ಯಾದಗಿರಿ: ಡೆಂಗ್ಯೂ ಪ್ರಕರಣಗಳಿಗೆ ಕಡಿವಾಣ ಹಾಕಲು ಗ್ರಾಮ ಪಂಚಾಯಿತಿ ವತಿಯಿಂದ ಸೊಳ್ಳೆ ಪರದೆ ವಿತರಣೆ ಮಾಡುತ್ತಿದ್ದು ಸೊಳ್ಳೆ ಪರದೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ (Yadgiri News) ತಿಳಿಸಿದರು.
ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನಿಧಿಯಿಂದ ಬಾಣಂತಿಯರಿಗೆ ಸೊಳ್ಳೆ ಪರದೆ ವಿತರಣೆ ಮಾಡಿ, ಬಳಿಕ ಮಾತನಾಡಿದ ಅವರು, ಮಳೆಗಾಲದಲ್ಲಿ ಸೊಳ್ಳೆಗಳ ಉತ್ತತ್ತಿ ಹೆಚ್ಚಾಗಲಿವೆ. ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರ ಬರಲಿದೆ. ಪ್ರತಿಯೊಬ್ಬರೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಮನೆ ಸುತ್ತಲೂ ಸ್ವಚ್ಚತೆ ಇಟ್ಟುಕೊಳ್ಳಬೇಕು. ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಕಾಯಿಸಿ ಆರಿಸಿದ ನೀರು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: Reliance Industries: ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ತ್ರೈಮಾಸಿಕ ಫಲಿತಾಂಶ ಪ್ರಕಟ; 17,448 ಕೋಟಿ ರೂ. ಲಾಭ
ಬಾಣಂತಿ ಹಾಗೂ ಮಗುವಿನ ಕಾಳಜಿ ವಹಿಸಿ ತಾಲೂಕಿನ ವರ್ಕನಳ್ಳಿ, ಅಲ್ಲಿಪುರ ಸಣ್ಣ ತಾಂಡಾ, ಅಲ್ಲಿಪುರ ಗ್ರಾಮದಲ್ಲಿ ಸೊಳ್ಳೆ ಪರದೆಗಳನ್ನು ವಿತರಣೆ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರಿಗೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ಗ್ರಾಮೀಣ ಭಾಗದ ಬಾಣಂತಿಯರಿಗೆ ಸೊಳ್ಳೆ ಪರದೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪೋಷಕರು ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಿದೆ. ಮಕ್ಕಳಿಗೆ ಸೊಳ್ಳೆಗಳ ಕಡಿತವಾಗದಂತೆ ಮುಂಜಾಗ್ರತೆ ವಹಿಸಬೇಕಿದೆ. ಸ್ವಚ್ಛತೆ ಕಾಪಾಡಿದರೆ ಡೆಂಗ್ಯೂ ಪ್ರಕರಣಗಳನ್ನು ಕಡಿವಾಣ ಹಾಕಬಹುದು, ಪ್ರತಿಯೊಬ್ಬರೂ ಇದರ ಬಗ್ಗೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದರು.
ಇದನ್ನೂ ಓದಿ: Vijayanagara News: ಹಗರಿಬೊಮ್ಮನಹಳ್ಳಿ; ಮಾಲವಿ ಜಲಾಶಯ ಪರಿಶೀಲಿಸಿದ ಡಿಸಿ ಎಂ.ಎಸ್.ದಿವಾಕರ್
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠ್ಠಲ ರಾಠೋಡ, ಪಿಡಿಓ ವಿಜಯಲಕ್ಷ್ಮಿ, ಶಂಕರಲಿಂಗಮ್ಮ, ಅನಸರ್ ಪಟೇಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.