ಯಾದಗಿರಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್ ಅಭಿಯಾನದಡಿ ಸ್ಮಾರ್ಟ್ ಫೋನ್‌ಗಳನ್ನು ವಿತರಣೆ ಮಾಡುತ್ತಿದ್ದು, ಕಾರ್ಯಕರ್ತೆಯರು ಮೊಬೈಲ್ ಸದುಪಯೋಗ ಪಡಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಒದಗಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Yadgiri News) ತಿಳಿಸಿದರು.
ನಗರದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಾ ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ, ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಕಾರ್ಯಕ್ರಮದಲ್ಲಿ ಮೊಬೈಲ್ ವಿತರಣೆ ಮಾಡಿ ಅವರು ಮಾತನಾಡಿದರು.
ಇದನ್ನೂ ಓದಿ: Retirement Planning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ
ಡಿಜಿಟಲ್ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದೆ. ಬೆರಳು ತುದಿಯಡಿ ಎಲ್ಲಾ ಮಾಹಿತಿ ಪಡೆಯಲು ಮೊಬೈಲ್‌ಗಳ ಸಹಾಯವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳಿಗೆ, ಬಾಣಂತಿ ಹಾಗೂ ಗರ್ಭಿಣಿಯರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕರ್ತರು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೊಬೈಲ್‌ನಿಂದ ಮಕ್ಕಳ ಹಾಜರಾತಿ, ಆಹಾರ ವಿತರಣೆ, ಮಕ್ಕಳ ಬೆಳವಣಿಗೆ ಮಾಹಿತಿ, ಫಲಾನುಭವಿಗಳ ಮನೆ ಭೇಟಿ ವಿವರ, ಅಂಗನವಾಡಿ ಕೇಂದ್ರದ ದೈನಂದಿನ ಚಟುವಟಿಕೆ, ಲಸಿಕೆ ಹಾಗೂ ಇತರೆ ಕಾರ್ಯಕ್ರಮ ಬಗ್ಗೆ ಶೀಘ್ರವಾಗಿ ಮಾಹಿತಿ ಪಡೆಯಬಹುದಾಗಿದೆ ಎಂದರು.
ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್!
ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ವನಜಾಕ್ಷಿ, ಮಲ್ಲಿಕಾರ್ಜುನ ಈಟೆ, ಉಷಾ ಬಳಗಾನೋರ್, ಮಲ್ಲಮ್ಮ ಹಾಗೂ ಇತರರು ಉಪಸ್ಥಿತರಿದ್ದರು.