Site icon Vistara News

Yadgiri News: ಶರಣರು, ಸಂತರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಚನ್ನಾರೆಡ್ಡಿ ಪಾಟೀಲ

Bhavaikyata Dharmasabha programme inauguration by Yadgiri MLA Channareddy Patila Tunnur

ಯಾದಗಿರಿ: ಶರಣರು, ಸಂತರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿ ನೆಮ್ಮದಿಯ ಬದುಕು ಸಾಗಿಸಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅಭಿಪ್ರಾಯಪಟ್ಟರು.

ಯಾದಗಿರಿ ನಗರದ ಹೊರವಲಯದ ವೀರೇಶ್ವರ ನಗರದ ಸದ್ಗುರು ಶ್ರೀ ದಾಸಬಾಳಧೀಶ್ವರಮಠದಲ್ಲಿ ಜಾತ್ರಾ ಮಹೋತ್ಸವ ಹಾಗೂ ಪಂಚತನಾರತಿ ಕಾರ್ಯಕ್ರಮದ ಅಂಗವಾಗಿ ಶ್ರೀಮಠದ ಆವರಣದಲ್ಲಿ ಹಮ್ಮಿಕೊಂಡ ಭಾವೈಕ್ಯತಾ ಧರ್ಮಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಪ್ರತಿಯೊಬ್ಬರೂ ಇಂತಹ ಉತ್ತಮ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರೆ ಬದುಕು ಬದಲಾವಣೆ ಮಾಡಿಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: U19 World Cup: ಅಂಡರ್​ 19 ವಿಶ್ವಕಪ್​ ತಂಡಗಳ ಆಟಗಾರರ ಪಟ್ಟಿ ಪ್ರಕಟಿಸಿದ ಐಸಿಸಿ

ಭಾವೈಕ್ಯತೆ ಧರ್ಮಸಭೆ ಕಾರ್ಯಕ್ರಮವು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಿದೆ.ಸರ್ವ ಸಮುದಾಯವರು ಒಂದೇ ಎಂಬ ಭಾವನೆಯೊಂದಿಗೆ ಇರಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಮಠ ಮಾನ್ಯಗಳ ಪಾತ್ರ ಬಹುಮುಖ್ಯವಾಗಿದೆ ಎಂದರು.

ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿ, ಭಾರತೀಯ ಸಂಸ್ಕೃತಿಯು ಮಠ ಮಾನ್ಯಗಳಿಂದ ಉಳಿಯಲು ಸಾಧ್ಯವಾಗಿದೆ. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡುವುದು ಅವಶ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಮಠದ ಪೀಠಾಧಿಪತಿ ವೀರೇಶ್ವರ ಸ್ವಾಮೀಜಿ ಅವರು, ಸುಮಾರು ವರ್ಷಗಳಿಂದ ಭಕ್ತರ ಸಲಹೆ ಸಹಕಾರದಿಂದ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ.ಅನೇಕ ಧಾರ್ಮಿಕ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಪೋಷಕರು ಮಕ್ಕಳಿಗೆ ಶರಣರ ವಚನ ಹಾಗೂ ಆದರ್ಶಗಳ ಮಹತ್ವ ಸಾರಬೇಕಿದೆ. ಇದರಿಂದ ಬಾಲ್ಯದಲ್ಲೇ ಮಕ್ಕಳು ಉತ್ತಮ ಸಂಸ್ಕಾರವಂತರಾಗಿ ಬೆಳೆಯಲು ಸಾಧ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಗುಮಾಳಪುರದ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ರುಕ್ಮಾಪುರನ ಗುರುಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚರಬಸವೇಶ್ವರನ ಬಸವಯ್ಯ ಶರಣರು ಹಾಗೂ ಗಣೇಶ್ ದುಪ್ಪಲ್ಲಿ, ಬಸ್ಸುಗೌಡ ಬಿಳ್ಹಾರ, ಮಂಜೂಳಾ ಗುಳಿ, ಸೋಮಣ್ಣಗೌಡ ಬೆಳಗೇರಾ, ಮಹೇಶ್ಚಂದ್ರ ವಾಲಿ, ಸೂಗುರೇಶ್ ವಾರದ್ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: A Beginner’s Guide to Working Out: ವ್ಯಾಯಾಮಕ್ಕೆ ಹೊಸಬರೇ? ನಿಮಗೆಂಥದ್ದು ಬೇಕು?

ಶ್ರೀಮಠದ ಆವರಣದಲ್ಲಿ ಹೋಮ ಹವನ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು. ನಂತರ ಪಂಚ ತನಾರತಿ ಮಹೋತ್ಸವ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.

Exit mobile version