ಯಾದಗಿರಿ: ಸಂಚಾರಿ ನಿಯಮವನ್ನು ಗಾಳಿಗೆ ತೂರಿ 40ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ ಬೊಲೆರೋ ಪಿಕಪ್ ವಾಹನವು (Road Accident) ಪಲ್ಟಿ ಹೊಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸದಬ ಗ್ರಾಮದ ಅಗತೀರ್ಥ ಕ್ರಾಸ್ ಹತ್ತಿರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸ್ಥಳದಲ್ಲೇ ಕಾರ್ಮಿಕ ಮಹಿಳೆ ಮೃತಪಟ್ಟರೆ, 20ಕ್ಕೂ ಮಹಿಳೆಯರು ಗಾಯಯಗೊಂಡಿದ್ದಾರೆ. ಗಾಯಾಳುಗಳನ್ನು ಹುಣಸಗಿ ಹಾಗೂ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲದೇವನಹಳ್ಳಿಯಿಂದ ನಿಯಮ ಮೀರಿ ಪಿಕಪ್ ವಾಹನದಲ್ಲಿ 48 ಕೂಲಿ ಕಾರ್ಮಿಕರು ತೆರಳುತ್ತಿದ್ದರು.
ಈ ವೇಳೆ ಸದಬ ಸಮೀಪದ ಅಗತೀರ್ಥ ಕ್ರಾಸ್ ಹತ್ತಿರ ಬಂದಾಗ ಬುಲೆರೋ ಪಿಕಪ್ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಲಕ್ಷ್ಮಿ ನಗನೂರು (38) ಎಂಬಾಕೆ ಸ್ಥಳದಲ್ಲೇ ಮೃತಪಟ್ಟರೆ, 20 ಕಾರ್ಮಿಕರು ಗಾಯಗೊಂಡಿದ್ದಾರೆ. ಕಲ್ಲದೇವನಹಳ್ಳಿಯಿಂದ ಯಾಳಗಿ ಗ್ರಾಮಕ್ಕೆ ಕೂಲಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ಸ್ಥಳಕ್ಕೆ ಹುಣಸಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Murder Case : ಅಳಿಯ- ಮಗಳ ಜಗಳ ಬಿಡಿಸಲು ಹೋಗಿ ಕೊಲೆಯಾದ ಮಹಿಳೆ
ಟ್ರ್ಯಾಕ್ಟರ್-ಬೈಕ್ ಡಿಕ್ಕಿ; ಸವಾರ ನರಳಾಡುತ್ತಿದ್ದರೂ ಕ್ಯಾರೆ ಅನ್ನದ ಜನ
ಕೋಲಾರ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ (Road Accident) ಮೃತಪಟ್ಟ ದಾರುಣ ಘಟನೆ ಕೋಲಾರದ ಕೆಜಿಎಫ್ ತಾಲೂಕಿನ ಪಾರಂಡಹಳ್ಳಿ ಬಳಿ ನಡೆದಿದೆ. ತಾತ ರೆಡ್ಡಿಹಳ್ಳಿ ನಿವಾಸಿ ರಾಮಕೃಷ್ಣ (38) ಮೃತ ದುರ್ದೈವಿ.
ಟ್ರಾಕ್ಟರ್‌ಗೆ ಬೈಕ್ ಡಿಕ್ಕಿಯಾದ ರಭಸಕ್ಕೆ ರಾಮಕೃಷ್ಣ ತಲೆಗೆ ಗಂಭೀರ ಗಾಯವಾಗಿತ್ತು. ಗಾಯಾಳು ರಸ್ತೆಯಲ್ಲಿ ನರಳಾಡುತ್ತಿದ್ದರೂ ಯಾರೊಬ್ಬರು ನೆರವಿಗೆ ಬಂದಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ರಾಮಕೃಷ್ಣ ಅವರನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಇತ್ತ ಚಾಲಕ ಅಪಘಾತದ ನಂತರ ಟ್ರ್ಯಾಕ್ಟರ್ ಸಮೇತ ಚಾಲಕ ಪರಾರಿ ಆಗಿದ್ದಾನೆ. ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಎಳ್ಳು ತುಂಬಿದ ಲಾರಿ ಪಲ್ಟಿ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ- ಹೊಸೂರಿನ ನೈಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿ ಹೊಡೆದಿದೆ. ಬೇಗೂರು ಸಮೀಪದ ಅಂಡರ್ ಪಾಸ್‌ನ ಸುಮಾರು 10 ಅಡಿ ಕೆಳಗೆ ಬಿದ್ದ ಎಳ್ಳು ತುಂಬಿದ ಲಾರಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಲಾರಿ ಚಾಲಕ, ಕ್ಲೀನರ್ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಬೆಳಗಿನ ಜಾವ 3.30ರ ಸಮಯಕ್ಕೆ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಅಂಡರ್ ಪಾಸ್‌ನಲ್ಲಿ ಗಾಡಿಗಳು ಸಂಚರಿಸುತ್ತಿದ್ದಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