Site icon Vistara News

Murder Case : ನಡುರಸ್ತೆಯಲ್ಲಿ ಅಕ್ಕನನ್ನು ಅಟ್ಟಾಡಿಸಿ ಸುತ್ತಿಗೆಯಿಂದ ಹೊಡೆದು ಕೊಂದ

Murder Case

ಯಾದಗಿರಿ: ತಮ್ಮನಿಂದಲೇ ಅಕ್ಕನ ಬರ್ಬರ (Murder Case) ಕೊಲೆಯಾಗಿದೆ. ಯಾದಗಿರಿ (Yadagiri News) ತಾಲೂಕಿನ ಬೊಮ್ಮರಾಲದೊಡ್ಡಿಯಲ್ಲಿ ಘಟನೆ ನಡೆದಿದೆ. ನರಸಮ್ಮ(65) ಕೊಲೆಯಾದ ಸಹೋದರಿ.

ನರಸಮ್ಮಳ ಸಹೋದರ ಸೂಗುರಪ್ಪ ಕೊಲೆ ಆರೋಪಿ ಆಗಿದ್ದಾನೆ. ಮಾನಸಿಕ ಅಸ್ವಸ್ಥನಾಗಿದ್ದ ಸೂಗುರಪ್ಪನನ್ನು ನಸರಮ್ಮಳೇ ನೋಡಿಕೊಳ್ಳುತ್ತಿದ್ದರು. ಇನ್ನೂ ಮನೆಯಲ್ಲಿ ಕೈ-ಕಾಲು ಕಟ್ಟಿ ಕೂರಿಸುತ್ತಿದ್ದರು. ಕೋಪದಲ್ಲಿ ಸರಪಳಿ ಬಿಚ್ಚಿಕೊಂಡು ಕಬ್ಬಿಣ್ಣದ ಸುತ್ತಿಗೆಯಿಂದ ಹೆಂಡತಿಗೆ ಹಾಗೂ ಸಹೋದರಿಗೆ ನರಸಮ್ಮನಿಗೆ ಹೊಡೆದಿದ್ದಾನೆ.

ನರಸಮ್ಮ ಈತನಿಂದ ತಪ್ಪಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಆದರೂ ಬಿಡದ ಸೂಗುರಪ್ಪ ನಡು ರಸ್ತೆಯಲ್ಲಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಇನ್ನೂ ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Assault case : ಬಾರ್‌ನಲ್ಲಿ ಕುಡುಕರ ಗಲಾಟೆ; ಓರ್ವನಿಗೆ ಚಾಕು ಇರಿತ

ಗಲಾಟೆ ಬಿಡಿಸಲು ಹೋದ ಮಹಿಳೆಯ ಎದೆಗೆ ಗುದ್ದಿ ಹೊಡೆದು ಕೊಂದರು

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವು ಸಾವಿನಲ್ಲಿ (Murder case) ಅಂತ್ಯವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಿಂಗಪೂರದಲ್ಲಿ ಘಟನೆ ನಡೆದಿದೆ. ತಾಯವ್ವ ಸಾಲಮಂಟಪಿ (60) ಮೃತ ದುರ್ದೈವಿ.

ಸಾರಾಯಿ ಮಾರಾಟ ಮಾಡುತ್ತಾರೆ ಎಂಬ ವಿಚಾರವನ್ನು ಕೇಳಲು ತಾಯವ್ವ ಸಹೋದರ ವಿಠ್ಠಲ ಸಾಲಮಂಟಪಿ ಹೋಗಿದ್ದರು. ಸೋಮವಾರ ರಾತ್ರಿ1 ಗಂಟೆಗೆ ಆರೋಪಿಗಳ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ವಿಠ್ಠಲ ಹಾಗೂ ಮಾದರ ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದೆ. ವಿಠ್ಠಲ ಸಹೋದರಿ ತಾಯವ್ವ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ್ದಾರೆ.

