ಯಾದಗಿರಿ: ಕಾಂಗ್ರೆಸ್ ಪಕ್ಷ (Congress Party) ಮಹಿಳೆಯರ ಬಗ್ಗೆ ಅತ್ಯಂತ ಕೀಳಾಗಿ ಕಾಣುತ್ತಿದ್ದು, ಇಂತಹ ಪಕ್ಷವನ್ನು ಈ ಬಾರಿ ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಬಿಜೆಪಿ ಸಹ ವಕ್ತಾರ ಹಣಮಂತ ಇಟಗಿ ಮನವಿ (Yadgiri News) ಮಾಡಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರದ ಆಡಳಿತ ಇದೆ. ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆಯವರು ಮಹಿಳೆಯರು ಸರ್ಕಾರಿ ನೌಕರಿ ಪಡೆಯುವ ಕುರಿತು ಅತ್ಯಂತ ಕೀಳಾಗಿ ಮಾತನಾಡಿದ್ದರು. ಈ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು.
ಇದನ್ನೂ ಓದಿ: Vijayanagara News: ವಿಕಾಸ ಬ್ಯಾಂಕ್‌ಗೆ 22.83 ಕೋಟಿ ರೂ. ಲಾಭ: ವಿಶ್ವನಾಥ ಚ.ಹಿರೇಮಠ
ಅಷ್ಟೇ ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಯ ವೇಳೆ ಮಾಂಗಲ್ಯ ಮತ್ತು ಕಾಲುಂಗುರ ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಅವಮಾನ ಮಾಡಿದ್ದಲ್ಲದೇ ಹಿಂದೂ ಧರ್ಮ, ಸಂಸ್ಕೃತಿಯ ನಾಶಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಟ್ಟು ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಈ ಬೆಳೆವಣಿಗೆಯನ್ನು ಪ್ರಜ್ಞಾವಂತರು, ಮಹಿಳೆಯರು ಗಮನಿಸುತ್ತಿದ್ದಾರೆ. ಮಹಿಳೆಯರೇ ಈ ಚುನಾವಣೆಯಲ್ಲಿ ಇದಕ್ಕೆ ತಕ್ಕಪಾಠವನ್ನು ಕಲಿಸಲಿದ್ದಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳೆಯರ ರಾಜಕೀಯ ಸಶಕ್ತೀಕರಣಕ್ಕಾಗಿ ನಾರಿ ಶಕ್ತಿ ವಂದನ್ ಕಾಯ್ದೆಯನ್ನು ಜಾರಿಗೊಳಿಸಿ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಮಹಿಳೆಯರೆಂದರೆ ಕೀಳಾಗಿ ಕಾಣುತ್ತಾರೆ ಎಂದು ಅವರು ಟೀಕಿಸಿದರು.
ಇದನ್ನೂ ಓದಿ: Uttara Kannada News: ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಡಿಸಿ ಮಾನಕರ್
ಸುದ್ದಿಗೋಷ್ಠಿಯಲ್ಲಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ವೆಂಕಟರೆಡ್ಡಿ ಅಬ್ಬೆತುಮಕೂರು, ವೀಣಾ ಮೋದಿ ಹಾಗೂ ಇತರರು ಪಾಲ್ಗೊಂಡಿದ್ದರು.