Site icon Vistara News

Exam Cheating : ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರು ಅರೆಸ್ಟ್‌!

Fake candidate puttapa have been arrested

ಯಾದಗಿರಿ: ಅ. 28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ (Examination on October 28, 29) ಕೆಇಎ ಪರೀಕ್ಷೆಯನ್ನು ನಡೆಸುತ್ತಿದೆ. ರಾಜ್ಯಾದ್ಯಂತ ಮೊದಲ ದಿನ 350 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿಯ (Yadagiri News) ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಬಳಕೆ ಮಾಡಿ ನಕಲು ಮಾಡುತ್ತಿದ್ದ (Exam Cheating) ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವನು ನಕಲಿ ಅಭ್ಯರ್ಥಿ ಎಂದು ದೃಢವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ಸೇರಿದಂತೆ 17 ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 7,884 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ದರೂ ಬ್ಲೂಟೂತ್‌ ಬಳಕೆಯಾಗಿದೆ.

ಇದನ್ನೂ ಓದಿ: Recruitment Exam : ಹಿಜಾಬ್ ಗದ್ದಲದ ನಡುವೆಯೇ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಶುರು

ಪುಟ್ಟಪ್ಪ ಎಂಬಾತನನ್ನು ಸೇರಿದಂತೆ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಪುಟ್ಟಪ್ಪ ಮೂಲತಃ ಪಿಎಸ್ಐ ಹಗರಣ ಕಿಂಗ್ ಪಿನ್ ಆಗಿರುವ ಆರ್‌.ಡಿ ಪಾಟೀಲ್ ಗ್ರಾಮದವನು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನು. ಸದ್ಯ ಪರೀಕ್ಷಾ ಕೇಂದ್ರದ ಹೊರಗಿದ್ದು ಮಾಹಿತಿ ನೀಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಜೊಂಡಿದ್ದಾರೆ. ಎಲ್ಲರೂ ಕಲಬುರಗಿ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಗೆ 6-8 ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪರೀಕ್ಷಾ ಅಕ್ರಮ ಸಂಬಂಧ ಡಿಸಿ ಡಾ.ಸುಶೀಲಾ ಬಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ಅವರು, ಖಾಲಿ ಹುದ್ದೆ ಭರ್ತಿಗಾಗಿ ಇಂದು ಮತ್ತು ನಾಳೆ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿರುವ ಬಗ್ಗೆ ಎಸ್‌ಪಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

Three persons including a fake candidate have been arrested for writing exams using Bluetooth.

ಪ್ರಮುಖ ಆರೋಪಿ ಅಫಜಲಪುರ ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇವರೆಗೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ಮಾಡಲಾಗುತ್ತಿದೆ. ವಿಚಾರಣೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version