ ಉಳಿದಿದೆ. ಹಿಂದನ ಸರ್ಕಾರಗಳು ಯಾದಗಿರಿ ಸಹಿತ ಅನೇಕ ಜಿಲ್ಲೆಗಳನ್ನು ಹಿಂದುಳಿದವು ಎಂದು ಘೋಷಿಸಿ ಕೈತೊಳೆದುಕೊಂಡಿದ್ದವು. ಈ ಸ್ಥಿತಿಗೆ ಕಾರಣವೇನು? ಅದನ್ನು ಪರಿಹರಿಸುವುದು ಹೇಗೆ? ಎನ್ನುವುದನ್ನು ಈ ಹಿಂದಿನ ಸರ್ಕಾರಗಳು ಆಲೋಚಿಸಲಿಲ್ಲ. ಕ್ರಮವನ್ನೂ ಕೈಗೊಳ್ಳಲಿಲ್ಲ. ರಸ್ತೆ, ವಿದ್ಯುತ್, ನೀರಿನ ವ್ಯವಸ್ಥೆ ಸರಿಪಡಿಸುವ ಬದಲಿಗೆ ಆಗಿನ ಪಕ್ಷಗಳ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಒತ್ತು ನೀಡಿದವು. ಜಾತಿ, ಧರ್ಮದ ಆಧಾರದಲ್ಲಿ ಲೆಕ್ಕ ಮಾಡಿಯೇ ಯೋಜನೆಗಳನ್ನು ರೂಪಿಸಿದವು. ಇದರ ಬಹುದೊಡ್ಡ ನಷ್ಟವು ಕರ್ನಾಟಕಕ್ಕೆ ಆಯಿತು. ಇದೆಲ್ಲದರಿಂದ ನಿಮಗೆ ನಷ್ಟವಾಯಿತು.
ನಮ್ಮ ಆದ್ಯತೆ ವೋಟ್ ಬ್ಯಾಂಕ್ ಅಲ್ಲ. ನಮ್ಮ ಆದ್ಯತೆ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ. 2014ರಲ್ಲಿ ನೀವು ನನಗೆ ಆಶೀರ್ವಾದ ಮಾಡಿದಿರಿ. ನನ್ನ ಹೆಗಲ ಮೇರೆ ಬಹುದೊಡ್ಡ ಹೊಣೆ ಹೊರಿಸಿದಿರಿ. ದೇಶದ ಯಾವುದೇ ಜಿಲ್ಲೆ ಅಭಿವೃದ್ಧಿಯಿಂದ ಹಿಂದೆ ಉಳಿದರೂ ದೇಶ ಅಭಿವೃದ್ಧಿ ಆಗುವುದಿಲ್ಲ. ಅದಕ್ಕಾಗಿಯೇ ಹಿಂದುಳಿದ ಜಿಲ್ಲೆಗಳಿಂದಲೇ ಅಭಿವೃದ್ಧಿಯನ್ನು ಕೈಗೊಂಡಿದ್ದೇವೆ. ಯಾದಗಿರಿ ಸೇರಿ ಇಂತಹ ನೂರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಸುಶಾಸನಕ್ಕೆ ಒತ್ತು ನೀಡಿದೆವು.
ಇದರಿಂದಾಗಿ ಯಾದಗಿರಿಯಲ್ಲಿ ಮಕ್ಕಳ ಶೇ. 100 ಲಸಿಕೀಕರಣ ಆಗಿದೆ. ಅಪೌಷ್ಠಿಕ ಮಕ್ಕಳ ಸಂಖ್ಯೆ ಕಡಿಮೆ ಆಗಿದೆ. ಶೇ. 100 ಗ್ರಾಮಗಳು ರಸ್ತೆ ಹೊಂದಿವೆ. ಗ್ರಾಪಂಗಳಲ್ಲಿ ಕಾಮನ್ ಸರ್ವೀಸ್ ಸೆಂಟರ್ ಇದೆ. ಶಿಕ್ಷಣ, ಆರೋಗ್ಯ. ಸಂಪರ್ಕದಲ್ಲಿ ಯಾದಗಿರಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇದು ಮೊದಲ 10 ಜಿಲ್ಲೆಗಳಲ್ಲಿ ಒಂದಾಗಿದೆ. ಇದಕ್ಕಾಗಿ ಯಾದಗಿರಿಯ ಜನಪ್ರತಿನಿಧಿಗಳು, ಜಿಲ್ಲಾ ಆಡಳಿತಕ್ಕೆ ಶುಭಾಶಯಗಳು.
