Site icon Vistara News

Yadgiri News: ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿ ಮರೆತಿದೆ: ರಾಜಾ ಅಮರೇಶ್ವರ ನಾಯಕ

Congress government has forgotten the state development MP Raja Amareshwar Nayak alleges

ಯಾದಗಿರಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿ ಮಾಡುವುದನ್ನು ಮರೆತಿದೆ ಎಂದು ರಾಯಚೂರು ಸಂಸದ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ (Yadgiri News) ಆರೋಪಿಸಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿ ಮಾಡುವುದು ಮರೆತಿದೆ. ಉಚಿತ ಬಸ್ ಸೌಲಭ್ಯದಿಂದ ಕಾರ್ಮಿಕರು ಬಸ್‌ನಲ್ಲಿ ಪ್ರಯಾಣ ಮಾಡದಂತಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಿವೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಅನೇಕ ಜನಪರ ಯೋಜನೆಗಳು ಶಾಶ್ವತ ಗ್ಯಾರಂಟಿಯಾಗಿವೆ ಎಂದರು.

ದೇಶದ ಸಮಗ್ರ ಅಭಿವೃದ್ದಿಗಾಗಿ ಮತ್ತೊಮ್ಮೆ ಬಿಜೆಪಿಗೆ ಮತ ಹಾಕಿ ಗೆಲ್ಲಿಸಿ ತರಬೇಕು ಎಂದು ಕೋರಿದರು.

ಇದನ್ನೂ ಓದಿ: Koppala News: ಕಡೇಬಾಗಿಲು ಗ್ರಾಮದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳ 28 ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ‌. ಪ್ರತಿಯೊಂದು ಸೀಟು ಮುಖ್ಯವಾಗಿದೆ. ನನ್ನ ಅವಧಿಯಲ್ಲಿ ಯಾದಗಿರಿ ಜಿಲ್ಲೆಯ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ, ಕುಡಿಯುವ ನೀರು ಸೇರಿದಂತೆ ಅನೇಕ ಕೆಲಸ ಮಾಡಿದ್ದೇನೆ. ಇನ್ನೂ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುವ ಕನಸು ಕಟ್ಟಿಕೊಂಡಿದ್ದು, ಮತ್ತೆ ನನ್ನನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ‌. ಯಾದಗಿರಿ ಮೆಡಿಕಲ್ ಕಾಲೇಜು ಆರಂಭಕ್ಕೆ ಸಂಸದರು ಹೆಚ್ಚಿನ ಶ್ರಮವಹಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಎಂಜಿನಿಯರ್‌ ಕಾಲೇಜು ಸೇರಿ ಅನೇಕ ಅಭಿವೃದ್ಧಿ ಆಗಬೇಕಿದ್ದು, ಹೀಗಾಗಿ ಮತ್ತೆ ಸಂಸದರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ತರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Karnataka Weather: ಈ ಯುಗಾದಿವರೆಗೂ ಬೆಂಗಳೂರಲ್ಲಿ ಇಳಿಯಲ್ಲ ಟೆಂಪ್ರೇಚರ‍್ರು! ಹಬ್ಬದ ಬಳಿಕವೇ ಮಳೆ!

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ, ಬಿಜೆಪಿ ಮುಖಂಡರಾದ ಡಾ‌.ಶರಣಭೂಪಾಲರೆಡ್ಡಿ ನಾಯ್ಕಲ್, ಸಿದ್ದಣ್ಣಗೌಡ ಕಾಡಂನೋರ್, ದೇವೇಂದ್ರನಾಥ್ ನಾದ್, ಸದಾಶಿವಪ್ಪಗೌಡ ರೊಟ್ನಡಗಿ, ಉಮಾಕಾಂತರೆಡ್ಡಿ ನಾಯ್ಕಲ್, ಲಿಂಗಪ್ಪ ಹತ್ತಿಮನಿ, ಖಂಡಪ್ಪ ದಾಸನ್, ಬಸವರಾಜ ಸೊನ್ನದ ವಡಗೇರಾ, ರಮೇಶ್ ದೊಡ್ಡಮನಿ , ರಾಜಶೇಖರ ಕಾಡಂನೋರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version