ಯಾದಗಿರಿ: ಅತ್ತೆ-ಮಾವ ಹಾಗೂ ಪತ್ನಿಯನ್ನು ಪಾಪಿಯೊಬ್ಬ ಬರ್ಬರವಾಗಿ ಕೊಲೆ (Murder case) ಮಾಡಿದ್ದಾನೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಘಟನೆ ನಡೆದಿದೆ. ಕೊಲೆಯಾದ ಮೂವರು ದಾವಣಗೆರೆ ಮೂಲದವರಾಗಿದ್ದಾರೆ. ಅನ್ನಪೂರ್ಣ (25), ಕವಿತಾ (45), ಬಸವರಾಜಪ್ಪ (52) ಕೊಲೆಯಾದವರು.
ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ನವೀನ್ (30) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದೆ ದಾವಣಗೆರೆ ಮೂಲದ ಅನ್ನಪೂರ್ಣಳನನ್ನು ನವೀನ್ ಮದುವೆಯಾಗಿದ್ದ. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇತ್ತು.
ಆದರೆ ಪತಿ ನವೀನ್ ಕಿರುಕುಳ ತಾಳಲಾರದೆ ಅನ್ನಪೂರ್ಣ ತವರು ಮನೆಗೆ ವಾಪಸ್ ಆಗಿದ್ದಳು. ಕಳೆದ ಒಂದು ವರ್ಷದ ಹಿಂದೆ ಅನ್ನಪೂರ್ಣ ತಂದೆ-ತಾಯಿ ಜತೆಗೆ ಇದ್ದಳು. ನಿನ್ನೆ ಬುಧವಾರ ಮತ್ತೆ ಜತೆಗೆ ಇರೋಣಾ ಬಾ ಎಂದು ಅನ್ನಪೂರ್ಣಳನ್ನು ನವೀನ್ ಕರೆದಿದ್ದ. ನ್ಯಾಯಾ ಪಂಚಾಯತಿ ಬಳಿಕ ಮತ್ತೆ ಈ ದಂಪತಿ ಜೊತೆಗಿರಲು ಮುಂದಾಗಿದ್ದರು.
ಇತ್ತ ಪೋಷಕರು ಮಗಳನ್ನು ಗಂಡನ ಮನೆಗೆ ಬಿಡಲು ಬಂದಿದ್ದರು. ರಾಜೀ ಪಂಚಾಯತಿ ಬಳಿಕ ಅತ್ತೆ- ಮಾವನನ್ನು ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಿಡಲು ಹೋದಾಗ, ಕಬ್ಬಿಣದ ರಾಡ್ ಹಾಗೂ ಚಾಕುನಿಂದ ಇರಿದು ನವೀನ್ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ವಡಗೇರಾ ತಾಲೂಕಿನ ಜೋಳದಡಗಿ ಬಳಿ ಶವ ಬಿಸಾಡಿದ್ದಾನೆ. ಸದ್ಯ ಅನ್ನಪೂರ್ಣಳ ಶವ ಪತ್ತೆಯಾಗಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ
ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ
ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ದೇವರಾಜ್ ಮೃತ ದುರ್ದೈವಿ. ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ.
ದೇವರಾಜ್ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.
ಪರ ಪುರುಷನೊಂದಿಗೆ ಪತ್ನಿ ಓಡಿ ಹೋದ ಸುದ್ದಿ ತಿಳಿದ ದೇವರಾಜ್ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್ ಮನವಿ ಮಾಡಿದ್ದಾರೆ.
ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ಬರೆದಿದ್ದಾರೆ.
ಪತ್ನಿ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ದೇವರಾಜ್, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ. ಇತ್ತ ತಾಯಿ ಇಲ್ಲದೇ ತಂದೆಯನ್ನು ಕೆಳದುಕೊಂಡ ಇಬ್ಬರು ಹೆಣ್ಮಕ್ಕಳು ತಬ್ಬಲಿಗಳಾಗಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