ಡಬಲ್ ಇಂಜಿನ್ ಸರ್ಕಾರದ ಹೆಗ್ಗಳಿಕೆ
ಡಬಲ್ ಇಂಜಿನ್ ಸರ್ಕಾರವು ಅಭಿವೃದ್ಧಿಗೆ ಒತ್ತು ನೀಡುತ್ತಿದೆ. 2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ, ನನೆಗುದಿಗೆ ಬಿದ್ದಿದ್ದ 99 ಯೋಜನೆಗಳಿದ್ದವು. ಇದರಲ್ಲಿ ಅರ್ಧದಷ್ಟು ಯೋಜನೆಗಳನ್ನು ಪೂರೈಸಲಾಗಿದೆ. ಕರ್ನಾಟಕದಲ್ಲೂ ಅನೇಕ ಯೋಜನೆ ಜಾರಿಯಲ್ಲಿವೆ. ಡಬಲ್ ಇಂಜಿನ್ ಸರ್ಕಾರ ಹೇಗೆ ಕೆರಲಸ ಮಾಡುತ್ತಿದೆ ಎನ್ನುವುದನ್ನು ಜಲಜೀವನ ಮಿಷನ್‌ನಲ್ಲೂ ನೋಡಬಹುದು. ಈ ಯೋಜನೆ ಆರಂಭವಾದಾಗ ಕೇವಲ 3 ಕೋಟಿ ಮನೆಗಳಿಗೆ ನಲ್ಲಿಯ ಸಂಪರ್ಕವಿತ್ತು. ಈಗ 11 ಕೋಟಿ ಮನೆಗಳಿಗೆ ನಲ್ಲಿಯ ಮೂಲಕ ನೀರು ಲಭಿಸುತ್ತಿದೆ. ಕರ್ನಾಟಕದಲ್ಲಿ 35 ಲಕ್ಷ ಗ್ರಾಮೀಣ ಮನೆಗಳೂ ಇವೆ. ಮನೆಗೆ ನೀರು ಆಗಮಿಸಿದ ಕೂಡಲೆ ತಾಯಂದಿರು ಮೋದಿಯನ್ನು ಆಶೀರ್ವದಿಸುತ್ತಾರೆ. ಭಾರತದ ಜಲಜೀವನ ಮಿಷನ್ ಮೂಲಕ ಲಕ್ಷಾಂತರ ಮಕ್ಕಳ ಜೀವನವನ್ನು ನಾವು ಉಳಿಸಬಹುದು ಎಂದು ಅಧ್ಯಯನ ಹೇಳಿದೆ. ಈ ಕಾರ್ಯಕ್ಕೆ ಈಶ್ವರನೂ ಆಶೀರ್ವಾದ ನೀಡುತ್ತಾನೆ. ಕಲುಷಿತ ನೀರಿನಿಂದ ಮಕ್ಕಳಿಗೆ ಒದಗುತ್ತಿದ್ದ ಅಪಾಯದಿಂದ ಪಾರು ಮಾಡಿದೆ.
ಇದು ಡಬಲ್ ಇಂಜಿನ್ ಸರ್ಕಾರದ ಲಾಭ. ಡಬಲ್ ವೇಗದಲ್ಲಿ ಅಭಿವೃದ್ಧಿ. ಕರ್ನಾಡಕಕ್ಕೆ ಆಗುತ್ತಿರುವ ಲಾಭವನ್ನು ನೀವು ನೋಡಿದ್ದೀರ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಆರು ಸಾವಿರ ರೂ. ನೀಡಿದರೆ ಕರ್ನಾಟಕ ಸರ್ಕಾರ ನಾಲ್ಕು ಸಾವಿರ ರೂ. ಸೇರಿಸಿ 10 ಸಾವಿರ ರೂ. ನೀಡುತ್ತಿದೆ. ಇದು ಡಬಲ್ ಇಂಜಿನ್ ಸರ್ಕಾರ. ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ತಂದರೆ ಕರ್ನಾಟಕ ವಿದ್ಯಾನಿಧಿ ಯೋಜನೆ ರೂಪಿಸಿದೆ. ಕೊರೊನಾ ಹೋಗಲಾಡಿಸಲು ಕೇಂದ್ರ ಸರ್ಕಾರ ಒಂದು ಯೋಜನೆ ರೂಪಿಸಿದರೆ ಕರ್ನಾಟಕ ಇದಕ್ಕೆ ಸಹಕರಿಸುತ್ತದೆ. ನೇಕಾರರಿಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದರೆ, ಕರ್ನಾಟಕ ಸರ್ಕಾರ ಅವರ ಸಾಲ ಮನ್ನಾ ಮಾಡುತ್ತದೆ. ಇದು ಡಬಲ್ ಇಂಜಿನ್ ಸರ್ಕಾರದ ಲಾಭ ಎಂದರು.
