ಯಾದಗಿರಿ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ (29) ಮಠಪತಿ ಮೃತೆ. ಕೊಂಗಂಡಿ ಗ್ರಾಮದಲ್ಲಿ ಗಂಡನೊಂದಿಗೆ ವಾಸವಾಗಿದ್ದ ಮಹಿಳೆ, ತನ್ನ 10 ತಿಂಗಳ ಹೆಣ್ಣು ಮಗುವನ್ನು ಕೊಂಕಲ್ ಗ್ರಾಮದ ತವರು ಮನೆಯಲ್ಲಿ ಬಿಟ್ಟಿದ್ದಳು. ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಡಗೇರಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Chaithra Kundapura : ಮುಸ್ಲಿಮರ ಮೇಲೆ ಬೆಂಕಿ ಉಗುಳುವ ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಮ್ ಫ್ರೆಂಡ್ ಮನೆಯಲ್ಲಿ!
ಭೀಕರ ಸರಣಿ ಅಪಘಾತ: ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು, 14 ತಿಂಗಳ ಮಗು ಗಂಭೀರ
ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru News) ತಾಲೂಕಿನ ಹಿರೇಗೌಜ ಸಮೀಪ ಭೀಕರ ಸರಣಿ ಅಪಘಾತ (Road accident) ಸಂಭವಿಸಿದ್ದು ದಂಪತಿ ಸ್ಥಳದಲ್ಲೇ (Couple dead on spot) ಸಾವನ್ನಪಿದ್ದರೆ, ಅವರ 14 ತಿಂಗಳ ಮಗು ಗಂಭೀರವಾಗಿ (14 month child injured) ಗಾಯಗೊಂಡಿದೆ.
ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ.
ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಕಾರು, ಬೈಕ್ ಮತ್ತು ಲಾರಿ ಮಧ್ಯೆ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳೆದ ರಾತ್ರಿ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident : ಹಾಸನದಲ್ಲಿ ಭೀಕರ ಅಪಘಾತ; ಬೆಂಗಳೂರಿನ ವ್ಯಕ್ತಿ ಸಾವು, 6 ಮಂದಿ ಗಂಭೀರ
ಲವು ದಿನಗಳ ಹಿಂದಷ್ಟೇ ತಾಯಿ ಮತ್ತು ಮಗ ಮೃತ್ಯು
ಚಿಕ್ಕಮಗಳೂರು (Chikkamagaluru news) ತಾಲೂಕಿನ ಕಣಿವೆ ಕ್ರಾಸ್ ಬಳಿ ಕೆಲವು ದಿನಗಳ ಹಿಂದಷ್ಟೇ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿದ್ದರು. ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಬಡಿದು ಈ ದುಂತ ಸಂಭವಿಸಿತ್ತು. ಮೃತಪಟ್ಟವರನ್ನು ಚೆನ್ನಮ್ಮ (67) ಮತ್ತು ಅವರ ಮಗ ನಿರಂಜನ್ (42) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಯಾಗಿರುವ ನಿರಂಜನ್ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರು ಸೇತುವೆಗೆ ಡಿಕ್ಕಿ ಹೊಡೆದು ಅಲ್ಲೇ ಸಿಕ್ಕಿಹಾಕಿಕೊಂಡಿದೆ. ಡಿಕ್ಕಿಯ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತಾಯಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು.
ಕಾರಿನಲ್ಲಿ ಕಾರಿನಲ್ಲಿ ಸಿಲುಕಿದ್ದ ನಿರಂಜನ್ ಅವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಮಾಡಿದರು. ಹಾಗೆ ಹೊರತೆಗೆದ ಬಳಿಕ ಆಸ್ಪತ್ರೆಗೆ ಸಾಗಿಸಿದರು. ಆದರೆ, ಸ್ವಲ್ಪ ದೂರ ಹೋಗುವಷ್ಟರಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ. ನಿರಂಜನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.