ಯಾದಗಿರಿ: ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ (Minister Ramalingareddy) ಅವರ ಕುರಿತು ಅವಹೇಳನಕಾರಿಯಾಗಿ ನಿಂದಿಸಿದ್ದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ, ಯಾದಗಿರಿಯಲ್ಲಿ (Yadgiri News) ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೆಡ್ಡಿ ಜನಸಂಘ ಯುವ ಬ್ರಿಗೇಡ್ ನ ರಾಜ್ಯಾಧ್ಯಕ್ಷ ಸಿದ್ದು ಪ್ರಕಾಶರೆಡ್ಡಿ ಅವರ ನೇತೃತ್ವದಲ್ಲಿ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಚಿವ ರಾಮಲಿಂಗಾರೆಡ್ಡಿ ಅವರ ವಿರುದ್ಧ ಮನುಗೌಡ ದೊಡ್ಡಬಳ್ಳಾಪುರ ಎಂಬ ವ್ಯಕ್ತಿಯು ಇತ್ತೀಚೆಗೆ ಅವಹೇಳನಕಾರಿಯಾಗಿ ನಿಂದನೆ ಮಾಡಿದ್ದು ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೂಡಲೇ ನಿಂದಿಸಿರುವ ಆರೋಪಿಗೆ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ: Recession: ಜಪಾನ್ ಬಳಿಕ ಬ್ರಿಟನ್‌ಗೂ ತಟ್ಟಿದ ಆರ್ಥಿಕ ಹಿಂಜರಿತ!
ಈ ವೇಳೆ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ ಸಿದ್ದುಪ್ರಕಾಶರೆಡ್ಡಿ ಮಾತನಾಡಿ, ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ಸರ್ವ ಜನಾಂಗದ ಏಳ್ಗೆ ಬಯಸುವ ಮುತ್ಸದ್ದಿ ರಾಜಕೀಯ ನಾಯಕರಾಗಿದ್ದಾರೆ. ಬಡವರು, ನಿರ್ಗತಿಕರಿಗೆ ಸಹಾಯ ಮಾಡುತ್ತಾ ಅನೇಕ ಸೇವೆಗೈಯ್ಯುತ್ತಿದ್ದಾರೆ. ಶಾಂತ ಸ್ವಭಾವದ ವ್ಯಕ್ತಿಯಾಗಿದ್ದಾರೆ. ರಾಜಕೀಯದಲ್ಲಿ 40 ವರ್ಷಗಳ ಕಾಲ ಜನ ಸೇವೆ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ತಮ್ಮದೆ ಕೊಡುಗೆ ನೀಡುತ್ತಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ಅನೇಕ ಬದಲಾವಣೆ ತಂದಿದ್ದಾರೆ. ಇಂತಹ ನಾಯಕರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮನುಗೌಡ ಅವರ ಮನಸ್ಥಿತಿ ಸರಿಯಲ್ಲ ಎಂದು ಆರೋಪಿಸಿದ ಅವರು, ಇಂತಹ ಹೇಳಿಕೆ ನೀಡಿರುವ ವ್ಯಕ್ತಿಗೆ ಯಾರು ಪ್ರಚೋದನೆ ನೀಡಿದ್ದಾರೆಂದು ಪೊಲೀಸರು ತನೀಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.
ನಂತರ ಕಾಂಗ್ರೆಸ್ ಮುಖಂಡ ಮಾಣೀಕರೆಡ್ಡಿ ಕುರಕುಂದಿ ಮಾತನಾಡಿ, ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಿಂದನೆ ಮಾಡಿರುವ ಕ್ರಮ ಸರಿಯಲ್ಲ. ಇಂತಹ ಹೇಳಿಕೆ ನೀಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು. ಸಾರ್ವಜನಿಕವಾಗಿ ಕ್ಷಮೆ ಕೋರಬೇಕು ಹಾಗೂ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಮಾನವ ಸರಪಳಿ ರಚಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರು ವಾಹನ ತೆಗೆದುಕೊಂಡು ಹೋಗಲು ಸಮಸ್ಯೆ ಎದುರಿಸಿದರು.
ನಂತರ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದನ್ನೂ ಓದಿ: 7th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ಶುಭಸುದ್ದಿ; ತುಟ್ಟಿ ಭತ್ಯೆ ಶೇಕಡಾ 4ರಷ್ಟು ಹೆಚ್ಚಳ ಸಾಧ್ಯತೆ
ಪ್ರತಿಭಟನೆಯಲ್ಲಿ ಸಿದ್ದುಗೌಡ ಕಾಮರೆಡ್ಡಿ, ಸಿದ್ದುರೆಡ್ಡಿ ತಂಗಡಗಿ, ಚಂದ್ರಶೇಖರ ಪಾಟೀಲ ಕಂದಳ್ಳಿ, ಬಾಬುಗೌಡ ಮಾಚನೂರು, ಮಂಜು ಹೂಗಾರ, ಹಣಮಂತರಾಯ ಮಾಲಿಪಾಟೀಲ ತೆಕರಾಳ, ವೆಂಕಟರೆಡ್ಡಿ ಅಬ್ಬೆತುಮಕೂರು, ಸಂಜೀವ್ ಕವಲಿ, ಬಸ್ಸು ನಾಟೇಕರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.