Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು - Vistara News

ಯಾದಗಿರಿ

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

VISTARANEWS.COM

on

Yadagiri News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ (Yadagiri News).

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕ ದೂರು ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಲೋಕಾಯುಕ್ತ ದಾಳಿ ನಡೆದಿತ್ತು. ಡಾ. ಪ್ರಭುಲಿಂಗ್ ಮಾನಕರ್ ಅವರ ಯಾದಗಿರಿಯ ಕಚೇರಿ, ಮನೆ ಹಾಗೂ ಕಲಬುರ್ಗಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿತ್ತು.

ಕಾಲುವೆಗೆ ಬಿದ್ದ ಬೈಕ್; ಓರ್ವ ನಾಪತ್ತೆ

ಬೆಳಗಾವಿ: ರಸ್ತೆ ಗುಂಡಿಗೆ ಬಿದ್ದ ಬೈಕ್‌ ಬಳಿಕ ಆಯ ತಪ್ಪಿ ಕಾಲುವೆಗೆ ಬಿದ್ದಿರುವ ಘಟನೆ ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದಲ್ಲಿ ‌ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರ ಓಂಕಾರ್ ಅರುಣ್ ಪಾಟೀಲ್ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿದ್ದು, ಬೈಕ್‌ ಓಡಿಸುತ್ತಿದ್ದ ಜ್ಯೋತಿನಾಥ್‌ ಪಾಟೀಲ್ ಈಜಿ ದಡ ಸೇರಿದ್ದಾರೆ. ಓಂಕಾರ್ ಅರುಣ್ ಪಾಟೀಲ್ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿದ್ದು, ಡಿಸಿಪಿ ಸ್ನೇಹಾ, ತಹಶಿಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ತಂಡವೂ ಸ್ಥಳದಲ್ಲಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಅವರ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ (ಆ. 2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Rain News : ಭಾನುವಾರದಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು (Karnataka Weather Forecast) ನೀಡಲಾಗಿದೆ.

VISTARANEWS.COM

on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

PSI Parashuram Case: ಪಿಎಸ್ಐ ಪರಶುರಾಮ್ ಸಾವು ಪ್ರಕರಣಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

VISTARANEWS.COM

on

PSI Parshuram Death Case
Koo

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು (PSI Parashuram Case) ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಶನಿವಾರ ಮಧ್ಯಾಹ್ನ ಕೇಸ್‌ ದಾಖಲಾಗಿತ್ತು. ಮೃತ ಪಿಎಸ್ಐ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೃತ ಪಿಎಸ್ಐ ಪತ್ನಿ ಸೇರಿ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಪಕ್ಷೇತರ ಪರಾಜಿತ ಅಭ್ಯರ್ಥಿ ಹಣಮೇಗೌಡ ಬೀರನಕಲ್ ಮಾತನಾಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಕಂಡಲ್ಲಿ ಕಲ್ಲು ಹೊಡೆಯಬೇಕು. ವೋಟ್ ಹಾಕಿ ಗೆಲ್ಲಿಸಿದ್ದೀರಿ, ಈಗ ಕಂಡರೇ ಕಲ್ಲು ತೆಗೆದುಕೊಂಡು ಹೊಡೆಯಿರಿ. ಶಾಸಕ ಭೃಷ್ಟಚಾರದಲ್ಲಿ ಭಾಗಿಯಾಗಿದ್ದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

Continue Reading

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM

on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PSI Parshuram Death Case: ಪಿಎಸ್ಐ ಪರಶುರಾಮ ಸಾವು ಪ್ರಕರಣ; ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

PSI Parshuram death Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM

on

PSI Parshuram death Case
Koo

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಕೇಸ್‌ ದಾಖಲಾಗಿದೆ. ಮೃತ ಪಿಎಸ್ಐ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೃತ ಪಿಎಸ್ಐ ಪತ್ನಿ ಸೇರಿ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಪಕ್ಷೇತರ ಪರಾಜಿತ ಅಭ್ಯರ್ಥಿ ಹಣಮೇಗೌಡ ಬೀರನಕಲ್ ಮಾತನಾಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಕಂಡಲ್ಲಿ ಕಲ್ಲು ಹೊಡೆಯಬೇಕು. ವೋಟ್ ಹಾಕಿ ಗೆಲ್ಲಿಸಿದ್ದೀರಿ, ಈಗ ಕಂಡರೇ ಕಲ್ಲು ತೆಗೆದುಕೊಂಡು ಹೊಡೆಯಿರಿ. ಶಾಸಕ ಭೃಷ್ಟಚಾರದಲ್ಲಿ ಭಾಗಿಯಾಗಿದ್ದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

Continue Reading
Advertisement
IND vs SL
ಕ್ರೀಡೆ12 mins ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ18 mins ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು31 mins ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು54 mins ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Rashami Desai Homeless Rashami Desai lived in an Audi
ಕಿರುತೆರೆ55 mins ago

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Paris Olympics
ಕ್ರೀಡೆ1 hour ago

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Gold Rate Today
ವಾಣಿಜ್ಯ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Murder Case
ಕ್ರೈಂ2 hours ago

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Ram Gopal Varma calls The Kerala Story one of the best films
ಟಾಲಿವುಡ್2 hours ago

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Rashid Khan
ಕ್ರಿಕೆಟ್2 hours ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ23 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