ಸ್ವಾತಂತ್ರ್ಯದ ಇಷ್ಟು ವರ್ಷದ ನಂತರವೂ ಯಾರಾದರೂ ಹಿಂದೆ ಉಳಿದಿದ್ದರೆ ಅವರಿಗೂ ಯೋಜನೆಯನ್ನು ತಲುಪಿಸುತ್ತೇವೆ. ಇಲ್ಲಿನ ಧಾನ್ಯವು ದೇಶದ ಆಮದನ್ನು ಕಡಿಮೆ ಮಾಡಿದೆ. ಕೇಂದ್ರ ಸರ್ಕಾರವು ಶೇ.80ಹೆಚ್ಚಿನ ಧಾನ್ಯವನ್ನು ಕೇಂದ್ರ ಸರ್ಕಾರ ಖರೀದಿಸಿದೆ. ಹಿಂದಿನ ಸರ್ಕಾರಗಳು ಕೇಲವ ಕೆಲವು ನೂರಾರು ಕೋಟಿ ರೂ. ವೆಚ್ಚದಲ್ಲಿ ಖರೀದಿ ಮಾಡುತ್ತಿದ್ದರೆ ನಾವು ಸಾವಿರಾರು ಕೋಟಿ ರೂ. ಮೊತ್ತದಲ್ಲಿ ಖರೀದಿ ಮಾಡಿದ್ದೇವೆ. ಸಿರಿಧಾನ್ಯಗಳಿಗೆ ಒತ್ತು ನೀಡುತ್ತಿದ್ದೇವೆ. ಕರ್ನಾಟಕದಲ್ಲಿ ರಾಗಿ ಹಾಗೂ ಜೋಳದ ಉತ್ಪಾದನೆ ಹೆಚ್ಚಿದೆ. ಇದನ್ನು ವಿಶ್ವಾದ್ಯಂತ ಪ್ರಚಾರ ಮಾಡಲು ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲೂ ಕರ್ನಾಟಕದ ರೈತರು ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದರು.
ಇದನ್ನೂ ಓದಿ | Modi In Karnataka | ಯುಪಿಎ ಸರ್ಕಾರದಿಂದಾಗಿ ನೀರಾವರಿ ಯೋಜನೆ ಕರ್ನಾಟಕದ ಕೈತಪ್ಪಿತ್ತು: ಸಿಎಂ ಬೊಮ್ಮಾಯಿ ಆರೋಪ
ಕರ್ನಾಟಕ
Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.
ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಾಡಿದ್ದ 40% ಕಮಿಷನ್ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)
ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.
1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.
ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ @siddaramaiah, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ.
— BJP Karnataka (@BJP4Karnataka) July 15, 2023
ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ.
2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ. pic.twitter.com/Wvf09am1e6
2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…
ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…#ShadowCM pic.twitter.com/FXM2DcQ4LB
— BJP Karnataka (@BJP4Karnataka) July 14, 2023
3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ…#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/tWIHlbcNAH
— BJP Karnataka (@BJP4Karnataka) July 12, 2023
4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ..#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/XLnSkAoW7q
— BJP Karnataka (@BJP4Karnataka) July 7, 2023
5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.
CM ನೆರಳಿನಲ್ಲಿ #ShadowCM ಅವ್ಯವಹಾರ.
— BJP Karnataka (@BJP4Karnataka) July 6, 2023
ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ. #ShadowCM #ATMSarkara pic.twitter.com/E3ft1fYGFP
6. Commission Master in the shadows of Chief Minister!
ಕರ್ನಾಟಕ
Evm Machine : ಡೆಮಾಲಿಷನ್ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!
Evm Control Units : ಮನೆ ಡೆಮಾಲಿಷನ್ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು ತಹಸೀಲ್ದಾರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.
2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್ ಕಮ್ ಬ್ಯಾಕ್
MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.
ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.
ಶೆಟ್ಟರ್ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ
ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ 5 ವರ್ಷ, ಹಾಲಿ ಸಚಿವ ಎನ್.ಎನ್. ಬೋಸ್ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್
ಶೆಟ್ಟರ್‌ಗೆ ದೊಡ್ಡ ಗೌರವ
ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್ ಕೊಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
ಎನ್.ಎಸ್. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್.ಶಂಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.
ಕರ್ನಾಟಕ
Brand Bengaluru: ವಿದ್ಯುತ್ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್ ಬಿಲ್ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.
1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.
ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.
ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.
ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.
ಇದನ್ನೂ ಓದಿ: Rice Politics: ನಾಳೆ ಅಮಿತ್ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ
-
ದೇಶ19 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ14 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ದೇಶ23 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ಟಾಪ್ 10 ನ್ಯೂಸ್21 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ20 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್22 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ10 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕ್ರೈಂ11 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?