ಈ ವೇಳೆ ತಾಯವ್ವಳಿಗೆ ಅವಾಚ್ಯ ಶಬ್ಧದಿಂದ ನಿಂದಿಸಿ, ಆಕೆಯ ಎದೆ ಭಾಗಕ್ಕೆ ಜೋರಾಗಿ ಗುದ್ದಿ ತಳ್ಳಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ತಾಯವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆಯೂ ಸಾರಾಯಿ ಮಾರಾಟ ಮಾಡುವ ವಿಚಾರಕ್ಕೆ ವಿಠ್ಠಲ ಸಾಲಮಂಟಪಿ ಹಾಗೂ ಮಾದರ ಕುಟುಂಬಸ್ಥರ ನಡುವೆ ಜಗಳ ಆಗಿತ್ತು. ನಿನ್ನೆಯೂ ಇದೇ ವಿಚಾರವನ್ನು ಕೇಳಲು ಹೋದಾಗ ಗಲಾಟೆ ಶುರುವಾಗಿ, ವೃದ್ಧೆಯ ಸಾವಿನಲ್ಲಿ ಅಂತ್ಯವಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿತರಾದ ಪ್ರಕಾಶ್ ಮಾದರ, ಯಮನಪ್ಪ ಮಾದರ, ಭೀಮಪ್ಪ ಮಾದರ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಮುಧೋಳ ಸಿಪಿಐ, ಲೋಕಾಪುರ ಪಿಎಸ್‌ಐ ಭೇಟಿ ಪರಿಶೀಲನೆ ನಡೆಸಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಪಾರ್ಕ್‌ನ ಪೊದೆಯಲ್ಲಿತ್ತು ನಿವೃತ್ತ ಬ್ಯಾಂಕ್ ನೌಕರನ ಕೊಳೆತ ಶವ

ಹಾಸನ: ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಶವವಾಗಿ (Dead Body Found) ಪತ್ತೆಯಾಗಿದ್ದಾರೆ. ಮಂಜುನಾಥ್ (70) ಅನುಮಾನಾಸ್ಪದವಾಗಿ ಮೃತಪಟ್ಟವರು. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಘಟನೆ ನಡೆದಿದೆ.

ಅರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿಯಾದ ಮಂಜುನಾಥ್, ಕಳೆದ ಮಾ.27 ರಂದು ಸಂಜೆ ಸಮಯ ವಾಕಿಂಗ್‌ಗೆ ಎಂದು ಮನೆಯಿಂದ ತೆರಳಿದ್ದರು. ರಾತ್ರಿ ಕಳೆದರು ಮಂಜುನಾಥ್‌ ಮನೆಗೆ ವಾಪಸ್ ಬಾರದೇ ಇದ್ದಾಗ, ಮನೆ ಮಂದಿ ಎಲ್ಲ ಕಡೆ ಹುಡುಕಾಡಿದ್ದಾರೆ. ನಂತರ ಯಾವುದೇ ಸುಳಿವು ಸಿಗದೇ ಇದ್ದಾಗ ಮಂಜುನಾಥ್‌ ಪತ್ನಿ ಸರೋಜಾ ನಿಂಬಣ್ಣನವರ್‌ ಮರುದಿನ ಮಾ.28 ರಂದು ಅರಸೀಕೆರೆ ನಗರ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು.

ಇದೀಗ ಏ.2ರಂದು ಕಂತೇನಹಳ್ಳಿ ಕೆರೆ ಪಕ್ಕದ ಪಾರ್ಕ್‌ನಲ್ಲಿ ಗಬ್ಬು ನಾರುವ ವಾಸನೆ ಬರುತ್ತಿತ್ತು. ಈ ವೇಳೆ ಪರಿಶೀಲನೆ ನಡೆಸಿದಾಗ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜುನಾಥ್ ಅವರ ಮೃತದೇಹ ಪತ್ತೆಯಾಗಿದೆ. ಕೂಡಲೇ ವಾಯು ವಿಹಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಮೇಲೆ ಇದು ಕೊಲೆನಾ ಅಥವಾ ಆಕಸ್ಮಿಕ ಸಾವಾ ಎಂಬುದುರ ಕುರಿತು ತಿಳಿಯಲಿದೆ. ಸದ್ಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version